ಧರ್ಮೋಪದೇಶಕಾಂಡ 14:22 - ಪರಿಶುದ್ದ ಬೈಬಲ್22 “ಪ್ರತಿ ವರ್ಷ ನಿಮ್ಮ ಹೊಲದ ಬೆಳೆಯಲ್ಲಿ ಹತ್ತನೆಯ ಒಂದು ಅಂಶವನ್ನು ಪ್ರತ್ಯೇಕಿಸಿಡಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಪ್ರತಿವರ್ಷದ ನಿಮ್ಮ ಹೊಲದ ಬೆಳೆಯಲ್ಲಿ ದಶಮ ಭಾಗವನ್ನು ಪ್ರತ್ಯೇಕಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 “ಪ್ರತಿ ವರ್ಷದ ನಿಮ್ಮ ಹೊಲದ ಬೆಳೆಯಲ್ಲಿ ದಶಮಭಾಗವನ್ನು ಪ್ರತ್ಯೇಕಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಪ್ರತಿವರುಷದ ನಿಮ್ಮ ಹೊಲದ ಬೆಳೆಯಲ್ಲಿ ದಶಮಭಾಗವನ್ನು ಪ್ರತ್ಯೇಕಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ನೀವು ಬಿತ್ತುವ ಹೊಲದಲ್ಲಿ ವರ್ಷ ವರ್ಷಕ್ಕೆ ಬರುವ ಹುಟ್ಟುವಳಿಯಿಂದ ದಶಮಾಂಶವನ್ನು ತಪ್ಪದೆ ಕೊಡಬೇಕು. ಅಧ್ಯಾಯವನ್ನು ನೋಡಿ |
ಸರ್ವಶಕ್ತನಾದ ಯೆಹೋವನು ಹೇಳುವುದೇನೆಂದರೆ, “ನೀವು ಈ ಪರೀಕ್ಷೆ ಮಾಡಿನೋಡಿ. ನಿಮ್ಮ ವಸ್ತುಗಳ ಹತ್ತನೇ ಒಂದು ಅಂಶವನ್ನು ನನಗೆ ತೆಗೆದುಕೊಂಡು ಬನ್ನಿರಿ. ಅವುಗಳನ್ನು ಆಲಯದ ಬಂಡಾರದೊಳಗೆ ಹಾಕಿರಿ. ನನ್ನ ಮನೆಗೆ ನೀವು ಆಹಾರ ವಸ್ತುಗಳನ್ನು ತನ್ನಿರಿ. ನನ್ನನ್ನು ಪರೀಕ್ಷಿಸಿರಿ. ನೀವು ಹೀಗೆ ಮಾಡುವುದಾದರೆ ಖಂಡಿತವಾಗಿಯೂ ನಾನು ನಿಮ್ಮನ್ನು ಆಶೀರ್ವದಿಸುವೆನು. ಆಕಾಶದಿಂದ ಮಳೆ ಸುರಿಯುವ ಹಾಗೆ ನಿಮಗೆ ಶುಭವು ಸುರಿಯುವವು. ನಿಮ್ಮ ಮನೆಯಲ್ಲಿ ಬೇಕಾಗಿರುವದಕ್ಕಿಂತ ಹೆಚ್ಚು ಯಾವಾಗಲೂ ಇರುವದು.