Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 14:23 - ಪರಿಶುದ್ದ ಬೈಬಲ್‌

23 ನಿಮ್ಮ ದೇವರಾದ ಯೆಹೋವನು ತನ್ನ ವಿಶೇಷ ವಾಸಸ್ಥಾನವಾಗಿ ಯಾವ ಸ್ಥಳವನ್ನು ಆರಿಸಿಕೊಳ್ಳುತ್ತಾನೋ ಆ ಸ್ಥಳಕ್ಕೆ ನೀವು ಹೋಗಬೇಕು. ನಿಮ್ಮ ದೇವರಾದ ಯೆಹೋವನ ಜೊತೆಯಲ್ಲಿರುವುದಕ್ಕಾಗಿ ನೀವು ಅಲ್ಲಿಗೆ ಹೋಗಬೇಕು. ಆ ಸ್ಥಳದಲ್ಲಿ, ನೀವು ಬೆಳೆಯುವ ಬೆಳೆಗಳಲ್ಲಿ ಹತ್ತನೆ ಒಂದು ಭಾಗವನ್ನು, ನಿಮ್ಮ ಧಾನ್ಯಗಳಲ್ಲಿ ಹತ್ತನೆ ಒಂದು ಭಾಗವನ್ನು, ನಿಮ್ಮ ಹೊಸ ದ್ರಾಕ್ಷಾರಸವನ್ನು, ನಿಮ್ಮ ಎಣ್ಣೆಯನ್ನು, ನಿಮ್ಮ ಹಿಂಡುಗಳ ಮತ್ತು ಮಂದೆಗಳ ಚೊಚ್ಚಲು ಪಶುಗಳನ್ನು ಯೆಹೋವನ ಪ್ರಸನ್ನತೆಯಲ್ಲಿ ತಿನ್ನಬೇಕು. ನಿಮ್ಮ ದೇವರಾದ ಯೆಹೋವನನ್ನು ಗೌರವಿಸಬೇಕೆಂಬುದನ್ನು ನೀವು ಯಾವಾಗಲೂ ಈ ರೀತಿಯಲ್ಲಿ ಜ್ಞಾಪಕ ಮಾಡಿಕೊಳ್ಳುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಧಾನ್ಯ, ದ್ರಾಕ್ಷಿ, ಎಣ್ಣೆ ಇವುಗಳಲ್ಲಿ ದಶಮಭಾಗವನ್ನೂ ದನಕುರಿಗಳ ಚೊಚ್ಚಲು ಮರಿಗಳನ್ನೂ ಮತ್ತು ನಿಮ್ಮ ಹಿಂಡುಗಳನ್ನು ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ಆತನು ತನ್ನ ಹೆಸರನ್ನು ಸ್ಥಾಪಿಸಿಕೊಳ್ಳುವುದಕ್ಕೆ ಆರಿಸಿಕೊಳ್ಳುವ ಸ್ಥಳದಲ್ಲೇ ನೀವು ತಿನ್ನಬೇಕು. ಹೀಗೆ ನಿಮ್ಮ ದೇವರಾದ ಯೆಹೋವನಲ್ಲೇ ಯಾವಾಗಲೂ ಭಯಭಕ್ತಿಯುಳ್ಳವರಾಗಿ ಇರುವುದನ್ನು ಅಭ್ಯಾಸ ಮಾಡಿಕೊಳ್ಳುವವರಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಧಾನ್ಯ, ದ್ರಾಕ್ಷಿ, ಎಣ್ಣೆ ಇವುಗಳಲ್ಲಿ ದಶಮಭಾಗವನ್ನು ಹಾಗು ದನಕುರಿಗಳ ಚೊಚ್ಚಲು ಮರಿಗಳನ್ನು ನಿಮ್ಮ ದೇವರಾದ ಸರ್ವೇಶ್ವರನ ಸನ್ನಿಧಿಯಲ್ಲಿ, ಅವರು ತಮ್ಮ ಹೆಸರನ್ನು ಸ್ಥಾಪಿಸಿಕೊಳ್ಳುವುದಕ್ಕೆ ಆರಿಸಿಕೊಳ್ಳುವ ಸ್ಥಳದಲ್ಲೇ, ನೀವು ತಿನ್ನಬೇಕು. ಹೀಗೆ ನಿಮ್ಮ ದೇವರಾದ ಸರ್ವೇಶ್ವರನಲ್ಲೇ ಯಾವಾಗಲು ಭಯಭಕ್ತಿಯುಳ್ಳವರಾಗಿ ಇರುವುದನ್ನು ಅಭ್ಯಾಸಮಾಡಿಕೊಳ್ಳುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಧಾನ್ಯ, ದ್ರಾಕ್ಷೆ, ಎಣ್ಣೆ ಇವುಗಳಲ್ಲಿ ದಶಮಭಾಗವನ್ನೂ ದನಕುರಿಗಳ ಚೊಚ್ಚಲುಮರಿಗಳನ್ನೂ ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ಆತನು ತನ್ನ ಹೆಸರನ್ನು ಸ್ಥಾಪಿಸಿಕೊಳ್ಳುವದಕ್ಕೆ ಆದುಕೊಳ್ಳುವ ಸ್ಥಳದಲ್ಲೇ ನೀವು ತಿನ್ನಬೇಕು. ಹೀಗೆ ನಿಮ್ಮ ದೇವರಾದ ಯೆಹೋವನಲ್ಲೇ ಯಾವಾಗಲೂ ಭಯಭಕ್ತಿಯುಳ್ಳವರಾಗಿರುವದನ್ನು ಅಭ್ಯಾಸಮಾಡಿಕೊಳ್ಳುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ನಿಮ್ಮ ಧಾನ್ಯ, ಹೊಸ ದ್ರಾಕ್ಷಾರಸ, ಓಲಿವ್ ಎಣ್ಣೆಗಳ ದಶಮಾಂಶವನ್ನೂ ನಿಮ್ಮ ದನಕುರಿಗಳಲ್ಲಿ ಚೊಚ್ಚಲುಗಳನ್ನೂ ನಿಮ್ಮ ದೇವರಾದ ಯೆಹೋವ ದೇವರ ಮುಂದೆ ತಮ್ಮ ಹೆಸರನ್ನು ಸ್ಥಾಪಿಸಿಕೊಳ್ಳುವುದಕ್ಕೆ ದೇವರೇ ಆಯ್ದುಕೊಂಡ ಸ್ಥಳದಲ್ಲಿ ತಿನ್ನಬೇಕು. ಇದರಿಂದ ನೀವು ನಿಮ್ಮ ದೇವರಾದ ಯೆಹೋವ ದೇವರಿಗೆ ಎಂದೆಂದಿಗೂ ಭಯಭಕ್ತಿಯುಳ್ಳವರಾಗಿ ಇರುವುದನ್ನು ಕಲಿಯುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 14:23
12 ತಿಳಿವುಗಳ ಹೋಲಿಕೆ  

ಸೀನಾಯಿ ಬೆಟ್ಟದ ಬಳಿಯಲ್ಲಿ ನೀನು ಯೆಹೋವನ ಸನ್ನಿಧಾನದಲ್ಲಿ ನಿಂತಿದ್ದನ್ನು ನೀವು ಜ್ಞಾಪಕ ಮಾಡಿಕೊಳ್ಳಿರಿ. ಆತನು ನನಗೆ ಹೇಳಿದ್ದೇನೆಂದರೆ: ‘ನಾನು ಹೇಳುವ ಮಾತುಗಳನ್ನು ಕೇಳುವಂತೆ ಜನರನ್ನೆಲ್ಲಾ ಒಟ್ಟುಗೂಡಿಸು. ನನ್ನ ಮಾತುಗಳನ್ನು ಕೇಳಿ ಅವರು ಜೀವಮಾನವೆಲ್ಲಾ ನನ್ನನ್ನು ಸನ್ಮಾನಿಸಲು ಮತ್ತು ಭಯಭಕ್ತಿಯಿಂದಿರಲು ಕಲಿತುಕೊಳ್ಳುವರು ಮತ್ತು ಅವರ ಮಕ್ಕಳಿಗೂ ಕಲಿಸುವರು.’


ನೀವು ಕಣದಲ್ಲಿರುವ ಗೋಧಿಯಲ್ಲಿ ಪ್ರಥಮಫಲವನ್ನು ಯೆಹೋವನಿಗೆ ಕಾಣಿಕೆಯಾಗಿ ಕೊಡುವಂತೆಯೇ ನೀವು ಪ್ರಥಮವಾಗಿ ನಾದಿದ ಹಿಟ್ಟಿನಿಂದ ಒಂದು ರೊಟ್ಟಿಯನ್ನು ಯೆಹೋವನಿಗೆ ಕಾಣಿಕೆಯಾಗಿ ಕೊಡಬೇಕು.


ಯೆಹೋವನಿಗೆ ಭಯಭಕ್ತಿಯಿಂದ ವಿಧೇಯರಾಗಿರಿ, ನಡುಗುತ್ತಾ ಉಲ್ಲಾಸಪಡಿರಿ.


ಯೆಹೋವನ ಮೇಲಿರುವ ಭಯಭಕ್ತಿಗಳಿಂದಲೇ ಜ್ಞಾನವು ಆರಂಭವಾಗುತ್ತದೆ. ಆತನಲ್ಲಿ ಭಯಭಕ್ತಿಯುಳ್ಳವರು ಜ್ಞಾನಪೂರ್ಣರಾಗಿದ್ದಾರೆ. ಆತನಿಗೆ ಸದಾಕಾಲ ಸ್ತೋತ್ರವಾಗಲಿ.


ಯೆಹೋವನು ತನ್ನನ್ನು ಆರಾಧಿಸುವ ಜನರಲ್ಲೇ ಸಂತೋಷಪಡುವನು. ಆತನು ತನ್ನ ಶಾಶ್ವತ ಪ್ರೀತಿಯಲ್ಲಿ ಭರವಸವಿಟ್ಟಿರುವವರನ್ನು ಮೆಚ್ಚಿಕೊಳ್ಳುವನು.


“ಸರ್ವಶಕ್ತನಾದ ಯೆಹೋವನೊಬ್ಬನಿಗೇ ನೀನು ಭಯಪಡಬೇಕು. ಆತನನ್ನೇ ನೀನು ಗೌರವಿಸಬೇಕು. ನೀನು ಭಯಪಡಬೇಕಾದದ್ದು ಆತನೊಬ್ಬನಿಗೇ.


ಇಸ್ರೇಲರು ಮತ್ತು ಯೆಹೂದ್ಯರು ನನ್ನ ಭಕ್ತರಾಗಿರುವರು, ನಾನು ಅವರ ದೇವರಾಗಿರುವೆನು.


ಆಗ ನಿಮ್ಮ ಯೆಹೋವನು ತನ್ನ ಹೆಸರಿಗಾಗಿ ಒಂದು ಸ್ಥಳವನ್ನು ಆರಿಸಿಕೊಳ್ಳುವನು. ಆ ಸ್ಥಳಕ್ಕೆ ನೀವು ನಿಮ್ಮ ಸರ್ವಾಂಗಹೋಮಗಳನ್ನು ಮತ್ತು ಯಜ್ಞಾದಿಗಳನ್ನು ಸಮರ್ಪಿಸಬೇಕು; ನಿಮ್ಮ ಹರಕೆಯ ಕಾಣಿಕೆಗಳನ್ನು, ಚೊಚ್ಚಲ ಪಶುಗಳನ್ನು, ದಶಾಂಶವನ್ನು ಸಲ್ಲಿಸಬೇಕು.


ಯೆಹೋವನು ತನ್ನ ವಿಶೇಷವಾದ ಸ್ಥಳವನ್ನು ನಿಮ್ಮ ಕುಲಗಳವರ ಮಧ್ಯದಿಂದ ಆರಿಸಿಕೊಳ್ಳುವನು. ನಿಮ್ಮ ಸರ್ವಾಂಗಹೋಮಗಳನ್ನು ಮತ್ತು ನಾನು ನಿಮಗೆ ಹೇಳಿದವುಗಳೆಲ್ಲವನ್ನು ಅದೇ ಸ್ಥಳದಲ್ಲಿ ಮಾಡಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು