Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 14:24 - ಪರಿಶುದ್ದ ಬೈಬಲ್‌

24 ಒಂದುವೇಳೆ ಆ ವಿಶೇಷ ಸ್ಥಳವು ನೀವು ಪ್ರಯಾಣ ಮಾಡಲಾರದಷ್ಟು ದೂರವಾಗಿದ್ದರೆ, ಯೆಹೋವನು ಆಶೀರ್ವದಿಸಿದ ನಿಮ್ಮ ಎಲ್ಲಾ ಬೆಳೆಗಳಲ್ಲಿ ದಶಾಂಶವನ್ನು ಅಲ್ಲಿಗೆ ಕೊಂಡೊಯ್ಯಲು ಸಾಧ್ಯವಾಗದಿದ್ದಲ್ಲಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ನಿಮ್ಮ ದೇವರಾದ ಯೆಹೋವನು ಆರಿಸಿಕೊಳ್ಳುವ ಸ್ಥಳವು ನಿಮಗೆ ದೂರವಾಗಿದ್ದು, ಆ ಕಾಣಿಕೆಗಳನ್ನು ಅಷ್ಟು ದೂರ ಹೊತ್ತುಕೊಂಡು ಹೋಗುವುದು ಅಸಾಧ್ಯವಾದರೆ, ನಿಮ್ಮ ದೇವರಾದ ಯೆಹೋವನು ನಿಮಗೆ ಅಭಿವೃದ್ಧಿಯನ್ನು ಉಂಟುಮಾಡಿದ ಕಾಲದಲ್ಲಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 “ನಿಮ್ಮ ದೇವರಾದ ಸರ್ವೇಶ್ವರ ಆರಿಸಿಕೊಳ್ಳುವ ಸ್ಥಳ ನಿಮಗೆ ದೂರವಾಗಿದ್ದು, ಆ ಕಾಣಿಕೆಗಳನ್ನು ಅಷ್ಟು ದೂರ ಹೊತ್ತುಕೊಂಡು ಹೋಗುವುದು ಅಸಾಧ್ಯವಾದರೆ, ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಅಭಿವೃದ್ಧಿಯನ್ನುಂಟುಮಾಡುವ ಕಾಲದಲ್ಲಿ ಅವುಗಳನ್ನು ಮಾರಿಬಿಡಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ನಿಮ್ಮ ದೇವರಾದ ಯೇಹೋವನು ಆದುಕೊಳ್ಳುವ ಸ್ಥಳವು ನಿಮಗೆ ದೂರವಾಗಿದ್ದು ಆ ಕಾಣಿಕೆಗಳನ್ನು ಅಷ್ಟು ದೂರ ಹೊತ್ತುಕೊಂಡು ಹೋಗುವದು ಅಸಾಧ್ಯವಾದರೆ ನಿಮ್ಮ ದೇವರಾದ ಯೆಹೋವನು ನಿಮಗೆ ಅಭಿವೃದ್ಧಿಯನ್ನುಂಟುಮಾಡಿದ ಕಾಲದಲ್ಲಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ನೀವು ಕಾಣಿಕೆಗಳನ್ನು ತೆಗೆದುಕೊಂಡು ಹೋಗುವುದಕ್ಕೆ ನಿಮಗೆ ದಾರಿ ದೂರವಾಗಿದ್ದರೆ, ಅಥವಾ ನಿಮ್ಮ ದೇವರಾದ ಯೆಹೋವ ದೇವರು ತಮ್ಮ ಹೆಸರನ್ನು ಸ್ಥಾಪಿಸುವುದಕ್ಕೆ ಆಯ್ದುಕೊಂಡ ಸ್ಥಳವು ನಿಮಗೆ ದೂರವಾಗಿದ್ದರೆ, ನಿಮ್ಮ ದೇವರಾದ ಯೆಹೋವ ದೇವರು ನಿಮ್ಮನ್ನು ಆಶೀರ್ವದಿಸಿದ ಕಾಲದಲ್ಲಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 14:24
5 ತಿಳಿವುಗಳ ಹೋಲಿಕೆ  

ನಿಮ್ಮ ದೇವರಾದ ಯೆಹೋವನು ನಿಮ್ಮ ಕುಲದವರ ಪ್ರಾಂತ್ಯಗಳಿಂದ ಒಂದು ವಿಶೇಷ ಸ್ಥಳವನ್ನು ಆರಿಸಿಕೊಂಡು ಅದಕ್ಕೆ ತನ್ನ ಹೆಸರಿಡುವನು. ಅಲ್ಲಿ ಆತನ ಆಲಯ ಕಟ್ಟಲ್ಪಡುವುದು. ಆತನನ್ನು ಆರಾಧಿಸಲು ನೀವು ಅಲ್ಲಿಗೆ ಹೋಗಬೇಕು.


ನೀವು ಹೆಜ್ಜೆಯಿಡುವ ಭೂಮಿಯೆಲ್ಲಾ ನಿಮ್ಮದಾಗುವುದು. ದಕ್ಷಿಣದ ಮರುಭೂಮಿಯಿಂದ ಹಿಡಿದು ಉತ್ತರದ ಲೆಬನೋನಿನ ತನಕ, ಪೂರ್ವದಲ್ಲಿರುವ ಯೂಫ್ರೇಟೀಸ್ ನದಿಯಿಂದ ಪಶ್ಟಿಮದ ಭೂಮಧ್ಯಸಮುದ್ರ ತೀರದ ತನಕ ವಿಸ್ತಾರವಾಗಿದೆ.


“ಕೆಂಪುಸಮುದ್ರದಿಂದ ಯೂಫ್ರೇಟೀಸ್ ನದಿಯವರೆಗೆ ಇರುವ ಪ್ರದೇಶವನ್ನೆಲ್ಲಾ ಕೊಡುವೆನು. ಪಶ್ಚಿಮ ಗಡಿಯು ಫಿಲಿಷ್ಟಿಯ ಸಮುದ್ರವಾಗಿರುವುದು (ಮೆಡಿಟರೇನಿಯನ್ ಸಮುದ್ರ) ಮತ್ತು ಪೂರ್ವ ಗಡಿಯು ಅರೇಬಿಯಾ ಮರುಭೂಮಿಯಾಗಿರುವುದು. ನೀವು ಅಲ್ಲಿ ವಾಸಿಸುವ ಜನರನ್ನು ಸೋಲಿಸುವಂತೆ ನಾನು ಮಾಡುವೆನು; ಅವರೆಲ್ಲರನ್ನು ನೀವು ಬಲವಂತವಾಗಿ ಹೊರಗಟ್ಟುವಿರಿ.


ದಶಾಂಶದ ಆ ಬೆಳೆಗಳನ್ನು ಮಾರಿ, ಬಂದ ಹಣವನ್ನು ಯೆಹೋವನು ಆರಿಸಿಕೊಂಡಿರುವ ವಿಶೇಷ ಸ್ಥಳಕ್ಕೆ ತೆಗೆದುಕೊಂಡು ಹೋಗಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು