ಧರ್ಮೋಪದೇಶಕಾಂಡ 14:29 - ಪರಿಶುದ್ದ ಬೈಬಲ್29 ಇದು ಲೇವಿಯರಿಗಾಗಿ. ಯಾಕೆಂದರೆ ಅವರಿಗೆ ಸ್ವಂತ ಭೂಮಿ ಇಲ್ಲವಲ್ಲಾ. ಅಲ್ಲದೆ ಈ ಧಾನ್ಯವನ್ನು ನಿಮ್ಮ ಊರಲ್ಲಿರುವ ಬಡಜನರಿಗೋಸ್ಕರವಾಗಿಯೂ ಪರದೇಶಿಗಳಿಗಾಗಿಯೂ ವಿಧವೆಯರಿಗಾಗಿಯೂ ಅನಾಥ ಮಕ್ಕಳಿಗಾಗಿಯೂ ಉಪಯೋಗಿಸಬೇಕು. ಅವರು ಬಂದು ಊಟಮಾಡಿ ತೃಪ್ತರಾಗಲಿ. ನೀವು ಹೀಗೆ ಮಾಡಿದರೆ ನಿಮ್ಮ ದೇವರಾದ ಯೆಹೋವನು ನಿಮ್ಮ ಕಾರ್ಯಗಳನ್ನೆಲ್ಲಾ ಸಫಲಪಡಿಸಿ ಆಶೀರ್ವದಿಸುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201929 ಆಗ ಊರಿನಲ್ಲಿರುವ ಅನ್ಯದೇಶದವರೂ, ಅನಾಥರು, ವಿಧವೆಯರೂ ಮತ್ತು ನಿಮ್ಮೊಡನೆ ಸ್ವತ್ತನ್ನು ಹೊಂದದೆಹೋದ ಲೇವಿಯರೂ ಊಟಮಾಡಿ ಸಂತೋಷವಾಗಿರಲಿ. ನೀವು ಹೀಗೆ ನಡೆದುಕೊಂಡರೆ ನಿಮ್ಮ ದೇವರಾದ ಯೆಹೋವನು ನಿಮ್ಮ ಎಲ್ಲಾ ಪ್ರಯತ್ನಗಳನ್ನು ಸಫಲಮಾಡುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)29 ಆಗ ಊರಲ್ಲಿರುವ ಅನ್ಯದೇಶದವರು, ತಾಯಿತಂದೆಯಿಲ್ಲದವರು, ವಿಧವೆಯರು ಹಾಗು ನಿಮ್ಮ ಹಾಗೆ ಸ್ವಂತ ಸೊತ್ತು ಹೊಂದದೆಯಿರುವ ಲೇವಿಯರೂ ಉಂಡು ಸಂತೋಷವಾಗಿರುವರು. ನೀವು ಹೀಗೆ ನಡೆದುಕೊಂಡರೆ ನಿಮ್ಮ ದೇವರಾದ ಸರ್ವೇಶ್ವರ ನಿಮ್ಮ ಎಲ್ಲ ಪ್ರಯತ್ನಗಳನ್ನು ಸಫಲಗೊಳಿಸುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)29 ಆಗ ಊರಲ್ಲಿರುವ ಅನ್ಯದೇಶದವರೂ ತಾಯಿತಂದೆಯಿಲ್ಲದವರೂ ವಿಧವೆಯರೂ ನಿಮ್ಮೊಡನೆ ಸ್ವಾಸ್ತ್ಯವನ್ನು ಹೊಂದದೆಹೋದ ಲೇವಿಯರೂ ಉಂಡು ಸಂತೋಷವಾಗಿರಲಿ. ನೀವು ಹೀಗೆ ನಡೆದುಕೊಂಡರೆ ನಿಮ್ಮ ದೇವರಾದ ಯೆಹೋವನು ನಿಮ್ಮ ಎಲ್ಲಾ ಪ್ರಯತ್ನಗಳನ್ನು ಸಫಲಮಾಡುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ29 ಆಗ ನಿಮ್ಮ ಸಂಗಡ ಪಾಲನ್ನೂ, ಸೊತ್ತನ್ನೂ ಹೊಂದದ ಲೇವಿಯರೂ, ನಿಮ್ಮ ಊರಲ್ಲಿರುವ ಅನ್ಯದೇಶದವರೂ, ದಿಕ್ಕಿಲ್ಲದವರೂ, ವಿಧವೆಯರೂ ಬಂದು ತಿಂದು ತೃಪ್ತರಾಗಲಿ. ಆಗ ನಿಮ್ಮ ದೇವರಾದ ಯೆಹೋವ ದೇವರು ನಿಮ್ಮನ್ನೂ, ನೀವು ಮಾಡುವ ಎಲ್ಲಾ ಪ್ರಯತ್ನಗಳನ್ನೂ ಆಶೀರ್ವದಿಸುವರು. ಅಧ್ಯಾಯವನ್ನು ನೋಡಿ |