Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 15:10 - ಪರಿಶುದ್ದ ಬೈಬಲ್‌

10 “ಆ ಬಡ ಮನುಷ್ಯನಿಗೆ ನಿಮ್ಮಿಂದ ಎಷ್ಟು ಸಹಾಯ ಮಾಡಲು ಸಾಧ್ಯವಿದೆಯೋ ಅಷ್ಟು ಸಹಾಯಮಾಡಿ; ಕೊಡುವುದಕ್ಕೆ ಬೇಸರಪಡಬೇಡಿ. ಯಾಕೆಂದರೆ ನಿಮ್ಮ ದೇವರಾದ ಯೆಹೋವನು ನಿಮ್ಮ ಒಳ್ಳೆಯ ಕಾರ್ಯಗಳಿಗಾಗಿ ನಿಮ್ಮನ್ನು ಆಶೀರ್ವದಿಸುವನು; ನಿಮ್ಮ ಕೆಲಸವನ್ನೆಲ್ಲಾ ಸಫಲಪಡಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ನೀವು ಕೊಡುವಾಗ ಬೇಸರಗೊಳ್ಳದೆ ಉದಾರವಾದ ಮನಸ್ಸಿನಿಂದಲೇ ಕೊಡಬೇಕು. ಇದರಿಂದ ನಿಮ್ಮ ದೇವರಾದ ಯೆಹೋವನು ನಿಮ್ಮ ಎಲ್ಲಾ ಕೆಲಸಗಳಲ್ಲಿಯೂ ಮತ್ತು ಪ್ರಯತ್ನಗಳಲ್ಲಿಯೂ ನಿಮ್ಮನ್ನು ಅಭಿವೃದ್ಧಿಪಡಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಕೊಡುವಾಗ ನೀವು ಬೇಸರಗೊಳ್ಳದೆ ಉದಾರ ಮನಸ್ಸಿನಿಂದಲೇ ಕೊಡಬೇಕು. ಇದರಿಂದ ನಿಮ್ಮ ದೇವರಾದ ಸರ್ವೇಶ್ವರ ನಿಮ್ಮ ಕೆಲಸಕಾರ್ಯಗಳಲ್ಲೂ ಪ್ರಯತ್ನಗಳಲ್ಲೂ ನಿಮ್ಮನ್ನು ಅಭಿವೃದ್ಧಿಪಡಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ನೀವು ಕೊಡುವಾಗ ಬೇಸರಗೊಳ್ಳದೆ ಉದಾರವಾದ ಮನಸ್ಸಿನಿಂದಲೇ ಕೊಡಬೇಕು. ಇದರಿಂದ ನಿಮ್ಮ ದೇವರಾದ ಯೆಹೋವನು ನಿಮ್ಮ ಎಲ್ಲಾ ಕೆಲಸಗಳಲ್ಲಿಯೂ ಪ್ರಯತ್ನಗಳಲ್ಲಿಯೂ ನಿಮ್ಮನ್ನು ಅಭಿವೃದ್ಧಿಪಡಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಕೊಡುವಾಗ ಬೇಸರಗೊಳ್ಳದೇ ಉದಾರಮನಸ್ಸಿನಿಂದ ಕೊಡಿರಿ. ಏಕೆಂದರೆ ಇದಕ್ಕೋಸ್ಕರವೇ ನಿಮ್ಮ ದೇವರಾದ ಯೆಹೋವ ದೇವರು ನಿಮ್ಮನ್ನು ನಿಮ್ಮ ಎಲ್ಲಾ ಕೆಲಸಗಳಲ್ಲಿಯೂ, ನೀವು ಕೈಹಾಕುವುದೆಲ್ಲದರಲ್ಲಿಯೂ ಆಶೀರ್ವದಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 15:10
21 ತಿಳಿವುಗಳ ಹೋಲಿಕೆ  

ಉದಾರಿಯು ತನ್ನ ಆಹಾರವನ್ನು ಬಡವರೊಂದಿಗೆ ಹಂಚಿಕೊಳ್ಳುವುದರಿಂದ ಆಶೀರ್ವಾದ ಹೊಂದುವನು.


ಇದಲ್ಲದೆ ಪರೋಪಕಾರವನ್ನೂ ದಾನಧರ್ಮವನ್ನೂ ಮರೆಯದಿರಿ. ಇವೇ ದೇವರಿಗೆ ಸಮರ್ಪಕವಾದ ಯಜ್ಞಗಳು.


ಹಸಿದ ಜನರಿಗಾಗಿ ವ್ಯಸನಪಟ್ಟು ಅವರಿಗೆ ಆಹಾರವನ್ನು ಕೊಡಬೇಕು. ಸಂಕಷ್ಟ ಅನುಭವಿಸುವ ಜನರಿಗೆ ಸಹಾಯಮಾಡಿ ಅವರ ಕೊರತೆಗಳನ್ನು ನೀಗಿಸಬೇಕು. ಆಗ ನಿಮ್ಮ ಬೆಳಕು ಕತ್ತಲಲ್ಲಿ ಪ್ರಕಾಶಿಸುವದು. ನಿಮಗೆ ಆಗ ದುಃಖವಿರದು. ಮಧಾಹ್ನದ ಸೂರ್ಯನಂತೆ ನೀವು ಹೊಳೆಯುವಿರಿ.


ಇದು ಲೇವಿಯರಿಗಾಗಿ. ಯಾಕೆಂದರೆ ಅವರಿಗೆ ಸ್ವಂತ ಭೂಮಿ ಇಲ್ಲವಲ್ಲಾ. ಅಲ್ಲದೆ ಈ ಧಾನ್ಯವನ್ನು ನಿಮ್ಮ ಊರಲ್ಲಿರುವ ಬಡಜನರಿಗೋಸ್ಕರವಾಗಿಯೂ ಪರದೇಶಿಗಳಿಗಾಗಿಯೂ ವಿಧವೆಯರಿಗಾಗಿಯೂ ಅನಾಥ ಮಕ್ಕಳಿಗಾಗಿಯೂ ಉಪಯೋಗಿಸಬೇಕು. ಅವರು ಬಂದು ಊಟಮಾಡಿ ತೃಪ್ತರಾಗಲಿ. ನೀವು ಹೀಗೆ ಮಾಡಿದರೆ ನಿಮ್ಮ ದೇವರಾದ ಯೆಹೋವನು ನಿಮ್ಮ ಕಾರ್ಯಗಳನ್ನೆಲ್ಲಾ ಸಫಲಪಡಿಸಿ ಆಶೀರ್ವದಿಸುವನು.


“ನೀವು ಹೊಲದಲ್ಲಿ ಬೆಳೆದ ಬೆಳೆಯನ್ನು ಕೊಯ್ದು ಮನೆಗೆ ತರುವಾಗ ಕೆಲವು ಸಿವುಡುಗಳನ್ನು ನೀವು ಹೊಲದಲ್ಲಿಯೇ ಬಿಟ್ಟು ಬಂದಿದ್ದರೆ ಅದನ್ನು ತರಲು ಹಿಂದಕ್ಕೆ ಹೋಗಬೇಡಿ. ಅದನ್ನು ನಿಮ್ಮ ಊರಿನಲ್ಲಿರುವ ಅನಾಥರಿಗೂ ವಿಧವೆಯರಿಗೂ ಪರದೇಶಸ್ಥರಿಗೂ ಬಿಡಿರಿ. ನೀವು ಹಾಗೆ ಮಾಡಿದರೆ ದೇವರಾದ ಯೆಹೋವನು ನಿಮಗೆ ಶುಭವನ್ನು ಉಂಟುಮಾಡುವನು.


ಆದರೆ ಒಬ್ಬ ಒಳ್ಳೆಯ ನಾಯಕನು ಒಳ್ಳೆಯ ಕಾರ್ಯಗಳನ್ನು ಮಾಡಲು ಆಲೋಚಿಸುವನು. ಅಂಥವನು ಒಳ್ಳೆಯ ನಾಯಕನಾಗಿರುವನು.


ಕಷ್ಟಪಟ್ಟು ದುಡಿದು ದುರ್ಬಲರಿಗೆ ನೆರವಾಗಬೇಕೆಂದು ನಾನೇ ನಿಮಗೆ ಮಾದರಿಯಾಗಿ ತೋರಿಸಿಕೊಟ್ಟಿದ್ದೇನೆ. ‘ತೆಗೆದುಕೊಳ್ಳುವುದಕ್ಕಿಂತ ಕೊಡುವುದರಲ್ಲೇ ಹೆಚ್ಚು ಸಂತೋಷ’ ಎಂಬ ಯೇಸುವಿನ ಮಾತನ್ನು ನಾವು ಮರೆಯಕೂಡದೆಂದು ನಿಮಗೆ ಉಪದೇಶಿಸಿದೆನು” ಎಂದು ಹೇಳಿದನು.


ನಿಮ್ಮ ದೇಶದಲ್ಲಿ ಯಾರೂ ಬಡವರಾಗಿರಬಾರದು. ಯಾಕೆಂದರೆ ಯೆಹೋವನೇ ನಿಮಗೆ ಈ ದೇಶವನ್ನು ಕೊಡುತ್ತಿದ್ದಾನೆ; ಮತ್ತು ಯೆಹೋವನು ನಿಮ್ಮನ್ನು ಅಧಿಕವಾಗಿ ಆಶೀರ್ವದಿಸುತ್ತಾನೆ.


ಬೋಧಿಸುವವನು ದೇವರ ನುಡಿಗಳನ್ನೇ ಬೋಧಿಸಲಿ. ಸೇವೆ ಮಾಡುವವನು ದೇವರೇ ದಯಪಾಲಿಸಿದ ಶಕ್ತಿಯಿಂದ ಸೇವೆ ಮಾಡಲಿ. ನೀವು ಹೀಗೆ ಮಾಡಿದರೆ, ನೀವು ಮಾಡುವ ಪ್ರತಿಯೊಂದರಲ್ಲೂ ಯೇಸು ಕ್ರಿಸ್ತನ ಮೂಲಕ ದೇವರು ಸ್ತುತಿಸಲ್ಪಡುವನು. ಅಧಿಕಾರವೂ ಮಹಿಮೆಯೂ ಯುಗಯುಗಾಂತರಗಳಲ್ಲಿ ಆತನಿಗೆ ಸೇರಿದವುಗಳಾಗಿವೆ. ಆಮೆನ್.


ಉಪದೇಶಮಾಡುವ ವರವನ್ನು ಹೊಂದಿರುವವನು ಉಪದೇಶ ಮಾಡಬೇಕು. ಸಂತೈಸುವ ವರವನ್ನು ಹೊಂದಿರುವವನು ಬೇರೆಯವರನ್ನು ಸಂತೈಸಬೇಕು. ದಾನಮಾಡುವ ವರವನ್ನು ಹೊಂದಿರುವವನು ಉದಾರವಾಗಿ ಕೊಡಬೇಕು. ನಾಯಕತ್ವದ ವರವನ್ನು ಹೊಂದಿರುವವನು ನಾಯಕತ್ವವನ್ನು ವಹಿಸಿಕೊಂಡಿರುವಾಗ ಕಷ್ಟಪಟ್ಟು ದುಡಿಯಬೇಕು. ಕನಿಕರವನ್ನು ತೋರುವ ವರವನ್ನು ಹೊಂದಿರುವವನು ಆನಂದದಿಂದ ಆ ಕಾರ್ಯವನ್ನು ಮಾಡಬೇಕು.


“ಆಗ ರಾಜನು, ‘ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ನೀವು ಇಲ್ಲಿ ನನ್ನ ಜನರಿಗಾಗಿ ಏನೇನು ಮಾಡುತ್ತೀರೋ ಅದೆಲ್ಲವನ್ನು ನನಗೂ ಮಾಡಿದಂತಾಯಿತು’ ಎಂದು ಉತ್ತರಕೊಡುವನು.


“ರೆಕ್ಕೆಯುಳ್ಳ ಹುಳಗಳೆಲ್ಲಾ ಅಶುದ್ಧ. ಆದ್ದರಿಂದ ಅವುಗಳನ್ನು ತಿನ್ನಬೇಡಿ.


ಪರದೇಶಸ್ಥರಿಗೆ ನೀವು ಬಡ್ಡಿಗೆ ಸಾಲ ಕೊಡಬಹುದು. ಆದರೆ ಸ್ವದೇಶದವನಾದ ಇಸ್ರೇಲಿನವನಿಗೆ ಬಡ್ಡಿಗೆ ಸಾಲ ಕೊಡಬಾರದು. ನೀವು ಹೀಗೆ ಮಾಡಿದ್ದಲ್ಲಿ, ನೀವು ಹೋಗಿ ನೆಲೆಸುವ ದೇಶದಲ್ಲಿ ನೀವು ಮಾಡುವ ಪ್ರತಿಯೊಂದರಲ್ಲೂ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಆಶೀರ್ವದಿಸುವನು.


“ಯೆಹೋವನು ನಿಮ್ಮನ್ನು ಆಶೀರ್ವದಿಸಿ ನಿಮ್ಮ ಕಣಜಗಳನ್ನು ಆಶೀರ್ವದಿಸುವನು. ನೀವು ಮಾಡುವ ಕಾರ್ಯಗಳನ್ನೆಲ್ಲಾ ಆಶೀರ್ವದಿಸುವನು. ನಿಮಗೆ ಕೊಡುವ ದೇಶದಲ್ಲಿ ನೀವು ವಾಸಿಸುವಾಗ ನಿಮ್ಮನ್ನು ಆಶೀರ್ವದಿಸುವನು.


ನೀನು ಹೋದಲ್ಲೆಲ್ಲಾ ಒಳ್ಳೆಯದನ್ನೇ ಮಾಡು. ಸ್ವಲ್ಪಕಾಲದ ಮೇಲೆ, ನಿನ್ನ ಸತ್ಕ್ರಿಯೆಗಳ ಫಲವನ್ನು ಹೊಂದಿಕೊಳ್ಳುವೆ.


“ನಿಮ್ಮ ಗುಲಾಮರನ್ನು ಸ್ವತಂತ್ರರಾಗಿ ಬಿಡಬೇಕಲ್ಲಾ ಎಂದು ಬೇಸರಪಡಬೇಡಿ. ಅವರು ಅರ್ಧಕೂಲಿ ತೆಗೆದುಕೊಂಡು ಆರು ವರ್ಷ ನಿಮ್ಮ ಸೇವೆ ಮಾಡಿದ್ದಾರಲ್ಲಾ? ನಿಮ್ಮ ಕಾರ್ಯಗಳನ್ನೆಲ್ಲಾ ನಿಮ್ಮ ದೇವರಾದ ಯೆಹೋವನು ಸಫಲಪಡಿಸುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು