12 “ನೀವು ಹೀಬ್ರೂ ಮನುಷ್ಯನನ್ನೋ ಸ್ತ್ರೀಯನ್ನೋ ನಿಮ್ಮ ಗುಲಾಮರಾಗಿ ಕ್ರಯಕ್ಕೆ ತೆಗೆದುಕೊಳ್ಳಬಹುದು. ಅವರನ್ನು ನಿಮ್ಮ ಗುಲಾಮರಾಗಿ ಆರು ವರ್ಷಗಳ ಕಾಲ ಇಟ್ಟುಕೊಳ್ಳಬಹುದು. ಆದರೆ ಏಳನೆಯ ವರ್ಷದಲ್ಲಿ ನೀವು ಅವರನ್ನು ಸ್ವತಂತ್ರರಾಗಿ ಬಿಟ್ಟುಬಿಡಬೇಕು.
12 ಸ್ವದೇಶದವರೊಳಗೆ ಯಾವ ಇಬ್ರಿಯ ಪುರುಷನಾಗಲಿ, ಸ್ತ್ರೀಯಾಗಲಿ ನಿಮಗೆ ದಾಸರಾಗಿರುವುದಕ್ಕಾಗಿ ಮಾರಲ್ಪಡುವ ಪಕ್ಷಕ್ಕೆ, ಅಂಥವರು ಆರು ವರ್ಷಗಳವರೆಗೂ ನಿಮ್ಮ ಸೇವೆ ಮಾಡಲಿ; ಏಳನೆಯ ವರ್ಷದಲ್ಲಿ ನೀವು ಅವರನ್ನು ಬಿಡುಗಡೆ ಮಾಡಬೇಕು.
12 “ಸ್ವದೇಶದವರಲ್ಲಿ ಯಾವ ಹಿಬ್ರಿಯ ಪುರುಷನಾಗಲಿ, ಸ್ತ್ರೀಯಾಗಲಿ ನಿಮಗೆ ಗುಲಾಮರಾಗಿ ಮಾರಲ್ಪಟ್ಟಿದ್ದರೆ ಅಂಥವರು ಆರು ವರ್ಷಗಳವರೆಗೂ ನಿಮ್ಮ ಸೇವೆ ಮಾಡಲಿ, ಏಳನೆಯ ವರ್ಷದಲ್ಲಿ ನೀವು ಅವರನ್ನು ಬಿಟ್ಟುಬಿಡಬೇಕು.
12 ಸ್ವದೇಶದವರೊಳಗೆ ಯಾವ ಇಬ್ರಿಯ ಪುರುಷನಾಗಲಿ ಸ್ತ್ರೀಯಾಗಲಿ ನಿಮಗೆ ದಾಸರಾಗಿರುವದಕ್ಕಾಗಿ ಮಾರಲ್ಪಡುವ ಪಕ್ಷಕ್ಕೆ ಅಂಥವರು ಆರು ವರುಷಗಳವರೆಗೂ ನಿಮ್ಮ ಸೇವೆಮಾಡಲಿ; ಏಳನೆಯ ವರುಷದಲ್ಲಿ ನೀವು ಅವರನ್ನು ಬಿಟ್ಟುಬಿಡಬೇಕು.
12 ನಿಮ್ಮ ಸಹೋದರನಾದ ಹಿಬ್ರಿಯನಾಗಲಿ, ಒಬ್ಬ ಹಿಬ್ರಿಯ ಸ್ತ್ರೀಯಾಗಲಿ ನಿಮಗೆ ಗುಲಾಮರಾಗಿ, ಆರು ವರ್ಷ ನಿಮಗೆ ಮಾರಾಟವಾಗಿದ್ದರೆ ಮತ್ತು ಸೇವೆ ಮಾಡಿದ್ದರೆ, ಏಳನೆಯ ವರ್ಷದಲ್ಲಿ ಅವರನ್ನು ಬಿಡುಗಡೆ ಮಾಡಿ ಕಳುಹಿಸಿಬಿಡಿರಿ.
ನಾನು ನಿಮ್ಮ ಪೂರ್ವಿಕರಿಗೆ ‘ಪ್ರತಿ ಏಳು ವರ್ಷದ ಕೊನೆಯಲ್ಲಿ ಪ್ರತಿಯೊಬ್ಬ ವ್ಯಕ್ತಿಯು ತನ್ನ ಇಬ್ರಿಯ ಗುಲಾಮರನ್ನು ಬಿಡುಗಡೆ ಮಾಡಬೇಕು. ತನ್ನನ್ನು ನಿಮಗೆ ಮಾರಿಕೊಂಡ ಇಬ್ರಿಯ ಸಹೋದರ ನಿಮ್ಮಲ್ಲಿದ್ದರೆ ಅವನು ಆರು ವರ್ಷ ಸೇವೆಮಾಡಿದ ನಂತರ ಅವನನ್ನು ಬಿಡುಗಡೆ ಮಾಡಬೇಕು’ ಎಂದು ಹೇಳಿದ್ದೆ. ಆದರೆ ನಿಮ್ಮ ಪೂರ್ವಿಕರು ನನ್ನ ಮಾತುಗಳನ್ನು ಕಿವಿಗೆ ಹಾಕಿಕೊಳ್ಳಲಿಲ್ಲ; ನನ್ನ ಕಡೆಗೆ ಗಮನ ಕೊಡಲಿಲ್ಲ.