ಧರ್ಮೋಪದೇಶಕಾಂಡ 15:15 - ಪರಿಶುದ್ದ ಬೈಬಲ್15 ನೀವು ಈಜಿಪ್ಟಿನಲ್ಲಿ ದಾಸತ್ವದಲ್ಲಿದ್ದುದನ್ನು ನೆನಪುಮಾಡಿರಿ. ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಬಿಡಿಸಿದನು. ಆದ್ದರಿಂದಲೇ ನಾನು ಈ ಆಜ್ಞೆಯನ್ನು ನಿಮಗೆ ಕೊಡುತ್ತಿದ್ದೇನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಐಗುಪ್ತದೇಶದಲ್ಲಿ ನೀವೇ ದಾಸರಾಗಿರಲು ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಬಿಡುಗಡೆಮಾಡಿದನು ಎಂಬುದನ್ನು ಜ್ಞಾಪಕಮಾಡಿಕೊಳ್ಳಿರಿ. ಇದಕ್ಕೋಸ್ಕರವಾಗಿಯೇ ನಾನು ಈ ಆಜ್ಞೆಯನ್ನು ನಿಮಗೆ ಈಗ ಕೊಟ್ಟಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಈಜಿಪ್ಟ್ ದೇಶದಲ್ಲಿ ನೀವೇ ಗುಲಾಮರಾಗಿದ್ದಿರಿ; ನಿಮ್ಮ ದೇವರಾದ ಸರ್ವೇಶ್ವರ ನಿಮ್ಮನ್ನು ಬಿಡುಗಡೆ ಮಾಡಿದರೆಂಬುದನ್ನು ಜ್ಞಾಪಕಮಾಡಿಕೊಳ್ಳಿ. ಇದಕ್ಕಾಗಿಯೇ, ನಾನೀಗ ಈ ಆಜ್ಞೆಯನ್ನು ನಿಮಗೆ ಕೊಟ್ಟಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಐಗುಪ್ತದೇಶದಲ್ಲಿ ನೀವೇ ದಾಸರಾಗಿರಲು ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಬಿಡುಗಡೆಮಾಡಿದನೆಂಬದನ್ನು ಜ್ಞಾಪಕಮಾಡಿಕೊಳ್ಳಿರಿ. ಇದಕ್ಕೋಸ್ಕರವಾಗಿಯೇ ನಾನು ಈ ಆಜ್ಞೆಯನ್ನು ನಿಮಗೆ ಈಗ ಕೊಟ್ಟಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ನೀವು ಈಜಿಪ್ಟ್ ದೇಶದಲ್ಲಿ ದಾಸರಾಗಿದ್ದಿರಿ ಎಂದೂ, ನಿಮ್ಮ ದೇವರಾದ ಯೆಹೋವ ದೇವರು ನಿಮ್ಮನ್ನು ವಿಮೋಚಿಸಿದರೆಂದೂ ಜ್ಞಾಪಕಮಾಡಿಕೊಳ್ಳಿರಿ. ಆದ್ದರಿಂದ ನಾನು ಈ ಹೊತ್ತು ಇದನ್ನು ನಿಮಗೆ ಆಜ್ಞಾಪಿಸುತ್ತೇನೆ. ಅಧ್ಯಾಯವನ್ನು ನೋಡಿ |
“ನಿನ್ನ ಜನರಾದ ಇಸ್ರೇಲರಂಥವರು ಈ ಲೋಕದಲ್ಲಿ ಬೇರೆ ಯಾರೂ ಇಲ್ಲ, ಅವರು ವಿಶೇಷವಾದ ಜನರು. ಅವರು ಗುಲಾಮರಾಗಿದ್ದರು, ಆದರೆ ಅವರನ್ನು ಈಜಿಪ್ಟಿನಿಂದ ನೀನು ಹೊರತಂದು ಸ್ವತಂತ್ರರನ್ನಾಗಿ ಮಾಡಿರುವೆ. ನೀನು ಅವರನ್ನು ನಿನ್ನ ಜನರನ್ನಾಗಿ ಮಾಡಿಕೊಂಡೆ. ಇಸ್ರೇಲರಿಗಾಗಿ ನೀನು ಉತ್ತಮವಾದ ಮತ್ತು ಮಹತ್ತಾದ ಕಾರ್ಯಗಳನ್ನು ಮಾಡಿದೆ. ನಿನ್ನ ದೇಶಕ್ಕಾಗಿ ನೀನು ಮಹತ್ಕಾರ್ಯಗಳನ್ನು ಮಾಡಿದೆ.