Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 15:16 - ಪರಿಶುದ್ದ ಬೈಬಲ್‌

16 “ಆದರೆ ನಿಮ್ಮ ಗುಲಾಮರಲ್ಲಿ ಒಬ್ಬನು, ‘ನಾನು ನಿಮ್ಮನ್ನು ಬಿಟ್ಟುಹೋಗುವುದಿಲ್ಲ’ ಎಂದು ಹೇಳಿದರೆ, ನಿಮ್ಮನ್ನು ಮತ್ತು ನಿಮ್ಮ ಕುಟುಂಬವನ್ನು ಅವನು ಪ್ರೀತಿಸುವುದರಿಂದ ಮತ್ತು ನಿಮ್ಮೊಂದಿಗೆ ಒಳ್ಳೆಯ ಜೀವಿತವನ್ನು ಅವನು ಅನುಭವಿಸಿದ್ದರಿಂದ ಅವನು ನಿಮ್ಮೊಂದಿಗೆ ಇರಲು ಇಷ್ಟಪಟ್ಟರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಒಂದು ವೇಳೆ ಆ ದಾಸನು ನಿಮ್ಮ ಬಳಿಯಲ್ಲಿ ಸುಖವಾಗಿದ್ದು, ನಿಮ್ಮನ್ನೂ ಮತ್ತು ನಿಮ್ಮ ಮನೆಯವರನ್ನೂ ಪ್ರೀತಿಸಿ, ತಾನು ಬಿಡುಗಡೆಯಾಗಿ ಹೋಗುವುದಿಲ್ಲ ಎಂದು ಹೇಳುವ ಪಕ್ಷಕ್ಕೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 “ಒಂದು ವೇಳೆ ಅಂಥ ಗುಲಾಮನು ನಿಮ್ಮ ಬಳಿ ಸುಖವಾಗಿದ್ದು, ನಿಮ್ಮನ್ನೂ ನಿಮ್ಮ ಮನೆಯವರನ್ನೂ ಪ್ರೀತಿಸಿ, ತಾನು ಬಿಡುಗಡೆ ಆಗಿ ಹೋಗಲು ಒಲ್ಲೆನೆಂದು ಹೇಳಬಹುದು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಒಂದು ವೇಳೆ ಅಂಥ ದಾಸನು ನಿಮ್ಮ ಬಳಿಯಲ್ಲಿ ಸುಖವಾಗಿದ್ದು ನಿಮ್ಮನ್ನೂ ನಿಮ್ಮ ಮನೆಯವರನ್ನೂ ಪ್ರೀತಿಸಿ ತಾನು ಬಿಡುಗಡೆಯಾಗಿ ಹೋಗಲೊಲ್ಲೆನೆಂದು ಹೇಳುವ ಪಕ್ಷಕ್ಕೆ ನೀವು ಶಲಾಕಿಯಿಂದ ಅವನ ಕಿವಿಯನ್ನು ಚುಚ್ಚಿ ಕದಕ್ಕೆ ಸಿಕ್ಕಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಒಂದು ವೇಳೆ ಆ ಗುಲಾಮನು, ನಿಮ್ಮನ್ನೂ, ನಿಮ್ಮ ಮನೆಯನ್ನೂ ಪ್ರೀತಿಸುವುದರಿಂದಲೂ, ನಿಮ್ಮ ಬಳಿ ಸುಖವಾಗಿರುವುದರಿಂದಲೂ, “ನಾನು ಬಿಡುಗಡೆಯಾಗಿ ಹೋಗುವುದಕ್ಕೆ ಮನಸ್ಸಿಲ್ಲ,” ಎಂದು ಹೇಳಿದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 15:16
5 ತಿಳಿವುಗಳ ಹೋಲಿಕೆ  

ನನ್ನ ದೇವರೇ, ನಿನ್ನ ಚಿತ್ತಾನುಸಾರವಾಗಿ ಮಾಡುತ್ತೇನೆ. ನಿನ್ನ ಉಪದೇಶಗಳನ್ನು ಹೃದಯದಲ್ಲಿಟ್ಟುಕೊಂಡಿದ್ದೇನೆ” ಅಂದೆನು.


ನಾನು ಗ್ರಹಿಸಿಕೊಂಡಿದ್ದೇನೆಂದರೆ, ಯಜ್ಞಗಳಾಗಲಿ ಧಾನ್ಯಸಮರ್ಪಣೆಗಳಾಗಲಿ ಸರ್ವಾಂಗಹೋಮಗಳಾಗಲಿ ಪಾಪಪರಿಹಾರಕ ಯಜ್ಞಗಳಾಗಲಿ ನಿನಗೆ ಬೇಕಿಲ್ಲ.


ನೀವು ಈಜಿಪ್ಟಿನಲ್ಲಿ ದಾಸತ್ವದಲ್ಲಿದ್ದುದನ್ನು ನೆನಪುಮಾಡಿರಿ. ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಬಿಡಿಸಿದನು. ಆದ್ದರಿಂದಲೇ ನಾನು ಈ ಆಜ್ಞೆಯನ್ನು ನಿಮಗೆ ಕೊಡುತ್ತಿದ್ದೇನೆ.


ಅವನನ್ನು ನಿಮ್ಮ ಬಾಗಿಲಿನ ನಿಲುವು ಕಂಬದ ಬಳಿಯಲ್ಲಿ ನಿಲ್ಲಿಸಿ ಅವನ ಕಿವಿಯನ್ನು ಒಂದು ಹರಿತವಾದ ಸಾಧನದಿಂದ ರಂಧ್ರ ಮಾಡಬೇಕು. ಇದು, ಅವನು ನಿಮ್ಮ ಶಾಶ್ವತ ಗುಲಾಮನು ಎಂದು ತೋರಿಸುವುದು. ಗುಲಾಮಳಿಗೂ ಇದು ಅನ್ವಯಿಸುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು