ಧರ್ಮೋಪದೇಶಕಾಂಡ 15:2 - ಪರಿಶುದ್ದ ಬೈಬಲ್2 ಒಬ್ಬನು ಇನ್ನೊಬ್ಬ ಇಸ್ರೇಲನಿಗೆ ಸಾಲಕೊಟ್ಟರೆ ಆ ಸಾಲವನ್ನು ವಜಾಮಾಡಬೇಕು. ತನ್ನ ಸಹೋದರನಾದ ಇಸ್ರೇಲನಿಂದ ಸಾಲ ಹಿಂದೆ ಕೇಳಬಾರದು. ಆ ವರ್ಷದಲ್ಲಿ ಸಾಲವನ್ನೆಲ್ಲಾ ವಜಾ ಮಾಡಬೇಕೆಂಬುದಾಗಿ ದೇವರು ಆದೇಶವನ್ನು ನೀಡಿದ್ದಾನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಹೇಗೆಂದರೆ ಯೆಹೋವನು ನೇಮಿಸಿದ ಬಿಡುಗಡೆಯ ವರ್ಷವು ಬಂತೆಂದು ಪ್ರಕಟವಾದುದರಿಂದ ಸಾಲಕೊಟ್ಟವನು ತೆಗೆದುಕೊಂಡವನಿಗೆ ಆ ಸಾಲವನ್ನು ಬಿಟ್ಟುಬಿಡಬೇಕು. ಅವನು ಸ್ವದೇಶದವನಿಗೆ ಕೊಟ್ಟ ಸಾಲವನ್ನು ಕೇಳಬಾರದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಹೇಗೆಂದರೆ, ಸರ್ವೇಶ್ವರನೇ ನೇಮಿಸಿದ ಬಿಡುಗಡೆಯ ಸಂವತ್ಸರ ಪ್ರಕಟವಾಗಿದೆ. ಆದುದರಿಂದ ಸಾಲಕೊಟ್ಟವನು ತೆಗೆದುಕೊಂಡವನಿಗೆ ಆ ಸಾಲವನ್ನು ಬಿಟ್ಟುಬಿಡಬೇಕು; ಅವನು ಸ್ವದೇಶದವನಿಗೆ ಕೊಟ್ಟ ಸಾಲವನ್ನು ಕೇಳಬಾರದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಹೇಗಂದರೆ ಯೆಹೋವನು ನೇವಿುಸಿದ ಬಿಡುಗಡೆಯ ಸಂವತ್ಸರವು ಬಂತೆಂದು ಪ್ರಕಟವಾದದರಿಂದ ಸಾಲಕೊಟ್ಟವನು ತೆಗೆದುಕೊಂಡವನಿಗೆ ಆ ಸಾಲವನ್ನು ಬಿಟ್ಟುಬಿಡಬೇಕು; ಅವನು ಸ್ವದೇಶದವನಿಗೆ ಕೊಟ್ಟ ಸಾಲವನ್ನು ಕೇಳಬಾರದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ನೀವು ಮಾಡಬೇಕಾದ ಕ್ರಮವೇನೆಂದರೆ: ಸಾಲ ಕೊಟ್ಟವರೆಲ್ಲರೂ ತಮ್ಮ ನೆರೆಯವರಾದ ಇಸ್ರಾಯೇಲರಿಗೆ ಕೊಟ್ಟ ಸಾಲವನ್ನು ಬಿಟ್ಟುಬಿಡಬೇಕು. ಅದು ಯೆಹೋವ ದೇವರ ಬಿಡುಗಡೆಯ ವರ್ಷ ಎಂದು ಪ್ರಕಟವಾಗಿರುವುದರಿಂದ ತನ್ನ ನೆರೆಯವನಿಂದಲೂ, ತನ್ನ ಸಹೋದರನಿಂದಲೂ ಸಾಲವನ್ನು ಕೇಳಬಾರದು. ಅಧ್ಯಾಯವನ್ನು ನೋಡಿ |
ಈಗ ಆ ಜನರು ಹೀಗೆ ಹೇಳುತ್ತಾರೆ, “ನಾವು ನಿನ್ನನ್ನು ಗೌರವಿಸಲು ಉಪವಾಸಮಾಡಿದೆವು. ನೀನು ನಮ್ಮನ್ನೇಕೆ ಗಮನಿಸುವದಿಲ್ಲ? ನಿನ್ನನ್ನು ಗೌರವಿಸುವದಕ್ಕಾಗಿ ನಾವು ನಮ್ಮ ದೇಹಗಳನ್ನು ದಂಡಿಸಿದೆವು. ನೀನೇಕೆ ನಮ್ಮನ್ನು ಗಮನಿಸುವದಿಲ್ಲ?” ಆದರೆ ಯೆಹೋವನು ಹೇಳುವುದೇನೆಂದರೆ: “ವಿಶೇಷ ದಿವಸಗಳಲ್ಲಿ ನಿಮ್ಮ ಇಷ್ಟಾನುಸಾರ ಉಪವಾಸ ಮಾಡುವಿರಿ. ನೀವು ನಿಮ್ಮ ಸ್ವಂತ ದೇಹಗಳನ್ನು ದಂಡಿಸದೆ ನಿಮ್ಮ ಸೇವಕರನ್ನು ದಂಡಿಸುತ್ತಿದ್ದೀರಿ.
“ಸಬ್ಬತ್ ದಿನದಲ್ಲಿ ಯಾವ ಕೆಲಸವನ್ನೂ ಮಾಡುವುದಿಲ್ಲವೆಂದು ಪ್ರಮಾಣಮಾಡುತ್ತೇವೆ. ನಮ್ಮ ಸುತ್ತಮುತ್ತಲಿನ ಜನರು ಸಬ್ಬತ್ ದಿನದಲ್ಲಿ ಮಾರಲು ದವಸಧಾನ್ಯವನ್ನಾಗಲಿ ಬೇರೆ ವಸ್ತುಗಳನ್ನಾಗಲಿ ತಂದರೆ ನಾವು ಸಬ್ಬತ್ ದಿನದಲ್ಲಿ ಮತ್ತು ಇತರ ಯಾವುದೇ ಹಬ್ಬದ ದಿನದಲ್ಲಿ ಅವುಗಳನ್ನು ಕೊಂಡುಕೊಳ್ಳುವುದಿಲ್ಲ. ಪ್ರತಿ ಏಳನೆಯ ವರ್ಷ ನಾವು ನೆಡುವುದೂ ಇಲ್ಲ. ಹೊಲದಲ್ಲಿ ಕೆಲಸ ಮಾಡುವುದೂ ಇಲ್ಲ. ನಮಗೆ ಬೇರೆಯವರು ಕೊಡಬೇಕಾಗಿರುವ ಸಾಲವನ್ನು ಏಳನೆಯ ವರ್ಷದಲ್ಲಿ ವಜಾ ಮಾಡುತ್ತೇವೆ.