ಧರ್ಮೋಪದೇಶಕಾಂಡ 15:21 - ಪರಿಶುದ್ದ ಬೈಬಲ್21 “ಆದರೆ ಆ ಚೊಚ್ಚಲು ಪ್ರಾಣಿಗಳು ಕುಂಟಾಗಿದ್ದರೆ, ಕುರುಡಾಗಿದ್ದರೆ ಅಥವಾ ಬೇರೆ ಯಾವ ಅಂಗವಿಕಲತೆಗೆ ಒಳಗಾಗಿದ್ದರೆ, ನಿಮ್ಮ ದೇವರಾದ ಯೆಹೋವನಿಗೆ ಅವುಗಳನ್ನು ಸಮರ್ಪಿಸಕೂಡದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಅದು ಕುಂಟಾಗಿ, ಕುರುಡಾಗಿ ಇಲ್ಲವೆ ಬೇರೆ ವಿಧದಿಂದ ವಿರೂಪವಾಗಿದ್ದರೆ ಅದನ್ನು ನಿಮ್ಮ ದೇವರಾದ ಯೆಹೋವನಿಗೆ ಸಮರ್ಪಿಸಬಾರದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 “ಅದು ಕುಂಟಾಗಿ, ಕುರುಡಾಗಿ, ಇಲ್ಲವೆ ಬೇರೆ ವಿಧದಲ್ಲಿ ದೋಷವುಳ್ಳದ್ದಾಗಿದ್ದರೆ ಅದನ್ನು ನಿಮ್ಮ ದೇವರಾದ ಸರ್ವೇಶ್ವರನಿಗೆ ಬಲಿಯಾಗಿ ಸಮರ್ಪಿಸಕೂಡದು; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಅದು ಕುಂಟಾಗಿ ಕುರುಡಾಗಿ ಇಲ್ಲವೆ ಬೇರೆ ವಿಧದಿಂದ ವಿರೂಪವಾಗಿದ್ದರೆ ಅದನ್ನು ನಿಮ್ಮ ದೇವರಾದ ಯೆಹೋವನಿಗೆ ಸಮರ್ಪಿಸಕೂಡದು; ಅದನ್ನು ನಿಮ್ಮ ಊರಲ್ಲೇ ತಿನ್ನಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಅದರಲ್ಲಿ ಏನಾದರೂ ಊನವಿದ್ದರೆ ಅಂದರೆ, ಅದು ಕುಂಟಾಗಲಿ, ಕುರುಡಾಗಲಿ ಏನಾದರೂ ಕೆಟ್ಟ ಊನವುಳ್ಳದ್ದಾಗಿದ್ದರೆ, ಅದನ್ನು ನಿಮ್ಮ ದೇವರಾದ ಯೆಹೋವ ದೇವರಿಗೆ ಅರ್ಪಿಸಬಾರದು. ಅಧ್ಯಾಯವನ್ನು ನೋಡಿ |