Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 15:6 - ಪರಿಶುದ್ದ ಬೈಬಲ್‌

6 ಆತನು ಮಾಡಿದ ವಾಗ್ದಾನದ ಪ್ರಕಾರ ಆಶೀರ್ವದಿಸುವನು. ಆಗ ನಿಮ್ಮಲ್ಲಿ ಬೇರೆ ಜನಾಂಗಗಳಿಗೆ ಸಾಲ ಕೊಡಲು ಯಥೇಚ್ಛವಾಗಿ ಹಣವಿರುವುದು. ನಿಮಗೆ ಬೇರೆಯವರಿಂದ ಹಣ ಸಾಲ ತೆಗೆದುಕೊಳ್ಳುವ ಅವಶ್ಯಕತೆ ಇರುವುದಿಲ್ಲ. ನೀವು ಎಷ್ಟೋ ದೇಶಗಳನ್ನು ಆಳುವಿರಿ. ಆದರೆ ಆ ದೇಶಗಳು ನಿಮ್ಮನ್ನು ಆಳವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ನಿಮ್ಮ ದೇವರಾದ ಯೆಹೋವನು ವಾಗ್ದಾನಮಾಡಿದಂತೆ ನಿಮ್ಮನ್ನು ಅಭಿವೃದ್ಧಿಪಡಿಸುವನು. ನೀವು ಅನೇಕ ಜನಗಳಿಗೆ ಸಾಲಕೊಡುವಿರೇ ಹೊರತು ಅವರಿಂದ ಸಾಲ ತೆಗೆದುಕೊಳ್ಳುವುದಿಲ್ಲ. ನೀವು ಅನೇಕ ಜನಾಂಗಗಳ ಮೇಲೆ ದೊರೆತನ ಮಾಡುವಿರೇ ಹೊರತು ಅವರು ನಿಮ್ಮ ಮೇಲೆ ದೊರೆತನ ಮಾಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ನಿಮ್ಮ ದೇವರಾದ ಸರ್ವೇಶ್ವರ ವಾಗ್ದಾನಮಾಡಿದಂತೆ ನಿಮ್ಮನ್ನು ಅಭಿವೃದ್ಧಿಪಡಿಸುವರು. ನೀವು ಅನೇಕ ಜನಗಳಿಗೆ ಸಾಲಕೊಡುವಿರೇ ಹೊರತು ಅವರಿಂದ ಸಾಲ ತೆಗೆದುಕೊಳ್ಳುವುದಿಲ್ಲ; ಅನೇಕ ಜನಾಂಗಗಳ ಮೇಲೆ ದೊರೆತನ ಮಾಡುವಿರೇ ಹೊರತು ಅವರು ನಿಮ್ಮ ಮೇಲೆ ದೊರೆತನ ಮಾಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ನಿಮ್ಮ ದೇವರಾದ ಯೆಹೋವನು ವಾಗ್ದಾನ ಮಾಡಿದಂತೆ ನಿಮ್ಮನ್ನು ಅಭಿವೃದ್ಧಿಪಡಿಸುವನು. ನೀವು ಅನೇಕ ಜನಗಳಿಗೆ ಸಾಲಕೊಡುವಿರೇ ಹೊರತು ಅವರಿಂದ ಸಾಲತೆಗೆದುಕೊಳ್ಳುವದಿಲ್ಲ; ಅನೇಕ ಜನಾಂಗಗಳ ಮೇಲೆ ದೊರೆತನ ಮಾಡುವಿರೇ ಹೊರತು ಅವರು ನಿಮ್ಮ ಮೇಲೆ ದೊರೆತನಮಾಡುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ನಿಶ್ಚಯವಾಗಿ ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ವಾಗ್ದಾನ ಮಾಡಿದಂತೆ ನಿನ್ನನ್ನು ಆಶೀರ್ವದಿಸುವರು. ನೀವು ಸಾಲ ತೆಗೆದುಕೊಳ್ಳದೆ ಅನೇಕ ಜನಾಂಗಗಳಿಗೆ ಸಾಲ ಕೊಡುವಿರಿ. ಅನೇಕ ಜನಾಂಗಗಳನ್ನು ಆಳುವಿರಿ, ಅವರು ನಿಮ್ಮನ್ನು ಆಳುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 15:6
14 ತಿಳಿವುಗಳ ಹೋಲಿಕೆ  

“ಆದ್ದರಿಂದ ನಿಮ್ಮ ವೈರಿಗಳನ್ನು ಪ್ರೀತಿಸಿರಿ. ಅವರಿಗೆ ಒಳ್ಳೆಯದನ್ನು ಮಾಡಿರಿ. ನೀವು ಅವರಿಗೆ ಸಾಲ ಕೊಡುವಾಗ ಮತ್ತೆ ಅವರಿಂದ ಪಡೆಯಬಹುದೆಂಬ ನಿರೀಕ್ಷೆಯಿಲ್ಲದೆ ಕೊಡಿರಿ. ಆಗ ನಿಮಗೆ ದೊಡ್ಡ ಪ್ರತಿಫಲವಿರುವುದು. ನೀವು ಮಹೋನ್ನತನಾದ ದೇವರ ಮಕ್ಕಳಾಗುವಿರಿ. ಏಕೆಂದರೆ ದೇವರು ಪಾಪಿಷ್ಠರಿಗೂ ಕೃತಜ್ಞತೆಯಿಲ್ಲದವರಿಗೂ ಒಳ್ಳೆಯವನಾಗಿದ್ದಾನೆ.


ಬಡವನು ಐಶ್ವರ್ಯವಂತನಿಗೆ ಗುಲಾಮನಾಗಿದ್ದಾನೆ. ಸಾಲ ತೆಗೆದುಕೊಳ್ಳುವವನು ಸಾಲಕೊಡುವವನಿಗೆ ಸೇವಕನಾಗಿದ್ದಾನೆ.


ಸೊಲೊಮೋನನು ಯೂಫ್ರೇಟೀಸ್ ನದಿಯಿಂದ ಮೊದಲುಗೊಂಡು ಫಿಲಿಷ್ಟಿಯರ ದೇಶದವರೆಗಿನ ರಾಜ್ಯಗಳನ್ನೆಲ್ಲ ಆಳುತ್ತಿದ್ದನು. ಅವನ ರಾಜ್ಯಾಧಿಕಾರವು ಈಜಿಪ್ಟಿನ ಗಡಿಯವರೆಗೆ ವಿಸ್ತರಿಸಿತ್ತು. ಈ ದೇಶಗಳು ಸೊಲೊಮೋನನಿಗೆ ಕಪ್ಪಕಾಣಿಕೆಯನ್ನು ಕೊಡುತ್ತ ಅವನ ಜೀವಮಾನ ಪೂರ್ತಿ ಅವರು ಅವನಿಗೆ ಆಧೀನರಾಗಿದ್ದರು.


ದುಷ್ಟನು ತಾನು ಮಾಡಿದ ಸಾಲವನ್ನು ತೀರಿಸುವುದಿಲ್ಲ. ನೀತಿವಂತನಾದರೋ ಬೇರೆಯವರಿಗೆ ಉದಾರವಾಗಿ ಕೊಡುವನು.


ಬಲಿಷ್ಠರಾಜರು ಜೆರುಸಲೇಮನ್ನು ಮತ್ತು ಯೂಫ್ರೇಟೀಸ್ ನದಿಯ ಪಶ್ಚಿಮ ಪ್ರಾಂತ್ಯವನ್ನೆಲ್ಲಾ ಆಳಿದರು. ಅವರಿಗೆ ಕಪ್ಪಕಾಣಿಕೆ, ಸುಂಕ, ತೆರಿಗೆಗಳನ್ನು ಸಲ್ಲಿಸಲಾಗುತ್ತಿತ್ತು.


ಆದ್ದರಿಂದ ಅವರ ಶತ್ರುಗಳು ಅವರನ್ನು ಸದೆಬಡಿಯುವಂತೆ ಮಾಡಿದೆ. ವೈರಿಗಳು ಅವರಿಗೆ ತುಂಬಾ ಕಷ್ಟಕೊಟ್ಟರು. ಕಷ್ಟಬಂದಾಗ ನಮ್ಮ ಪೂರ್ವಿಕರು ನಿನಗೆ ಮೊರೆಯಿಟ್ಟರು. ಪರಲೋಕದಿಂದ ನೀನು ಅವರನ್ನು ಆಲೈಸಿದೆ. ನಿನ್ನ ಮಹಾಕರುಣೆಗನುಸಾರವಾಗಿ ನೀನು ಅವರ ಬಳಿಗೆ ಜನರನ್ನು ಕಳುಹಿಸಿ ಅವರನ್ನು ಅವರ ವೈರಿಗಳ ಕೈಗಳಿಂದ ರಕ್ಷಿಸಿದೆ.


ದಯಾವಂತನಿಗೂ ಉದಾರಿಗೂ ಒಳ್ಳೆಯದಾಗುವುದು. ನ್ಯಾಯವಾದ ವ್ಯಾಪಾರಸ್ಥನಿಗೆ ಒಳ್ಳೆಯದಾಗುವುದು.


ನೀತಿವಂತನು ಬೇರೆಯವರಿಗೆ ಉದಾರವಾಗಿ ಕೊಡುವನು. ಅವನ ಮಕ್ಕಳು ಆಶೀರ್ವಾದ ಹೊಂದುವರು.


ಸೊಲೊಮೋನನು ಯೂಫ್ರೇಟೀಸ್ ನದಿಯ ಪಶ್ಚಿಮದ ಪ್ರದೇಶವನ್ನೆಲ್ಲ ಆಳಿದನು. ಈ ದೇಶವು ತಿಫ್ಸಹುದಿಂದ ಗಾಜದವರೆಗಿತ್ತು. ಸೊಲೊಮೋನನ ರಾಜ್ಯದಲ್ಲೆಲ್ಲಾ ಶಾಂತಿ ನೆಲೆಸಿತ್ತು.


ಯೂಫ್ರೇಟೀಸ್ ನದಿಯಿಂದ ಹಿಡಿದು ಫಿಲಿಷ್ಟಿಯರ ರಾಜ್ಯ ಮತ್ತು ಈಜಿಪ್ಟಿನ ಮೇರೆಯ ತನಕವಿದ್ದ ಎಲ್ಲಾ ಅರಸರುಗಳಿಗೆ ಸೊಲೊಮೋನನೇ ರಾಜನಾಗಿದ್ದನು.


ನಿಮಗೆ ಸಾಲ ಕೊಡಲು ವಿದೇಶಿಯರಿಗೆ ಹಣವಿರುವುದು. ಆದರೆ ಅವರಿಗೆ ಸಾಲ ಕೊಡಲು ನಿಮ್ಮಲ್ಲಿ ಹಣವಿರುವುದಿಲ್ಲ. ತಲೆಯು ದೇಹವನ್ನು ಹೇಗೆ ಹಿಡಿತದಲ್ಲಿಟ್ಟುಕೊಂಡಿರುತ್ತದೋ ಹಾಗೆಯೇ ಅವರು ನಿಮ್ಮನ್ನು ತಮ್ಮ ಹಿಡಿತದಲ್ಲಿಟ್ಟುಕೊಳ್ಳುವರು. ನೀವು ಅವರಿಗೆ ಬಾಲದಂತಿರುವಿರಿ.


ನೀವು ಆತನ ಆಜ್ಞೆಗಳನ್ನು ಅನುಸರಿಸುವವರಾಗಿದ್ದಲ್ಲಿ, ಆತನ ವಿಧಿಕ್ರಮಗಳಿಗೆ ವಿಧೇಯರಾಗಿದ್ದಲ್ಲಿ ದೇವರು ನಿಮ್ಮನ್ನು ಆಶೀರ್ವದಿಸುವನು.


ನನ್ನ ಸಂತತಿಯವರನ್ನು ಆಶೀರ್ವದಿಸಿ ನಿನ್ನ ಕರುಣೆಯನ್ನು ತೋರಿಸಿದೆ. ನನ್ನ ಸಂತತಿಯವರು ಸದಾಕಾಲ ನಿನ್ನ ಸೇವೆಮಾಡುತ್ತಾರೆಂದು ನೀನು ವಾಗ್ದಾನ ಮಾಡಿರುವೆ. ಯೆಹೋವನೇ, ನೀನಾಗಿಯೇ ನನ್ನ ಸಂತತಿಯವರನ್ನು ಆಶೀರ್ವದಿಸಿದ್ದರಿಂದ ನನ್ನ ಸಂತತಿಯವರು ಸದಾಕಾಲಕ್ಕೂ ಆಶೀರ್ವಾದ ಹೊಂದಿಕೊಳ್ಳುವರು!” ಎಂದು ಪ್ರಾರ್ಥಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು