7 “ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ದೇಶದಲ್ಲಿ ನೀವು ವಾಸಿಸುವಾಗ ಒಂದುವೇಳೆ ನಿಮ್ಮ ಮಧ್ಯದಲ್ಲಿ ಒಬ್ಬ ಬಡವನಿರಬಹುದು. ನೀವು ಸ್ವಾರ್ಥರಾಗಿ, ಅವನಿಗೆ ಸಹಾಯಮಾಡಲು ನಿರಾಕರಿಸಬಾರದು.
7 ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ದೇಶದ ಯಾವ ಊರಿನಲ್ಲಾದರೂ ಸ್ವದೇಶದವನಾದ ಬಡವನು ಇದ್ದರೆ, ನೀವು ಆ ಬಡ ಸಹೋದರನಿಗೆ ಮನಸ್ಸನ್ನು ಕಠಿಣಮಾಡಿಕೊಂಡು ಅವನಿಗೆ ಸಹಾಯಮಾಡದೆ ಇರಬಾರದು.
7 “ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಕೊಡುವ ನಾಡಿನ ಯಾವ ಊರಲ್ಲಿಯಾದರೂ ಸ್ವದೇಶದವನಾದ ಬಡವನು ಇದ್ದರೆ, ನೀವು ಆ ಬಡ ಸಹೋದರನ ಬಗ್ಗೆ ಮನಸ್ಸನ್ನು ಕಠಿಣಮಾಡಿಕೊಳ್ಳಬೇಡಿ. ಅವನಿಗೆ ಸಹಾಯಮಾಡದೆ ಇರಬೇಡಿ.
7 ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ದೇಶದ ಯಾವ ಊರಲ್ಲಿಯಾದರೂ ಸ್ವದೇಶದವನಾದ ಬಡವನು ಇದ್ದರೆ ನೀವು ಆ ಬಡ ಸಹೋದರನಿಗೆ ಮನಸ್ಸನ್ನು ಕಠಿಣಮಾಡಿಕೊಂಡು ಅವನಿಗೆ ಸಹಾಯಮಾಡದೆ ಇರಬಾರದು.
7 ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಕೊಡುವ ನಿಮ್ಮ ದೇಶದಲ್ಲಿ, ನಿಮ್ಮ ಸಹೋದರರಲ್ಲಿ ಬಡವರು ಇದ್ದರೆ, ನಿಮ್ಮ ಹೃದಯವನ್ನು ಕಠಿಣ ಮಾಡಿಕೊಳ್ಳಬೇಡಿರಿ. ನಿಮ್ಮ ಕೈಯನ್ನು ನಿಮ್ಮ ಬಡ ಸಹೋದರರಿಗೆ ಮುಚ್ಚಿಕೊಳ್ಳಬೇಡಿರಿ.
“ಸಾಲ ವಜಾಮಾಡುವ ಏಳನೆಯ ವರ್ಷ ಸಮೀಪವಾಯಿತೆಂದು ನೀವು ಯಾರಿಗೂ ಸಾಲ ಕೊಡದೇ ಸಹಾಯ ಮಾಡದೇ ಇರಬಾರದು. ಅಂಥಾ ದುಷ್ಟ ಆಲೋಚನೆ ನಿಮ್ಮ ಮನಸ್ಸಿನೊಳಗೆ ಹುಟ್ಟದಿರಲಿ. ಸಹಾಯದ ಅಗತ್ಯವಿರುವ ವ್ಯಕ್ತಿಯ ಬಗ್ಗೆ ನಿಮ್ಮಲ್ಲಿ ಯಾವ ಕೆಟ್ಟ ಆಲೋಚನೆಯೂ ಇರಬಾರದು. ನೀವು ಆ ಬಡ ವ್ಯಕ್ತಿಗೆ ಸಹಾಯ ಮಾಡದಿದ್ದರೆ ನಿಮ್ಮ ವಿರುದ್ಧವಾಗಿ ಅವನು ಯೆಹೋವನಿಗೆ ದೂರು ಹೇಳುವನು. ಆಗ ನೀವು ಯೆಹೋವನ ಮುಂದೆ ದೋಷಿಗಳಾಗಿ ಕಂಡುಬರುವಿರಿ.
“ಆದರೆ ಮೊದಲನೇ ಸೇವಕನು ತಾಳಿಕೊಳ್ಳಲಿಲ್ಲ. ತನಗೆ ಸಾಲ ಕೊಡಬೇಕಾಗಿದ್ದ ಸೇವಕನ ವಿಷಯದಲ್ಲಿ ನ್ಯಾಯಾಧಿಪತಿಗೆ ದೂರುಕೊಟ್ಟು ಅವನನ್ನು ಸೆರೆಮನೆಗೆ ಹಾಕಿಸಿದನು. ಆ ಸೇವಕನು ಸಾಲ ತೀರಿಸುವವರೆಗೂ ಸೆರೆಮನೆಯಲ್ಲಿ ಇರಬೇಕಾಯಿತು.
ಹಸಿದ ಜನರಿಗಾಗಿ ವ್ಯಸನಪಟ್ಟು ಅವರಿಗೆ ಆಹಾರವನ್ನು ಕೊಡಬೇಕು. ಸಂಕಷ್ಟ ಅನುಭವಿಸುವ ಜನರಿಗೆ ಸಹಾಯಮಾಡಿ ಅವರ ಕೊರತೆಗಳನ್ನು ನೀಗಿಸಬೇಕು. ಆಗ ನಿಮ್ಮ ಬೆಳಕು ಕತ್ತಲಲ್ಲಿ ಪ್ರಕಾಶಿಸುವದು. ನಿಮಗೆ ಆಗ ದುಃಖವಿರದು. ಮಧಾಹ್ನದ ಸೂರ್ಯನಂತೆ ನೀವು ಹೊಳೆಯುವಿರಿ.
ದೇಶದ ಎಲ್ಲಾ ಹಳ್ಳಿಗಳಲ್ಲಿದ್ದ ಯೆಹೂದ್ಯರು ಅದಾರ್ ತಿಂಗಳಿನ ಹದಿನಾಲ್ಕನೆಯ ದಿವಸವನ್ನು ಪೂರಿಮ್ ದಿವಸವನ್ನಾಗಿ ಆಚರಿಸಿದರು. ಹದಿನಾಲ್ಕನೆಯ ದಿವಸವು ಅವರಿಗೆ ಸಂತಸದ ಹಬ್ಬ. ಆ ದಿವಸ ಅವರು ಔತಣಮಾಡಿ ಒಬ್ಬರಿಗೊಬ್ಬರು ಉಡುಗೊರೆಗಳನ್ನು ಕೊಟ್ಟು ಕಳುಹಿಸಿದರು.
ಯಾಕೆಂದರೆ ಆ ದಿವಸದಲ್ಲಿ ಯೆಹೂದ್ಯರು ತಮ್ಮ ಶತ್ರುಗಳನ್ನು ಸದೆಬಡಿದರು. ಆ ದಿವಸದಲ್ಲಿ ಅವರಿಗೆ ಶೋಕದ ಬದಲಾಗಿ ಸಂತಸವು ಒದಗಿಬಂತು. ಆ ದಿವಸದಲ್ಲಿ ಅವರ ರೋಧನವು ಹರ್ಷಧ್ವನಿಯಾಗಿ ಮಾರ್ಪಟ್ಟಿತು. ಮೊರ್ದೆಕೈಯು ಎಲ್ಲಾ ಯೆಹೂದ್ಯರಿಗೆ ಪತ್ರ ಬರೆಯಿಸಿದನು. ಆ ದಿವಸದಲ್ಲಿ ಹಬ್ಬವನ್ನು ಆಚರಿಸಿ ಒಬ್ಬರಿಗೊಬ್ಬರು ಉಡುಗೊರೆಗಳನ್ನು ಕೊಡಬೇಕು ಎಂಬುದಾಗಿ ಬರೆಯಿಸಿದನು.