Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 16:10 - ಪರಿಶುದ್ದ ಬೈಬಲ್‌

10 ಅಲ್ಲಿ ನಿಮ್ಮ ದೇವರಾದ ಯೆಹೋವನಿಗೆ ವಾರಗಳ ಹಬ್ಬವನ್ನು ಆಚರಿಸಿರಿ. ಅಲ್ಲಿ ನಿಮ್ಮ ವಿಶೇಷ ಕಾಣಿಕೆಗಳನ್ನು ತಂದು ಸಮರ್ಪಿಸಿರಿ. ನಿಮ್ಮ ದೇವರು ನಿಮ್ಮನ್ನು ಎಷ್ಟು ಆಶೀರ್ವದಿಸಿರುತ್ತಾನೆಂದು ಯೋಚಿಸಿ ಅದರ ಪ್ರಕಾರ ನಿಮ್ಮ ಕಾಣಿಕೆಗಳನ್ನು ಸಲ್ಲಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಆ ಏಳು ವಾರಗಳಾದ ನಂತರ ಪಂಚಾಶತ್ತಮ ದಿನದ ಹಬ್ಬವನ್ನು ಆಚರಿಸಬೇಕು. ನಿಮ್ಮ ದೇವರಾದ ಯೆಹೋವನು ನಿಮಗೆ ಅನುಗ್ರಹಿಸಿದ ಬೆಳೆಗೆ ತಕ್ಕಷ್ಟು ಕಾಣಿಕೆಯನ್ನು ನೀವು ಆಗ ಆತನಿಗೋಸ್ಕರ ತರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಆ ಏಳು ವಾರಗಳಾದನಂತರ, ಪಂಚಾಶತ್ತಮ ದಿನದ ಜಾತ್ರೆಯನ್ನು ಆಚರಿಸಬೇಕು. ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಅನುಗ್ರಹಿಸಿದ ಬೆಳೆಗೆ ತಕ್ಕಷ್ಟು ಕಾಣಿಕೆಯನ್ನು ನೀವು ಆಗ ಅವರಿಗಾಗಿ ತರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಆ ಏಳು ವಾರಗಳಾದನಂತರ ಪಂಚಾಶತ್ತಮ ದಿನದ ಜಾತ್ರೆಯನ್ನು ಆಚರಿಸಬೇಕು. ನಿಮ್ಮ ದೇವರಾದ ಯೆಹೋವನು ನಿಮಗೆ ಅನುಗ್ರಹಿಸಿದ ಬೆಳೆಗೆ ತಕ್ಕಷ್ಟು ಕಾಣಿಕೆಯನ್ನು ನೀವು ಆಗ ಆತನಿಗೋಸ್ಕರ ತರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಆಗ ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಅನುಗ್ರಹಿಸಿದ ಬೆಳೆಗೆ ತಕ್ಕಷ್ಟು ಕಾಣಿಕೆಯನ್ನು ಅರ್ಪಿಸಿ, ನಿಮ್ಮ ದೇವರಾದ ಯೆಹೋವ ದೇವರಿಗೆ ವಾರಗಳ ಹಬ್ಬವನ್ನು ಆಚರಿಸಬೇಕು

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 16:10
22 ತಿಳಿವುಗಳ ಹೋಲಿಕೆ  

ನಿಮ್ಮಲ್ಲಿ ಪ್ರತಿಯೊಬ್ಬನು ತನಗಾದ ಅಭಿವೃದ್ಧಿಗೆ ತಕ್ಕಂತೆ ನಿಮ್ಮಿಂದ ಸಾಧ್ಯವಾದಷ್ಟು ಹಣವನ್ನು ಪ್ರತಿವಾರದ ಮೊದಲನೆಯ ದಿನವೇ ಪ್ರತ್ಯೇಕಿಸಿ, ವಿಶೇಷವಾದ ಸ್ಥಳವೊಂದರಲ್ಲಿ ಇಟ್ಟಿರಬೇಕು. ಆಗ ನಾನು ನಿಮ್ಮಲ್ಲಿಗೆ ಬಂದ ನಂತರ ಹಣವನ್ನು ಸಂಗ್ರಹಿಸುವ ಅವಶ್ಯಕತೆಯಿರುವುದಿಲ್ಲ.


ನಾನು ನಿಮಗೆ ಹೇಳುವುದೇನೆಂದರೆ: ಕಳೆದ ವರ್ಷ ಕೊಡುವುದರಲ್ಲಿ ನೀವೇ ಮೊದಲಿಗರಾಗಿದ್ದಿರಿ ಮತ್ತು ಮೊಟ್ಟಮೊದಲನೆಯದಾಗಿ ಕೊಟ್ಟವರು ನೀವೇ.


ಒಂದುವೇಳೆ ಯೆಹೋವನು ತನ್ನ ಮನಸ್ಸನ್ನು ಬದಲಾಯಿಸಿದರೂ ಬದಲಾಯಿಸಬಹುದು. ಒಂದುವೇಳೆ ಆತನು ನಿಮಗಾಗಿ ಆಶೀರ್ವಾದವನ್ನು ಬಿಟ್ಟುಹೋಗಬಹುದು. ಆಗ ನೀವು ದೇವರಾದ ಯೆಹೋವನಿಗೆ ಧಾನ್ಯ ಮತ್ತು ಪಾನಸಮರ್ಪಣೆ ಮಾಡುವಿರಿ.


ಐಶ್ವರ್ಯವು ಯೆಹೋವನ ಆಶೀರ್ವಾದವೇ. ಶ್ರಮದ ಕೆಲಸವು ಅದನ್ನು ಹೆಚ್ಚಿಸಲಾರದು.


ಅವರು ಆರುನೂರ ಐವತ್ತೇಳು ಕುರಿಗಳನ್ನು ಯೆಹೋವನಿಗೆ ಕೊಟ್ಟರು.


ಯುದ್ಧಕ್ಕೆ ಹೋದ ಸೈನಿಕರಿಗೆ ಬರುವ ಭಾಗದಿಂದ ಮನುಷ್ಯರನ್ನು, ದನಕರುಗಳನ್ನು, ಕತ್ತೆಗಳನ್ನು ಮತ್ತು ಕುರಿಗಳನ್ನು


ತನ್ನ ಭೂಮಿಯನ್ನು ಮರಳಿ ಪಡೆಯಲು ಒಬ್ಬನಿಗೆ ಹತ್ತಿರದ ಸಂಬಂಧಿ ಇಲ್ಲದಿರಬಹುದು. ಆದರೆ ತನ್ನ ಭೂಮಿಯನ್ನು ತನಗಾಗಿ ಮರಳಿ ಪಡೆಯುಲು ಅವನು ಸಾಕಷ್ಟು ಹಣವನ್ನು ಪಡೆಯಬಹುದು.


“ಅವನು ಕುರಿಮರಿಯನ್ನು ಕೊಡುವುದಕ್ಕೆ ಶಕ್ತನಾಗಿಲ್ಲದಿದ್ದರೆ, ಎರಡು ಬೆಳವಕ್ಕಿಗಳನ್ನಾಗಲಿ ಅಥವಾ ಎರಡು ಪಾರಿವಾಳದ ಮರಿಗಳನ್ನಾಗಲಿ ತಂದು ಅವುಗಳಲ್ಲಿ ಒಂದನ್ನು ದೋಷಪರಿಹಾರಕ ಯಜ್ಞವನ್ನಾಗಿಯೂ ಇನ್ನೊಂದನ್ನು ಸರ್ವಾಂಗಹೋಮವಾಗಿಯೂ ಸಮರ್ಪಿಸಬೇಕು.


ನೀವು ಕೊಡಬೇಕೆಂದು ಕೊಟ್ಟರೆ ನಿಮ್ಮ ದಾನವು ಸ್ವೀಕೃತವಾಗುವುದು. ನಿಮ್ಮ ದಾನದ ಮೌಲ್ಯಮಾಪನವು ನೀವು ಏನನ್ನು ಹೊಂದಿದ್ದೀರಿ ಎಂಬುದರ ಮೇಲೆಯೇ ಹೊರತು ನೀವು ಏನನ್ನು ಹೊಂದಿಲ್ಲ ಎಂಬುದರ ಮೇಲೆ ಆಧಾರಗೊಂಡಿಲ್ಲ.


ಸಹಾಯ ಮಾಡುವುದಕ್ಕೆ ಬಯಸಿದ ಇಸ್ರೇಲರೆಲ್ಲರೂ ಯೆಹೋವನಿಗೆ ಕಾಣಿಕೆಗಳನ್ನು ತಂದುಕೊಟ್ಟರು. ಈ ಕಾಣಿಕೆಗಳನ್ನು ಗಂಡಸರು ಮತ್ತು ಹೆಂಗಸರು ಕೊಡುವುದಕ್ಕೆ ಬಯಸಿದ್ದರಿಂದ ಉದಾರವಾಗಿ ಕೊಟ್ಟರು. ಯೆಹೋವನು ಮೋಶೆಗೆ ಮತ್ತು ಜನರಿಗೆ ಆಜ್ಞಾಪಿಸಿದ ಎಲ್ಲಾ ವಸ್ತುಗಳನ್ನು ಮಾಡುವುದಕ್ಕೆ ಈ ಕಾಣಿಕೆಗಳು ಉಪಯೋಗಿಸಲ್ಪಟ್ಟವು.


“ನಿಮ್ಮ ಹೊಲಗಳ ಬೆಳೆಯನ್ನು ಕೊಯ್ಯಲು ಪ್ರಾರಂಭಿಸಿದ ದಿನದಿಂದ ಏಳು ವಾರಗಳನ್ನು ಲೆಕ್ಕ ಮಾಡಿರಿ.


ಯೆಹೋವನು ತನ್ನ ವಾಸಸ್ಥಾನಕ್ಕಾಗಿ ಆರಿಸಿಕೊಳ್ಳುವ ಸ್ಥಳದಲ್ಲಿ ನೀವೂ ನಿಮ್ಮ ಜನರೂ ಒಟ್ಟಾಗಿ ಸೇರಿ ದೇವರ ಸನ್ನಿಧಾನದಲ್ಲಿ ಸಂತೋಷಪಡಿರಿ. ನಿಮ್ಮ ಹೆಂಡತಿಮಕ್ಕಳನ್ನು ಅಲ್ಲದೆ ನಿಮ್ಮ ಸೇವಕಸೇವಕಿಯರನ್ನು ನಿಮ್ಮ ಪಟ್ಟಣದಲ್ಲಿರುವ ಲೇವಿಯರನ್ನು ಮತ್ತು ವಿಧವೆಯರನ್ನು, ಅನಾಥರನ್ನು, ಪರದೇಶಿಗಳನ್ನು ಕರೆದುಕೊಂಡು ಸಂತೋಷಪಡಿರಿ.


“ಆ ಭಾನುವಾರ ಬೆಳಿಗ್ಗೆ ಮೊದಲುಗೊಂಡು ಅಂದರೆ ನೈವೇದ್ಯವಾಗಿ ನಿವಾಳಿಸುವುದಕ್ಕಾಗಿ ಸಿವುಡನ್ನು ತಂದ ದಿನದಿಂದ ಹಿಡಿದು ಏಳು ವಾರಗಳನ್ನು ಲೆಕ್ಕಿಸಿರಿ.


“ನಿಮ್ಮ ಪ್ರಥಮಫಲಗಳ ಹಬ್ಬದಲ್ಲಿ ಅಂದರೆ ವಾರಗಳ ಹಬ್ಬದಲ್ಲಿ ನೀವು ಹೊಸದಾಗಿ ಬೆಳೆದ ಗೋಧಿಯನ್ನು ಯೆಹೋವನಿಗೆ ಅರ್ಪಿಸುವಾಗ, ದೇವರನ್ನು ಆರಾಧಿಸಲು ನೀವು ಸಭೆ ಸೇರಬೇಕು. ನೀವು ಯಾವ ಪ್ರಯಾಸದ ಕೆಲಸವನ್ನೂ ಮಾಡಬಾರದು.


ನಾವು ಕಾಣಿಕೆಯಾಗಿ ಕೊಟ್ಟಿರುವ ವಸ್ತುಗಳು ನನ್ನಿಂದಾಗಲಿ ಮತ್ತು ನನ್ನ ಜನರಿಂದಾಗಲಿ ಬರಲಿಲ್ಲ. ಇವೆಲ್ಲವೂ ನಿನ್ನಿಂದಲೇ ಬಂದವುಗಳು. ನಿನ್ನಿಂದ ನಾವು ಹೊಂದಿದವುಗಳನ್ನೇ ನಿನಗೆ ಕೊಟ್ಟಿದ್ದೇವೆ.


ಕೋರೆ ಎಂಬ ಲೇವಿಯು ಜನರು ದೇವರಿಗೆ ಸ್ವ ಇಚ್ಛೆಯಿಂದ ಸಮರ್ಪಿಸಿದ ಕಾಣಿಕೆಗೆ ಮುಖ್ಯಸ್ತನಾಗಿದ್ದನು. ಅವನು ಅದರ ಲೆಕ್ಕವನ್ನು ಒಪ್ಪಿಸುತ್ತಿದ್ದನು. ಅಲ್ಲದೆ ಯೆಹೋವನಿಗೆ ಕೊಟ್ಟವುಗಳನ್ನು ಮತ್ತು ಯೆಹೋವನಿಗೆ ಮೀಸಲಾಗಿಟ್ಟ ಕಾಣಿಕೆಗಳನ್ನು ಹಂಚಿಕೊಡುವುದು ಅವನ ಜವಾಬ್ದಾರಿಕೆಯಾಗಿತ್ತು. ಅಲ್ಲದೆ ಅವನು ಪೂರ್ವದ ಬಾಗಿಲಿನ ದ್ವಾರಪಾಲಕನಾಗಿದ್ದನು. ಅವನು ಲೇವಿಯನಾದ ಇಮ್ನನ ಮಗನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು