Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 16:13 - ಪರಿಶುದ್ದ ಬೈಬಲ್‌

13 “ಕಣಗಳ ಕೆಲಸ ಮತ್ತು ದ್ರಾಕ್ಷಿಯ ಆಲೆಗಳ ಕೆಲಸ ಮುಕ್ತಾಯವಾಗಿ ನಿಮ್ಮ ಮನೆಗಳಲ್ಲಿ ಅವುಗಳನ್ನು ಶೇಖರಿಸಿದ ಬಳಿಕ ಏಳು ದಿನಗಳ ನಂತರ ನೀವು ಪರ್ಣಶಾಲೆಗಳ ಹಬ್ಬವನ್ನು ಆಚರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ನೀವು ಕಣದ ಕೆಲಸವನ್ನೂ, ದ್ರಾಕ್ಷಿ ಆಲೆಯ ಕೆಲಸವನ್ನೂ ಪೂರೈಸಿ, ಬೆಳೆಯನ್ನು ಮನೆಗೆ ತಂದಾಗ ಏಳು ದಿನಗಳವರೆಗೂ ಪರ್ಣಶಾಲೆಗಳ ಹಬ್ಬವನ್ನು ಆಚರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 “ನೀವು ಕಣದ ಕೆಲಸವನ್ನೂ ಆಲೆಯ ಕೆಲಸವನ್ನೂ ಪೂರೈಸಿ, ಬೆಳೆಯನ್ನು ಮನೆಗೆ ತಂದಾಗ, ಏಳು ದಿನಗಳವರೆಗೂ ಪರ್ಣಕುಠೀರಗಳ ಜಾತ್ರೆಯನ್ನು ಆಚರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ನೀವು ಕಣದ ಕೆಲಸವನ್ನೂ ಆಲೆಯ ಕೆಲಸವನ್ನೂ ಪೂರೈಸಿ ಬೆಳೆಯನ್ನು ಮನೆಗೆ ತಂದಾಗ ಏಳು ದಿನಗಳವರೆಗೂ ಪರ್ಣಶಾಲೆಗಳ ಜಾತ್ರೆಯನ್ನು ಆಚರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ನೀವು ಕಣದ ಕೆಲಸವನ್ನೂ ದ್ರಾಕ್ಷಿ ಆಲೆಯ ಕೆಲಸವನ್ನೂ ಪೂರೈಸಿ, ಬೆಳೆಯನ್ನು ಮನೆಗೆ ತಂದಾಗ, ಏಳು ದಿನಗಳವರೆಗೂ ಗುಡಾರಗಳ ಹಬ್ಬವನ್ನು ಆಚರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 16:13
14 ತಿಳಿವುಗಳ ಹೋಲಿಕೆ  

“ಇದಲ್ಲದೆ ನೀವು ಸುಗ್ಗಿಯ ಜಾತ್ರೆಯನ್ನು ಆಚರಿಸಬೇಕು. ನೀವು ಬಿತ್ತಿದ ಹೊಲಗಳಲ್ಲಿ ಬೆಳೆಗಳನ್ನು ಕೊಯ್ಯುವ ಕಾಲದಲ್ಲಿ ಈ ಜಾತ್ರೆಯು ಆರಂಭವಾಗುವುದು. “ಇದಲ್ಲದೆ ಫಲಸಂಗ್ರಹ ಜಾತ್ರೆಯನ್ನೂ ನೀವು ಆಚರಿಸಬೇಕು. ವರ್ಷಾಂತ್ಯದಲ್ಲಿ ನೀವು ಹೊಲತೋಟಗಳ ಬೆಳೆಗಳನ್ನೆಲ್ಲಾ ಒಟ್ಟುಗೂಡಿಸುವ ಕಾಲದಲ್ಲಿ ಇದು ಆರಂಭವಾಗುವುದು.


ಆಗ ಯೆಹೂದ್ಯರ ಪರ್ಣಕುಟೀರಗಳ ಹಬ್ಬದ ಸಮಯವಾಗಿತ್ತು.


ಪರ್ಣಶಾಲೆಗಳ ಹಬ್ಬದ ದಿವಸ ಇಸ್ರೇಲರೆಲ್ಲರೂ ಅರಸನಾದ ಸೊಲೊಮೋನನ ಮುಂದೆ ಸೇರಿಬಂದರು. ಈ ಹಬ್ಬವು ವರ್ಷದ ಏಳನೆಯ ತಿಂಗಳಲ್ಲಿ ನಡೆಯಿತು.


ಇದಲ್ಲದೆ ಮೋಶೆಯ ಧರ್ಮಶಾಸ್ತ್ರದಲ್ಲಿ ಬರೆದಿರುವಂತೆ ಪರ್ಣಶಾಲೆಗಳ ಹಬ್ಬವನ್ನು ಆಚರಿಸಿದರು. ಹಬ್ಬದ ಪ್ರತಿ ದಿವಸಗಳಲ್ಲಿ ನೇಮಿತ ಸರ್ವಾಂಗಹೋಮಗಳನ್ನು ಅರ್ಪಿಸಿದರು.


ಮೋಶೆಯ ಅಪ್ಪಣೆಯ ಪ್ರಕಾರ ಪ್ರತಿನಿತ್ಯವೂ ಸಬ್ಬತ್‌ದಿನಗಳಲ್ಲಿಯೂ ಅಮಾವಾಸ್ಯೆಯ ದಿನಗಳಲ್ಲಿಯೂ ವರ್ಷದ ಮೂರು ಹಬ್ಬದ ದಿನಗಳಲ್ಲಿಯೂ (ಹುಳಿಯಿಲ್ಲದ ರೊಟ್ಟಿಯ ಹಬ್ಬ, ವಾರಗಳ ಹಬ್ಬ ಮತ್ತು ಪರ್ಣಶಾಲೆಗಳ ಹಬ್ಬ) ಆಯಾ ದಿನಗಳಲ್ಲಿ ಯಜ್ಞಗಳನ್ನು ಸಮರ್ಪಿಸುತ್ತಿದ್ದನು.


ಆಮೇಲೆ ಮೋಶೆಯು ನಾಯಕರೊಂದಿಗೆ ಮಾತನಾಡುತ್ತಾ, “ಪ್ರತಿ ಏಳನೆಯ ವರ್ಷದ ಕೊನೆಯಲ್ಲಿ ಅಂದರೆ ಬಿಡುಗಡೆಯ ವರ್ಷದಲ್ಲಿ ನಡೆಯುವ ಪರ್ಣಶಾಲೆಗಳ ಹಬ್ಬದ ಸಮಯದಲ್ಲಿ ಈ ಬೋಧನಾಪುಸ್ತಕವನ್ನು ಓದಬೇಕು.


“ವಾರಗಳ ಹಬ್ಬವನ್ನು ಆಚರಿಸಿರಿ. ಈ ಹಬ್ಬಕ್ಕಾಗಿ ಗೋಧಿಬೆಳೆಯ ಪ್ರಥಮ ಕಾಳನ್ನು ಉಪಯೋಗಿಸಿರಿ ಮತ್ತು ವರ್ಷಾಂತ್ಯದಲ್ಲಿ ಸುಗ್ಗಿಹಬ್ಬವನ್ನು ಆಚರಿಸಿರಿ.


ನೀವು ಕಣದಲ್ಲಿರುವ ಗೋಧಿಯಲ್ಲಿ ಪ್ರಥಮಫಲವನ್ನು ಯೆಹೋವನಿಗೆ ಕಾಣಿಕೆಯಾಗಿ ಕೊಡುವಂತೆಯೇ ನೀವು ಪ್ರಥಮವಾಗಿ ನಾದಿದ ಹಿಟ್ಟಿನಿಂದ ಒಂದು ರೊಟ್ಟಿಯನ್ನು ಯೆಹೋವನಿಗೆ ಕಾಣಿಕೆಯಾಗಿ ಕೊಡಬೇಕು.


ನಾನು ಸ್ವತಃ ಮಿಚ್ಫದಲ್ಲಿ ವಾಸಮಾಡುತ್ತೇವೆ. ಇಲ್ಲಿಗೆ ಬರುವ ಕಸ್ದೀಯರ ಮುಂದೆ ನಿಮ್ಮ ಪರವಾಗಿ ಮಾತನಾಡುತ್ತೇನೆ. ಆ ಕೆಲಸವನ್ನು ನೀವು ನನಗೆ ಬಿಟ್ಟುಬಿಡಿ. ನೀವು ದ್ರಾಕ್ಷಾರಸ, ಹಣ್ಣು ಮತ್ತು ಎಣ್ಣೆ ಇವುಗಳನ್ನು ಸಂಗ್ರಹಿಸಿ ನಿಮ್ಮ ಪಾತ್ರೆಗಳಲ್ಲಿ ತುಂಬಿಸಿಟ್ಟು ನೀವು ಹಿಡಿದುಕೊಂಡ ಪಟ್ಟಣಗಳಲ್ಲಿ ವಾಸಿಸಿರಿ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು