15 ನಿಮ್ಮ ಯೆಹೋವನು ಆರಿಸಿಕೊಂಡಿರುವ ವಿಶೇಷ ಸ್ಥಳದಲ್ಲಿ ಈ ಹಬ್ಬವನ್ನು ಏಳು ದಿನ ಆಚರಿಸಿರಿ. ನಿಮ್ಮ ದೇವರಾದ ಯೆಹೋವನನ್ನು ಘನಪಡಿಸುವುದಕ್ಕಾಗಿ ಸಂತೋಷದಿಂದ ಹಬ್ಬವನ್ನು ಆಚರಿಸಿರಿ. ನಿಮ್ಮ ದೇವರಾದ ಯೆಹೋವನು ನಿಮ್ಮ ಸುಗ್ಗಿಯನ್ನು ಮತ್ತು ನಿಮ್ಮ ಎಲ್ಲಾ ಕೆಲಸಕಾರ್ಯಗಳನ್ನು ಆಶೀರ್ವದಿಸಿದನು. ಆದ್ದರಿಂದ ಸಂತೋಷಪಡಿರಿ!
15 ನಿಮ್ಮ ದೇವರಾದ ಯೆಹೋವನು ಆರಿಸಿಕೊಳ್ಳುವ ಸ್ಥಳದಲ್ಲಿ ನೀವು ಏಳು ದಿನವೂ ಆ ಜಾತ್ರೆಯನ್ನು ಆಚರಿಸಬೇಕು. ನಿಮ್ಮ ವ್ಯವಸಾಯವನ್ನೂ ಮತ್ತು ಬೇರೆ ಎಲ್ಲಾ ಕೆಲಸಗಳನ್ನೂ ಆತನು ಸಫಲ ಮಾಡಿದ್ದರಿಂದ ನೀವು ಬಹಳ ಆನಂದದಿಂದಿರಬೇಕು.
15 ನಿಮ್ಮ ಸರ್ವೇಶ್ವರ ಆರಿಸಿಕೊಳ್ಳುವ ಸ್ಥಳದಲ್ಲಿ ನೀವು ಏಳು ದಿನವೂ ಆ ಜಾತ್ರೆಯನ್ನು ಆಚರಿಸಬೇಕು. ನಿಮ್ಮ ವ್ಯವಸಾಯವನ್ನೂ ಬೇರೆ ಎಲ್ಲಾ ಕೆಲಸಗಳನ್ನೂ ಅವರು ಸಫಲಗೊಳಿಸಿದ್ದರಿಂದ ನೀವು ಬಹಳ ಆನಂದದಿಂದಿರಬೇಕು.
15 ನಿಮ್ಮ ದೇವರಾದ ಯೆಹೋವನು ಆದುಕೊಳ್ಳುವ ಸ್ಥಳದಲ್ಲಿ ನೀವು ಏಳು ದಿನವೂ ಆ ಜಾತ್ರೆಯನ್ನು ಆಚರಿಸಬೇಕು. ನಿಮ್ಮ ವ್ಯವಸಾಯವನ್ನೂ ಬೇರೆ ಎಲ್ಲಾ ಕೆಲಸಗಳನ್ನೂ ಆತನು ಸಫಲವಾಗಿ ಮಾಡಿದ್ದರಿಂದ ನೀವು ಬಹಳ ಆನಂದದಿಂದಿರಬೇಕು.
15 ನಿಮ್ಮ ದೇವರಾದ ಯೆಹೋವ ದೇವರಿಗೆ ಏಳು ದಿವಸ ಯೆಹೋವ ದೇವರು ಆಯ್ದುಕೊಳ್ಳುವ ಸ್ಥಳದಲ್ಲಿ ಹಬ್ಬ ಮಾಡಬೇಕು. ನಿಮ್ಮ ದೇವರಾದ ಯೆಹೋವ ದೇವರು ನಿಮ್ಮನ್ನು ಎಲ್ಲಾ ಆದಾಯದಲ್ಲಿಯೂ, ನಿಮ್ಮ ಎಲ್ಲಾ ಕೆಲಸದಲ್ಲಿಯೂ ಆಶೀರ್ವದಿಸುವುದರಿಂದ ನೀವು ಪರಿಪೂರ್ಣ ಸಂತೋಷದಿಂದ ಇರಬೇಕು.
ನಿಮ್ಮ ದೇವರಾದ ಯೆಹೋವನನ್ನು ನೀವು ಸಂಪೂರ್ಣವಾಗಿ ಪ್ರೀತಿಸಬೇಕೆಂದು ಆಜ್ಞಾಪಿಸುತ್ತೇನೆ. ಆತನ ಆಜ್ಞೆಗಳಿಗೆ, ನಿಯಮಗಳಿಗೆ ಮತ್ತು ವಿಧಿಗಳಿಗೆ ವಿಧೇಯರಾಗಬೇಕೆಂದು ನಾನು ನಿಮಗೆ ಆಜ್ಞಾಪಿಸುತ್ತೇನೆ. ಆಗ ನೀವು ಬದುಕುವಿರಿ ಮತ್ತು ನಿಮ್ಮ ಜನಾಂಗ ದೊಡ್ಡದಾಗಿ ಬೆಳೆಯುವುದು. ನಿಮಗಾಗಿ ತೆಗೆದುಕೊಳ್ಳಲು ಪ್ರವೇಶಿಸಲಿರುವ ದೇಶದಲ್ಲಿ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಆಶೀರ್ವದಿಸುವನು.
ಅಲ್ಲಿ ನಿಮ್ಮ ದೇವರಾದ ಯೆಹೋವನಿಗೆ ವಾರಗಳ ಹಬ್ಬವನ್ನು ಆಚರಿಸಿರಿ. ಅಲ್ಲಿ ನಿಮ್ಮ ವಿಶೇಷ ಕಾಣಿಕೆಗಳನ್ನು ತಂದು ಸಮರ್ಪಿಸಿರಿ. ನಿಮ್ಮ ದೇವರು ನಿಮ್ಮನ್ನು ಎಷ್ಟು ಆಶೀರ್ವದಿಸಿರುತ್ತಾನೆಂದು ಯೋಚಿಸಿ ಅದರ ಪ್ರಕಾರ ನಿಮ್ಮ ಕಾಣಿಕೆಗಳನ್ನು ಸಲ್ಲಿಸಿರಿ.
ಮತ್ತು ಆತನು ಆಶೀರ್ವದಿಸುವನು. ನಿಮ್ಮ ಜನಾಂಗವು ವೃದ್ಧಿಯಾಗುವಂತೆ ಮಾಡುವನು. ನಿಮ್ಮನ್ನೂ ನಿಮ್ಮ ಮಕ್ಕಳನ್ನೂ ಆಶೀರ್ವದಿಸುವನು. ನಿಮ್ಮ ಹೊಲಗಳಲ್ಲಿ ಸಮೃದ್ಧಿಯಾದ ಬೆಳೆಯು ಉಂಟಾಗುವಂತೆ ಆಶೀರ್ವದಿಸುವನು. ಆತನು ನಿಮಗೆ ಧಾನ್ಯ, ಹೊಸ ದ್ರಾಕ್ಷಾರಸ ಮತ್ತು ಎಣ್ಣೆಗಳನ್ನು ಕೊಡುವನು. ನಿಮ್ಮ ದನಕುರಿಗಳು ಮರಿಗಳನ್ನು ಈಯುವಂತೆ ಆಶೀರ್ವದಿಸುವನು. ನಿಮ್ಮ ಪೂರ್ವಿಕರಿಗೆ ವಾಗ್ದಾನ ಮಾಡಿದ ದೇಶದಲ್ಲಿ ನೀವು ನೆಲೆಸಿರುವಾಗ ನಿಮಗೆ ಈ ಆಶೀರ್ವಾದಗಳೆಲ್ಲಾ ಪ್ರಾಪ್ತವಾಗುವವು.
ನಿಮ್ಮ ಹೆಂಡತಿಮಕ್ಕಳೊಂದಿಗೆ, ಸೇವಕಸೇವಕಿಯರೊಂದಿಗೆ ಮತ್ತು ನಿಮ್ಮ ಊರುಗಳಲ್ಲಿರುವ ಲೇವಿಯರೊಂದಿಗೆ, ಪರದೇಶಿಗಳೊಂದಿಗೆ, ಅನಾಥರೊಂದಿಗೆ ಮತ್ತು ವಿಧವೆಯರೊಂದಿಗೆ ಆನಂದದಿಂದ ಹಬ್ಬ ಮಾಡಿರಿ.
“ನಿಮ್ಮ ದೇವರಾದ ಯೆಹೋವನು ತನ್ನ ಆಲಯಕ್ಕಾಗಿ ಆರಿಸಿಕೊಳ್ಳುವ ಆ ವಿಶೇಷ ಸ್ಥಳಕ್ಕೆ ನೀವೆಲ್ಲಾ ವರ್ಷದಲ್ಲಿ ಮೂರು ಬಾರಿ ಅಂದರೆ ಹುಳಿಯಿಲ್ಲದ ರೊಟ್ಟಿಯ ಹಬ್ಬ, ಪಂಚಾಶತ್ತಮ ಹಬ್ಬ ಮತ್ತು ಪರ್ಣಶಾಲೆಗಳ ಹಬ್ಬದಲ್ಲಿ ಸೇರಿಬರಬೇಕು. ಯೆಹೋವನ ಬಳಿಗೆ ಬರುವ ಪ್ರತಿಯೊಬ್ಬನು ಕಾಣಿಕೆಯೊಂದಿಗೆ ಬರಬೇಕು.
ನಿಮ್ಮ ದೇವರಾದ ಯೆಹೋವನು ನಿಮ್ಮ ಕುಲದವರ ಪ್ರಾಂತ್ಯಗಳಿಂದ ಒಂದು ವಿಶೇಷ ಸ್ಥಳವನ್ನು ಆರಿಸಿಕೊಂಡು ಅದಕ್ಕೆ ತನ್ನ ಹೆಸರಿಡುವನು. ಅಲ್ಲಿ ಆತನ ಆಲಯ ಕಟ್ಟಲ್ಪಡುವುದು. ಆತನನ್ನು ಆರಾಧಿಸಲು ನೀವು ಅಲ್ಲಿಗೆ ಹೋಗಬೇಕು.
ಸೆರೆವಾಸದಿಂದ ಮರಳಿಬಂದ ಇಸ್ರೇಲರು ಬಿಡಾರಗಳನ್ನು ಹಾಕಿಕೊಂಡು ಅವುಗಳಲ್ಲಿ ವಾಸಿಸಿದರು. ನೂನನ ಮಗನಾದ ಯೆಹೋಶುವನ ಕಾಲದಿಂದ ಇಂದಿನವರೆಗೂ ಇಸ್ರೇಲರು ಇಂಥ ಪರ್ಣಶಾಲೆಗಳ ಹಬ್ಬವನ್ನು ಆಚರಿಸಲಿಲ್ಲ. ಪ್ರತಿಯೊಬ್ಬರೂ ಬಹು ಸಂತೋಷಗೊಂಡಿದ್ದರು.
ಯಾಕೆಂದರೆ ಆ ದಿವಸದಲ್ಲಿ ಯೆಹೂದ್ಯರು ತಮ್ಮ ಶತ್ರುಗಳನ್ನು ಸದೆಬಡಿದರು. ಆ ದಿವಸದಲ್ಲಿ ಅವರಿಗೆ ಶೋಕದ ಬದಲಾಗಿ ಸಂತಸವು ಒದಗಿಬಂತು. ಆ ದಿವಸದಲ್ಲಿ ಅವರ ರೋಧನವು ಹರ್ಷಧ್ವನಿಯಾಗಿ ಮಾರ್ಪಟ್ಟಿತು. ಮೊರ್ದೆಕೈಯು ಎಲ್ಲಾ ಯೆಹೂದ್ಯರಿಗೆ ಪತ್ರ ಬರೆಯಿಸಿದನು. ಆ ದಿವಸದಲ್ಲಿ ಹಬ್ಬವನ್ನು ಆಚರಿಸಿ ಒಬ್ಬರಿಗೊಬ್ಬರು ಉಡುಗೊರೆಗಳನ್ನು ಕೊಡಬೇಕು ಎಂಬುದಾಗಿ ಬರೆಯಿಸಿದನು.