ಧರ್ಮೋಪದೇಶಕಾಂಡ 16:16 - ಪರಿಶುದ್ದ ಬೈಬಲ್16 “ನಿಮ್ಮ ದೇವರಾದ ಯೆಹೋವನು ತನ್ನ ಆಲಯಕ್ಕಾಗಿ ಆರಿಸಿಕೊಳ್ಳುವ ಆ ವಿಶೇಷ ಸ್ಥಳಕ್ಕೆ ನೀವೆಲ್ಲಾ ವರ್ಷದಲ್ಲಿ ಮೂರು ಬಾರಿ ಅಂದರೆ ಹುಳಿಯಿಲ್ಲದ ರೊಟ್ಟಿಯ ಹಬ್ಬ, ಪಂಚಾಶತ್ತಮ ಹಬ್ಬ ಮತ್ತು ಪರ್ಣಶಾಲೆಗಳ ಹಬ್ಬದಲ್ಲಿ ಸೇರಿಬರಬೇಕು. ಯೆಹೋವನ ಬಳಿಗೆ ಬರುವ ಪ್ರತಿಯೊಬ್ಬನು ಕಾಣಿಕೆಯೊಂದಿಗೆ ಬರಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಹುಳಿಯಿಲ್ಲದ ರೊಟ್ಟಿಗಳ ಹಬ್ಬದಲ್ಲಿಯೂ, ಪಂಚಾಶತ್ತಮ ದಿನದ ಹಬ್ಬದಲ್ಲಿಯೂ ಮತ್ತು ಪರ್ಣಶಾಲೆಗಳ ಹಬ್ಬದಲ್ಲಿಯೂ ಅಂತು ವರ್ಷಕ್ಕೆ ಮೂರಾವರ್ತಿ ನಿಮ್ಮಲ್ಲಿರುವ ಗಂಡಸರೆಲ್ಲರೂ ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ಆತನು ಆರಿಸಿಕೊಳ್ಳುವ ಸ್ಥಳದಲ್ಲಿ ಕಾಣಿಸಿಕೊಳ್ಳಬೇಕು. ಒಬ್ಬರೂ ಕೈಯಲ್ಲಿ ಕಾಣಿಕೆಯಿಲ್ಲದೆ ಆತನ ಸನ್ನಿಧಿಗೆ ಬರಬಾರದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 “ಹುಳಿಯಿಲ್ಲದ ರೊಟ್ಟಿಗಳ ಜಾತ್ರೆಯಲ್ಲಿ, ಪಂಚಾಶತ್ತಮ ದಿನದ ಜಾತ್ರೆಯಲ್ಲಿ, ಕುಟೀರಗಳ ಜಾತ್ರೆಯಲ್ಲಿ, ಹೀಗೆ ವರ್ಷಕ್ಕೆ ಮೂರಾವರ್ತಿ ನಿಮ್ಮಲ್ಲಿರುವ ಗಂಡಸರೆಲ್ಲರೂ ನಿಮ್ಮ ದೇವರಾದ ಸರ್ವೇಶ್ವರನ ಸನ್ನಿಧಿಯಲ್ಲಿ, ಅವರು ಆರಿಸಿಕೊಳ್ಳುವ ಸ್ಥಳದಲ್ಲಿ ಕಾಣಿಸಿಕೊಳ್ಳಬೇಕು. ಕೈಯಲ್ಲಿ ಕಾಣಿಕೆಯಿಲ್ಲದೆ ಒಬ್ಬರೂ ಅವರ ಸನ್ನಿಧಿಗೆ ಬರಕೂಡದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಹುಳಿಯಿಲ್ಲದ ರೊಟ್ಟಿಗಳ ಜಾತ್ರೆಯಲ್ಲಿಯೂ ಪಂಚಾಶತ್ತಮದಿನದ ಜಾತ್ರೆಯಲ್ಲಿಯೂ ಪರ್ಣಶಾಲೆಗಳ ಜಾತ್ರೆಯಲ್ಲಿಯೂ ಅಂತು ವರುಷಕ್ಕೆ ಮೂರಾವರ್ತಿ ನಿಮ್ಮಲ್ಲಿರುವ ಗಂಡಸರೆಲ್ಲರೂ ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ಆತನು ಆದುಕೊಳ್ಳುವ ಸ್ಥಳದಲ್ಲಿ ಕಾಣಿಸಿಕೊಳ್ಳಬೇಕು. ಒಬ್ಬರೂ ಕೈಯಲ್ಲಿ ಕಾಣಿಕೆಯಿಲ್ಲದೆ ಆತನ ಸನ್ನಿಧಿಗೆ ಬರಕೂಡದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಹುಳಿಯಿಲ್ಲದ ರೊಟ್ಟಿಗಳ ಹಬ್ಬದಲ್ಲಿಯೂ ವಾರಗಳ ಹಬ್ಬದಲ್ಲಿಯೂ ಮತ್ತು ಗುಡಾರಗಳ ಹಬ್ಬದಲ್ಲಿಯೂ ವರ್ಷಕ್ಕೆ ಮೂರು ಸಾರಿ ನಿಮ್ಮ ಎಲ್ಲಾ ಪುರುಷರು, ನಿಮ್ಮ ಯೆಹೋವ ದೇವರ ಮುಂದೆ ಅವರು ಆಯ್ದುಕೊಳ್ಳುವ ಸ್ಥಳದಲ್ಲಿ ಕಾಣಿಸಿಕೊಳ್ಳಬೇಕು. ಒಬ್ಬರೂ ಯೆಹೋವ ದೇವರ ಸಮ್ಮುಖಕ್ಕೆ ಬರೀ ಕೈಯಿಂದ ಬರಬಾರದು. ಅಧ್ಯಾಯವನ್ನು ನೋಡಿ |
ಸರ್ವಶಕ್ತನಾದ ಯೆಹೋವನು ಹೇಳುವುದೇನೆಂದರೆ, “ನೀವು ದೊಡ್ಡ ಸುಗ್ಗಿಯನ್ನು ಎದುರು ನೋಡುತ್ತಿದ್ದೀರಿ. ಆದರೆ ನೀವು ಪೈರು ಕೊಯ್ಯಲು ಹೋಗುವಾಗ ಸ್ಪಲ್ಪವೇ ಕಾಳು ಇರುವುದು. ಅದನ್ನು ನೀವು ಮನೆಗೆ ತಂದಾಗ ನಾನು ಗಾಳಿಯನ್ನು ಕಳುಹಿಸಿ ಅವುಗಳನ್ನು ಹಾರಿಸಿಬಿಡುವೆನು. ಹೀಗೆಲ್ಲಾ ಯಾಕೆ ಆಗುತ್ತಿದೆ? ಯಾಕೆಂದರೆ, ನನ್ನ ಆಲಯವು ಇನ್ನೂ ಹಾಳುಬಿದ್ದಿದ್ದರೂ ನೀವೆಲ್ಲರೂ ನಿಮ್ಮ ನಿಮ್ಮ ಮನೆಗಳನ್ನು ನೋಡಿಕೊಳ್ಳುವುದಕ್ಕಾಗಿ ಓಡಿಹೋಗುತ್ತೀರಿ.
ಅರ್ಚಕರು ಮತ್ತು ಮಾಂತ್ರಿಕರು, “ಇಸ್ರೇಲರ ಪವಿತ್ರ ಪೆಟ್ಟಿಗೆಯನ್ನು ಹಿಂದಕ್ಕೆ ಕಳುಹಿಸುವುದಾದರೆ, ಬರಿದಾಗಿ ಕಳುಹಿಸಬೇಡಿ. ನೀವು ಕಾಣಿಕೆಗಳನ್ನು ಕಳುಹಿಸಲೇಬೇಕು. ಆಗ ಇಸ್ರೇಲರ ದೇವರು ನಿಮ್ಮ ಪಾಪಗಳನ್ನು ಪರಿಹರಿಸುತ್ತಾನೆ. ಆಗ ನೀವೆಲ್ಲಾ ಗುಣಹೊಂದುವಿರಿ; ಶುದ್ಧರಾಗುವಿರಿ. ದೇವರು ನಿಮ್ಮನ್ನು ದಂಡಿಸುವುದನ್ನು ನಿಲ್ಲಿಸಬೇಕಾದರೆ ನೀವು ಈ ಕಾರ್ಯಗಳನ್ನು ಮಾಡಬೇಕು. ಆಗ ದೇವರು ನಿಮ್ಮನ್ನು ಬಾಧಿಸುವುದಿಲ್ಲ” ಎಂದು ಉತ್ತರಿಸಿದರು.