ಧರ್ಮೋಪದೇಶಕಾಂಡ 16:18 - ಪರಿಶುದ್ದ ಬೈಬಲ್18 “ನಿಮ್ಮ ದೇವರು ನಿಮಗೆ ಕೊಡುವ ದೇಶದ ಎಲ್ಲಾ ಪಟ್ಟಣಗಳಲ್ಲಿ ನ್ಯಾಯಾಧೀಶರನ್ನೂ ಅಧಿಕಾರಿಗಳನ್ನೂ ಆರಿಸಿಕೊಳ್ಳಿರಿ. ಪ್ರತಿಯೊಂದು ಕುಲದವರು ಇದನ್ನು ಮಾಡಬೇಕು; ಆರಿಸಲ್ಪಟ್ಟವರು ನ್ಯಾಯವಂತರಾಗಿರಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಪ್ರತಿಯೊಂದು ಕುಲವು ಇರುವ ಪ್ರದೇಶದಲ್ಲಿ ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ಎಲ್ಲಾ ಊರುಗಳಲ್ಲಿಯೂ, ನ್ಯಾಯಾಧಿಪತಿಗಳನ್ನೂ ಮತ್ತು ಅಧಿಕಾರಿಗಳನ್ನೂ ನೀವು ನೇಮಿಸಬೇಕು. ಅವರು ಜನರಿಗೋಸ್ಕರ ನ್ಯಾಯವನ್ನು ವಿಚಾರಿಸಿ ಸರಿಯಾದ ತೀರ್ಪುಕೊಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 “ನಿಮ್ಮ ದೇವರಾದ ಸರ್ವೇಶ್ವರ ನಿಮ್ಮ ಪ್ರತಿಯೊಂದು ಕುಲಕ್ಕೆ ಕೊಡುವ ಎಲ್ಲ ಊರುಗಳಲ್ಲಿ ನ್ಯಾಯಾಧಿಪತಿಗಳನ್ನೂ ಅಧಿಕಾರಿಗಳನ್ನೂ ನೀವು ನೇಮಿಸಬೇಕು. ಅಂಥವರು ಜನರಿಗೆ ನ್ಯಾಯವನ್ನು ವಿಚಾರಿಸಿ, ಸರಿಯಾದ ತೀರ್ಪುಕೊಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಪ್ರತಿಯೊಂದು ಕುಲವು ಇರುವ ಪ್ರದೇಶದಲ್ಲಿ ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ಎಲ್ಲಾ ಊರುಗಳಲ್ಲಿಯೂ ನ್ಯಾಯಾಧಿಪತಿಗಳನ್ನೂ ಅಧಿಕಾರಿಗಳನ್ನೂ ನೀವು ನೇವಿುಸಬೇಕು. ಅವರು ಜನರಿಗೋಸ್ಕರ ನ್ಯಾಯವನ್ನು ವಿಚಾರಿಸಿ ಸರಿಯಾದ ತೀರ್ಪುಕೊಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಯೆಹೋವ ದೇವರು ನಿಮ್ಮ ಗೋತ್ರಗಳ ಪ್ರಕಾರ ಕೊಡುವ ನಿಮ್ಮ ಎಲ್ಲಾ ಊರುಗಳಲ್ಲಿ ನಿಮಗೆ ನ್ಯಾಯಾಧಿಪತಿಗಳನ್ನೂ, ಅಧಿಕಾರಿಗಳನ್ನೂ ಇಟ್ಟುಕೊಳ್ಳಬೇಕು. ಅವರು ಜನಕ್ಕೆ ನೀತಿಯಿಂದ ನ್ಯಾಯತೀರಿಸಬೇಕು. ಅಧ್ಯಾಯವನ್ನು ನೋಡಿ |
ಎಜ್ರನೇ, ನಿನ್ನ ದೇವರು ನಿನಗೆ ಕೊಟ್ಟಿರುವ ಜ್ಞಾನಶಕ್ತಿಯನ್ನು ಉಪಯೋಗಿಸಿ ನ್ಯಾಯಾಧೀಶರನ್ನೂ ನ್ಯಾಯಶಾಸ್ತ್ರಿಗಳನ್ನೂ ಆರಿಸಿ ನೇಮಿಸಲು ನಿನಗೆ ಅಧಿಕಾರ ಕೊಟ್ಟಿದ್ದೇನೆ. ಯೂಫ್ರೇಟೀಸ್ ನದಿಯ ಪಶ್ಚಿಮ ಪ್ರಾಂತ್ಯಗಳಲ್ಲಿ ವಾಸಮಾಡುವ ಜನರಿಗೆಲ್ಲಾ ಅವರು ನ್ಯಾಯತೀರಿಸುವರು. ನಿನ್ನ ದೇವರ ಕಟ್ಟಳೆಗಳನ್ನು ಅರಿತವರಿಗೆಲ್ಲಾ ಅವರು ನ್ಯಾಯತೀರಿಸುವರು. ಯಾರಿಗಾದರೂ ದೇವರ ಕಟ್ಟಳೆ ಗೊತ್ತಿಲ್ಲದಿದ್ದಲ್ಲಿ ಆ ನ್ಯಾಯಶಾಸ್ತ್ರಿಗಳು ಅವರಿಗೆ ಕಲಿಸಬೇಕು.