ಧರ್ಮೋಪದೇಶಕಾಂಡ 16:2 - ಪರಿಶುದ್ದ ಬೈಬಲ್2 ನಿಮ್ಮ ದೇವರು ತನ್ನ ವಾಸಸ್ಥಾನಕ್ಕಾಗಿ ಆರಿಸಿಕೊಳ್ಳುವ ಪ್ರತ್ಯೇಕ ಸ್ಥಳಕ್ಕೆ ನೀವು ಹೋಗಿ ಅಲ್ಲಿ ಪಸ್ಕದ ಯಜ್ಞಾರ್ಪಣೆ ಮಾಡಿ ನಿಮ್ಮ ಯೆಹೋವನನ್ನು ಮಹಿಮೆಪಡಿಸಬೇಕು. ಅಲ್ಲಿ ದನವನ್ನಾಗಲಿ ಆಡನ್ನಾಗಲಿ ಯಜ್ಞವಾಗಿ ಅರ್ಪಿಸಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ನೀವು ಆಡು ಕುರಿಗಳಲ್ಲಾಗಲಿ, ದನಗಳಲ್ಲಾಗಲಿ ಪಸ್ಕದ ಪಶುವನ್ನು ಯೆಹೋವನು ತನ್ನ ಹೆಸರನ್ನು ಸ್ಥಾಪಿಸುವುದಕ್ಕೆ ಆರಿಸಿಕೊಳ್ಳುವ ಸ್ಥಳದಲ್ಲೇ ಆತನಿಗಾಗಿ ವಧಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಆಡುಕುರಿಗಳಲ್ಲಾಗಲಿ, ದನಗಳಲ್ಲಿ ಆಗಲಿ ಪಾಸ್ಕದ ಪಶುವನ್ನು, ಸರ್ವೇಶ್ವರ ತಮ್ಮ ನಾಮಸ್ಥಾಪನೆಗಾಗಿ ಆರಿಸಿಕೊಳ್ಳುವ ಸ್ಥಳದಲ್ಲೇ ಅವರಿಗಾಗಿ ನೀವು ಅದನ್ನು ವಧಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ನೀವು ಆಡುಕುರಿಗಳಲ್ಲಾಗಲಿ ದನಗಳಲ್ಲಾಗಲಿ ಪಸ್ಕದ ಪಶುವನ್ನು ಯೆಹೋವನು ತನ್ನ ಹೆಸರನ್ನು ಸ್ಥಾಪಿಸುವದಕ್ಕೆ ಆದುಕೊಳ್ಳುವ ಸ್ಥಳದಲ್ಲೇ ಆತನಿಗಾಗಿ ವಧಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಹೀಗಿರುವುದರಿಂದ ಯೆಹೋವ ದೇವರು ತಮ್ಮ ಹೆಸರನ್ನು ಸ್ಥಾಪಿಸುವುದಕ್ಕೆ ಆಯ್ದುಕೊಳ್ಳುವ ಸ್ಥಳದಲ್ಲಿ ನಿಮ್ಮ ದೇವರಾದ ಯೆಹೋವ ದೇವರಿಗೆ ಆಡುಕುರಿಗಳಲ್ಲಾಗಲಿ, ದನಗಳಲ್ಲಿ ಆಗಲಿ ಪಸ್ಕದ ಪಶುವನ್ನಾಗಿ ಅರ್ಪಿಸಬೇಕು. ಅಧ್ಯಾಯವನ್ನು ನೋಡಿ |
ನಿಮ್ಮ ದೇವರಾದ ಯೆಹೋವನು ಆರಿಸಿಕೊಂಡಿರುವ ಮತ್ತು ಆತನು ನಿಮ್ಮೊಂದಿಗಿರುವ ಆ ವಿಶೇಷ ಸ್ಥಳದಲ್ಲಿಯೇ ನೀವು ಆ ಕಾಣಿಕೆಗಳನ್ನು ತಿನ್ನಬೇಕು. ನೀವು ಅಲ್ಲಿಗೆ ನಿಮ್ಮ ಗಂಡುಹೆಣ್ಣು ಮಕ್ಕಳೊಂದಿಗೆ, ನಿಮ್ಮ ಎಲ್ಲಾ ಸೇವಕರೊಂದಿಗೆ ಮತ್ತು ನಿಮ್ಮ ಊರುಗಳಲ್ಲಿ ವಾಸವಾಗಿರುವ ಲೇವಿಯರೊಂದಿಗೆ ಹೋಗಿ ನಿಮ್ಮ ದೇವರಾದ ಯೆಹೋವನೊಂದಿಗೆ ಆನಂದಿಸಿರಿ; ನೀವು ದುಡಿದು ಸಂಪಾದಿಸಿದವುಗಳನ್ನು ಅನುಭವಿಸಿರಿ.
ಯಜ್ಞ ಪಶುವಿನೊಂದಿಗೆ ಹುಳಿಯಿಲ್ಲದ ರೊಟ್ಟಿಯನ್ನು ಏಳು ದಿನ ತಿನ್ನಬೇಕು. ಈ ಸಮಯದಲ್ಲಿ ಹುಳಿ ಬೆರೆಸಿದ ರೊಟ್ಟಿಯನ್ನು ತಿನ್ನಲೇಬಾರದು. ಹುಳಿಯಿಲ್ಲದ ರೊಟ್ಟಿಗೆ ‘ಸಂಕಟದ ರೊಟ್ಟಿ’ ಎಂದು ಕರೆಯಬೇಕು. ಯಾಕೆಂದರೆ ನೀವು ಈಜಿಪ್ಟಿನಲ್ಲಿ ದಾಸತ್ವದಲ್ಲಿದ್ದಾಗ ಅನುಭವಿಸಿದ್ದ ಸಂಕಟವನ್ನು ಅದು ನೆನಪಿಗೆ ತರುತ್ತದೆ. ನೀವು ಅಲ್ಲಿಂದ ತುಂಬಾ ಅವಸರವಾಗಿ ಹೊರಬಂದಿರಿ! ಇದನ್ನು ನಿಮ್ಮ ಜೀವಮಾನ ಪರ್ಯಂತ ಜ್ಞಾಪಿಸಿಕೊಳ್ಳಬೇಕು.