Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 16:3 - ಪರಿಶುದ್ದ ಬೈಬಲ್‌

3 ಯಜ್ಞ ಪಶುವಿನೊಂದಿಗೆ ಹುಳಿಯಿಲ್ಲದ ರೊಟ್ಟಿಯನ್ನು ಏಳು ದಿನ ತಿನ್ನಬೇಕು. ಈ ಸಮಯದಲ್ಲಿ ಹುಳಿ ಬೆರೆಸಿದ ರೊಟ್ಟಿಯನ್ನು ತಿನ್ನಲೇಬಾರದು. ಹುಳಿಯಿಲ್ಲದ ರೊಟ್ಟಿಗೆ ‘ಸಂಕಟದ ರೊಟ್ಟಿ’ ಎಂದು ಕರೆಯಬೇಕು. ಯಾಕೆಂದರೆ ನೀವು ಈಜಿಪ್ಟಿನಲ್ಲಿ ದಾಸತ್ವದಲ್ಲಿದ್ದಾಗ ಅನುಭವಿಸಿದ್ದ ಸಂಕಟವನ್ನು ಅದು ನೆನಪಿಗೆ ತರುತ್ತದೆ. ನೀವು ಅಲ್ಲಿಂದ ತುಂಬಾ ಅವಸರವಾಗಿ ಹೊರಬಂದಿರಿ! ಇದನ್ನು ನಿಮ್ಮ ಜೀವಮಾನ ಪರ್ಯಂತ ಜ್ಞಾಪಿಸಿಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಅದರೊಂದಿಗೆ ಹುಳಿಹಾಕಿದ ರೊಟ್ಟಿಯನ್ನು ತಿನ್ನಬಾರದು; ಯಾಕೆಂದರೆ ನೀವು (ರೊಟ್ಟಿಗೆ ಹುಳಿಹಾಕುವುದಕ್ಕೆ ಅವಕಾಶವಿಲ್ಲದೆ) ಅವಸರದಿಂದ ಐಗುಪ್ತದೇಶವನ್ನು ಬಿಟ್ಟು ಬಂದಿರಿ. ನಿಮಗೆ ಬಿಡುಗಡೆಯಾದ ಆ ದಿನವು ನಿಮ್ಮ ಜೀವಮಾನದಲ್ಲೆಲ್ಲಾ ನೆನಪಿನಲ್ಲಿಟ್ಟುಕೊಳ್ಳುವಂತೆ ನೀವು ಕಷ್ಟವನ್ನು ಸೂಚಿಸುವ ಹುಳಿಯಿಲ್ಲದ ರೊಟ್ಟಿಗಳನ್ನು ಏಳು ದಿನಗಳ ವರೆಗೂ ತಿನ್ನಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಅದರೊಂದಿಗೆ ಹುಳಿಹಾಕಿದ ರೊಟ್ಟಿಯನ್ನು ತಿನ್ನಬಾರದು; ಏಕೆಂದರೆ ನೀವು ರೊಟ್ಟಿಗೆ ಹುಳಿಹಾಕುವುದಕ್ಕೆ ಅವಕಾಶವಿಲ್ಲದೆ ಅವಸರದಿಂದ ಈಜಿಪ್ಟನ್ನು ಬಿಟ್ಟುಬಂದಿರಿ. ಈಜಿಪ್ಟ್ ದೇಶದಿಂದ ನಿಮಗೆ ಬಿಡುಗಡೆಯಾದ ದಿನವು ನಿಮ್ಮ ಜೀವಮಾನವೆಲ್ಲಾ ನೆನಪಿನಲ್ಲಿರುವಂತೆ, ಕಷ್ಟವನ್ನು ಸೂಚಿಸುವ ಹುಳಿಯಿಲ್ಲದ ರೊಟ್ಟಿಗಳನ್ನು ನೀವು ಏಳು ದಿವಸಗಳವರೆಗೂ ತಿನ್ನಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಅದರೊಂದಿಗೆ ಹುಳಿಹಾಕಿದ ರೊಟ್ಟಿಯನ್ನು ತಿನ್ನಬಾರದು; ಯಾಕಂದರೆ ನೀವು [ರೊಟ್ಟಿಗೆ ಹುಳಿಹಾಕುವದಕ್ಕೆ ಅವಕಾಶವಿಲ್ಲದೆ] ಅವಸರದಿಂದ ಐಗುಪ್ತದೇಶವನ್ನು ಬಿಟ್ಟುಬಂದಿರಿ. ಐಗುಪ್ತದೇಶದಿಂದ ನಿಮಗೆ ಬಿಡುಗಡೆಯಾದ ದಿನವು ನಿಮ್ಮ ಜೀವಮಾನವೆಲ್ಲಾ ನೆನಪಿನಲ್ಲಿರುವಂತೆ ನೀವು ಕಷ್ಟವನ್ನು ಸೂಚಿಸುವ ಹುಳಿಯಿಲ್ಲದ ರೊಟ್ಟಿಗಳನ್ನು ಏಳು ದಿವಸಗಳವರೆಗೂ ತಿನ್ನಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಅದರೊಂದಿಗೆ ಹುಳಿರೊಟ್ಟಿಯನ್ನು ತಿನ್ನಬಾರದು. ಏಳು ದಿವಸ ಹುಳಿಯಿಲ್ಲದ ಶ್ರಮೆಯ ರೊಟ್ಟಿಗಳನ್ನು ತಿನ್ನಬೇಕು. ಏಕೆಂದರೆ ತ್ವರೆಯಾಗಿ ಈಜಿಪ್ಟ್ ದೇಶದೊಳಗಿಂದ ನೀವು ಹೊರಗೆ ಬಂದದ್ದರಿಂದ ನೀವು ಜೀವಿಸುವ ದಿವಸಗಳಲ್ಲೆಲ್ಲಾ ಇದನ್ನು ಜ್ಞಾಪಕಮಾಡಿಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 16:3
27 ತಿಳಿವುಗಳ ಹೋಲಿಕೆ  

ರೊಟ್ಟಿಗೆ ಹುಳಿಹಾಕುವಷ್ಟು ಸಮಯವೂ ಜನರಿಗೆ ಇರಲಿಲ್ಲ; ಅವರು ತಮ್ಮ ಪ್ರಯಾಣಕ್ಕಾಗಿ ವಿಶೇಷ ಆಹಾರವನ್ನು ತಯಾರಿಸುವುದಕ್ಕೂ ಆಗಲಿಲ್ಲ. ಆದ್ದರಿಂದ ಅವರು ಹುಳಿಯಿಲ್ಲದ ರೊಟ್ಟಿ ಮಾಡಿ ತಮ್ಮೊಡನೆ ತೆಗೆದುಕೊಂಡು ಹೋದರು.


“ಹುಳಿಯಿಲ್ಲದ ರೊಟ್ಟಿಯ ಹಬ್ಬವನ್ನು ಆಚರಿಸಿರಿ. ನಾನು ನಿಮಗೆ ಮೊದಲು ಆಜ್ಞಾಪಿಸಿದಂತೆ ಹುಳಿಯಿಲ್ಲದ ರೊಟ್ಟಿಯನ್ನು ಏಳು ದಿನಗಳವರೆಗೆ ತಿನ್ನಿರಿ. ನಾನು ಆರಿಸಿಕೊಂಡ ಅಬೀಬ್ ಮಾಸದಲ್ಲಿ ಇದನ್ನು ಮಾಡಿರಿ. ಯಾಕೆಂದರೆ ಆ ತಿಂಗಳಲ್ಲಿ ನೀವು ಈಜಿಪ್ಟಿನಿಂದ ಬಿಡುಗಡೆ ಹೊಂದಿದಿರಿ.


ಆಮೇಲೆ ಯೇಸು ಸ್ವಲ್ಪ ರೊಟ್ಟಿಯನ್ನು ತೆಗೆದುಕೊಂಡನು. ಆತನು ರೊಟ್ಟಿಗಾಗಿ ದೇವರಿಗೆ ಸ್ತೋತ್ರಮಾಡಿ ಅದನ್ನು ಮುರಿದು ಅಪೊಸ್ತಲರಿಗೆ ಕೊಟ್ಟನು. ಬಳಿಕ ಯೇಸು, “ನಾನು ನಿಮಗೋಸ್ಕರ ಕೊಡುತ್ತಿರುವ ನನ್ನ ದೇಹವಿದು. ನನ್ನನ್ನು ನೆನಸಿಕೊಳ್ಳುವುದಕ್ಕಾಗಿ ಹೀಗೆ ಮಾಡಿರಿ” ಅಂದನು.


ಅಂಥವರು ಎರಡನೆಯ ತಿಂಗಳಿನ ಹದಿನಾಲ್ಕನೆಯ ದಿನದ ನಸುಸಂಜೆ ವೇಳೆಯಲ್ಲಿ ಪಸ್ಕಹಬ್ಬವನ್ನು ಆಚರಿಸಬೇಕು. ಆ ಸಮಯದಲ್ಲಿ ಅವರು ಪಸ್ಕದ ಕುರಿಮರಿಯ ಮಾಂಸವನ್ನು ಹುಳಿಯಿಲ್ಲದ ರೊಟ್ಟಿಗಳೊಡನೆ ಮತ್ತು ಕಹಿಯಾದ ಸೊಪ್ಪುಗಳೊಡನೆ ಊಟಮಾಡಬೇಕು.


“ಅಂದು ರಾತ್ರಿ ಆ ಪಶುವಿನ ಮಾಂಸವನ್ನು ಸುಟ್ಟು ಸಂಪೂರ್ಣವಾಗಿ ತಿನ್ನಬೇಕು. ಅದರೊಡನೆ ಕಹಿಯಾದ ಪಲ್ಯಗಳನ್ನೂ ಹುಳಿಯಿಲ್ಲದ ರೊಟ್ಟಿಯನ್ನೂ ತಿನ್ನಬೇಕು.


ನೀವು ನಮ್ಮನ್ನೂ ಪ್ರಭುವನ್ನೂ ಅನುಸರಿಸಿದಿರಿ; ಬಹಳ ಹಿಂಸೆಯನ್ನು ಅನುಭವಿಸಿದಿರಿ; ನಮ್ಮ ಉಪದೇಶವನ್ನು ನೀವು ಸಂತಸದಿಂದ ಒಪ್ಪಿಕೊಂಡಿರಿ. ಪವಿತ್ರಾತ್ಮನೇ ನಿಮಗೆ ಆ ಸಂತಸವನ್ನು ನೀಡಿದನು.


ಆದ್ದರಿಂದ ನಾವು ಪಸ್ಕದ ಊಟ ಮಾಡೋಣ. ದುಷ್ಟತನ ಮತ್ತು ಕೆಡುಕತನ ಎಂಬ ಹಳೆಯ ಹುಳಿಯಿಂದ ಕೂಡಿರುವ ರೊಟ್ಟಿಯನ್ನು ನಾವು ತಿನ್ನದೆ ಹುಳಿರಹಿತವಾದ ರೊಟ್ಟಿಯನ್ನು ತಿನ್ನೋಣ. ಸರಳತೆ ಮತ್ತು ಸತ್ಯತೆ ಇವುಗಳೇ ಆ ಹುಳಿರಹಿತ ರೊಟ್ಟಿ.


ನಾನು ದಾವೀದನ ಸಂತತಿಯವರನ್ನೂ ಜೆರುಸಲೇಮಿನಲ್ಲಿ ವಾಸಿಸುವವರನ್ನೂ ದಯೆಕರುಣೆಗಳ ಆತ್ಮದಿಂದ ತುಂಬಿಸುವೆನು. ಅವರು ತಾವು ಈಟಿಯಿಂದ ತಿವಿದ ನನ್ನನ್ನು ದೃಷ್ಟಿಸಿ ನೋಡುವರು; ತುಂಬಾ ದುಃಖಿಸುವರು. ತಮಗಿದ್ದ ಒಬ್ಬನೇ ಮಗನನ್ನು ಕಳಕೊಂಡವರಂತೆ ರೋಧಿಸುವರು.


ಕೇವಲ ಹೊಟ್ಟೆಪಾಡಿಗಾಗಿ ಮುಂಜಾನೆಯಲ್ಲೇ ಎದ್ದು ರಾತ್ರಿಯವರೆಗೂ ದುಡಿಯುವುದು ಕೇವಲ ವ್ಯರ್ಥ. ಯಾಕೆಂದರೆ ದೇವರು ತನ್ನ ಪ್ರಿಯರಿಗೆ ಆಹಾರವನ್ನು ನಿದ್ರೆಯಲ್ಲೂ ದಯಪಾಲಿಸುವನು.


ದೇವರು ಅಮೋಘವಾದ ಕಾರ್ಯಗಳನ್ನು ಮಾಡುವುದರಿಂದ ಆತನ ದಯೆಯನ್ನೂ ಕೃಪೆಯನ್ನೂ ಜ್ಞಾಪಿಸಿಕೊಳ್ಳುತ್ತೇವೆ.


ನನ್ನ ದುಃಖವೇ ನನಗೆ ಆಹಾರವಾಯಿತು. ಕಣ್ಣೀರು ನನ್ನ ಪಾನೀಯದೊಳಗೆ ತೊಟ್ಟಿಕ್ಕುತ್ತಿದೆ.


ಮೀಕಾಯೆಹುವನ್ನು ಸೆರೆಮನೆಯಲ್ಲಿಡಬೇಕೆಂದು ಅವರಿಗೆ ತಿಳಿಸಿ. ಅವನಿಗೆ ತಿನ್ನಲು ಸ್ವಲ್ಪ ರೊಟ್ಟಿ ಮತ್ತು ಕುಡಿಯಲು ಸ್ವಲ್ಪ ನೀರನ್ನು ಮಾತ್ರ ಕೊಡಿ. ನಾನು ಯುದ್ಧದಿಂದ ಮನೆಗೆ ಹಿಂದಿರುಗುವವರೆಗೆ ಅವನನ್ನು ಅಲ್ಲಿಯೇ ಇಡಿ” ಎಂದು ಹೇಳಿದನು.


ಹುಳಿಯಿಲ್ಲದ ರೊಟ್ಟಿಯ ಹಬ್ಬವು ಅದೇ ತಿಂಗಳಿನ ಹದಿನೈದನೆಯ ದಿನದಿಂದ ಪ್ರಾರಂಭವಾಗುವುದು. ಏಳು ದಿನಗಳವರೆಗೂ ಹುಳಿಯಿಲ್ಲದ ರೊಟ್ಟಿಯನ್ನೇ ಊಟಮಾಡಬೇಕು.


“ಅದೇ ತಿಂಗಳ ಹದಿನೈದನೆಯ ದಿನದಲ್ಲಿ ಯೆಹೋವನ ಹುಳಿಯಿಲ್ಲದ ರೊಟ್ಟಿಯ ಹಬ್ಬವಿರುತ್ತದೆ. ನೀವು ಹುಳಿಯಿಲ್ಲದ ರೊಟ್ಟಿಯನ್ನು ಏಳು ದಿನಗಳವರೆಗೆ ತಿನ್ನುವಿರಿ.


“ನೀವು ಭೋಜನ ಮಾಡುವಾಗ ಪ್ರಯಾಣ ಮಾಡುತ್ತಿರುವಂತೆ ಬಟ್ಟೆ ಧರಿಸಿಕೊಂಡಿರಬೇಕು; ಕೆರಗಳನ್ನು ಹಾಕಿಕೊಂಡು ನಿಮ್ಮ ಊರುಗೋಲನ್ನು ಕೈಯಲ್ಲಿ ಹಿಡಿದಿರಬೇಕು. ನೀವು ಅವಸವಸರವಾಗಿ ತಿನ್ನಬೇಕು. ಯಾಕೆಂದರೆ ಇದು ಯೆಹೋವನ ಪಸ್ಕಹಬ್ಬ.


ನೀವು ಹುಳಿಯಿಲ್ಲದ ರೊಟ್ಟಿಯ ಹಬ್ಬವನ್ನು ಆಚರಿಸಲೇಬೇಕು. ಯಾಕೆಂದರೆ ಆ ದಿನದಲ್ಲಿಯೇ ನಾನು ನಿಮ್ಮ ಎಲ್ಲಾ ಜನರ ಗುಂಪುಗಳನ್ನು ಈಜಿಪ್ಟಿನಿಂದ ಬಿಡಿಸಿ ಕರೆದುಕೊಂಡು ಹೋದೆನು. ಆದ್ದರಿಂದ ನಿಮ್ಮ ಸಂತತಿಯವರೆಲ್ಲರೂ ಆ ದಿನವನ್ನು ಜ್ಞಾಪಕಮಾಡಿಕೊಳ್ಳಬೇಕು. ಇದು ಶಾಶ್ವತವಾದ ಕಟ್ಟಳೆಯಾಗಿದೆ.


ಆದರೆ ನೀವು ನೋಡಿದ್ದನ್ನು ನಿಮ್ಮ ಜೀವಮಾನವೆಲ್ಲಾ ಜಾಗ್ರತೆಯುಳ್ಳವರಾಗಿದ್ದು ಮರೆಯದೆ ಅದನ್ನು ನಿಮ್ಮ ಮಕ್ಕಳಿಗೂ ಮೊಮ್ಮಕ್ಕಳಿಗೂ ತಿಳಿಸಬೇಕು.


ನಿಮ್ಮ ದೇವರು ತನ್ನ ವಾಸಸ್ಥಾನಕ್ಕಾಗಿ ಆರಿಸಿಕೊಳ್ಳುವ ಪ್ರತ್ಯೇಕ ಸ್ಥಳಕ್ಕೆ ನೀವು ಹೋಗಿ ಅಲ್ಲಿ ಪಸ್ಕದ ಯಜ್ಞಾರ್ಪಣೆ ಮಾಡಿ ನಿಮ್ಮ ಯೆಹೋವನನ್ನು ಮಹಿಮೆಪಡಿಸಬೇಕು. ಅಲ್ಲಿ ದನವನ್ನಾಗಲಿ ಆಡನ್ನಾಗಲಿ ಯಜ್ಞವಾಗಿ ಅರ್ಪಿಸಬೇಕು.


ನೀವು ಬಾಬಿಲೋನಿನಿಂದ ಹೊರಗೆ ಬರುವಿರಿ. ತ್ವರೆಪಟ್ಟು ಬರುವಂತೆ ಅವರು ಬಲವಂತ ಮಾಡುವದಿಲ್ಲ. ನೀವು ಓಡಿ ಹೋಗುವಂತೆ ಅವರು ಒತ್ತಾಯಪಡಿಸುವದಿಲ್ಲ. ನೀವು ಹೊರಗೆ ನಡೆಯುವಿರಿ. ಯೆಹೋವನು ನಿಮ್ಮೊಂದಿಗೆ ನಡೆಯುವನು. ಯೆಹೋವನು ನಿಮ್ಮ ಮುಂದೆ ಇರುವನು. ಇಸ್ರೇಲರ ದೇವರು ನಿಮ್ಮ ಹಿಂದೆಯೂ ಇರುವನು.


ಅದಕ್ಕೆ ನೀವು, ‘ಯೆಹೋವನ ಒಡಂಬಡಿಕೆಯ ಪೆಟ್ಟಿಗೆಯು ಜೋರ್ಡನ್ ನದಿಯನ್ನು ದಾಟುತ್ತಿರುವಾಗ ಹರಿಯುವ ನೀರು ನಿಂತುಹೋಯಿತು’ ಎಂದು ಹೇಳಿರಿ. ಆ ಕಲ್ಲುಗಳು ಇಸ್ರೇಲರಿಗೆ ಸದಾಕಾಲ ಸಾಕ್ಷಿಗಳಾಗಿರುತ್ತವೆ” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು