Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 16:6 - ಪರಿಶುದ್ದ ಬೈಬಲ್‌

6 ನಿಮ್ಮ ದೇವರಾದ ಯೆಹೋವನು ತನ್ನ ವಿಶೇಷವಾದ ವಾಸಸ್ಥಾನಕ್ಕಾಗಿ ಆರಿಸಿಕೊಳ್ಳುವ ಸ್ಥಳದಲ್ಲಿಯೇ ಸಾಯಂಕಾಲ ಸೂರ್ಯಾಸ್ತಮಾನ ಕಾಲದಲ್ಲಿ ಪಸ್ಕಹಬ್ಬದ ಪಶುವನ್ನು ಅರ್ಪಿಸಬೇಕು. ದೇವರು ನಿಮ್ಮನ್ನು ಈಜಿಪ್ಟಿನಿಂದ ಕರೆದುಕೊಂಡು ಬಂದ ಕಾಲವನ್ನು ಈ ಪವಿತ್ರ ದಿನವು ನಿಮಗೆ ನೆನಪು ಮಾಡುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಆತನು ತನ್ನ ಹೆಸರನ್ನು ಸ್ಥಾಪಿಸುವುದಕ್ಕೆ ಆರಿಸಿಕೊಳ್ಳುವ ಸ್ಥಳದಲ್ಲೇ, ನೀವು ಐಗುಪ್ತದೇಶದಿಂದ ಹೊರಟುಬಂದ ಸಮಯ, ಅಂದರೆ ಸಾಯಂಕಾಲದಲ್ಲಿ ಪಸ್ಕದ ಯಜ್ಞವನ್ನು ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಅವರು ತಮ್ಮ ನ್ಯಾಯಸ್ಥಾಪನೆಗಾಗಿ ಆರಿಸಿಕೊಳ್ಳುವ ಸ್ಥಳದಲ್ಲೇ ನೀವು ಈಜಿಪ್ಟ್ ದೇಶದಿಂದ ಹೊರಟುಬಂದ ಕಾಲವಾದ ಸೂರ್ಯಾಸ್ತಮಾನಕಾಲದಲ್ಲಿ, ಅದನ್ನು ವಧಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಆತನು ತನ್ನ ಹೆಸರನ್ನು ಸ್ಥಾಪಿಸುವದಕ್ಕೆ ಆದುಕೊಳ್ಳುವ ಸ್ಥಳದಲ್ಲೇ ನೀವು ಐಗುಪ್ತದೇಶದಿಂದ ಹೊರಟುಬಂದ ಕಾಲವಾದ ಸೂರ್ಯಾಸ್ತಮಾನಕಾಲದಲ್ಲಿ ಅದನ್ನು ವಧಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ನಿಮ್ಮ ದೇವರಾದ ಯೆಹೋವ ದೇವರು ತಮ್ಮ ಹೆಸರನ್ನು ಸ್ಥಾಪಿಸುವುದಕ್ಕೆ ಆಯ್ದುಕೊಳ್ಳುವ ಸ್ಥಳದಲ್ಲೇ ಸೂರ್ಯನು ಅಸ್ತಮಿಸುವಾಗ ನೀವು ಈಜಿಪ್ಟನ್ನು ಬಿಟ್ಟುಹೋದ ಸಮಯದಲ್ಲಿ ಅರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 16:6
10 ತಿಳಿವುಗಳ ಹೋಲಿಕೆ  

ನಿಮ್ಮ ದೇವರಾದ ಯೆಹೋವನು ನಿಮ್ಮ ಕುಲದವರ ಪ್ರಾಂತ್ಯಗಳಿಂದ ಒಂದು ವಿಶೇಷ ಸ್ಥಳವನ್ನು ಆರಿಸಿಕೊಂಡು ಅದಕ್ಕೆ ತನ್ನ ಹೆಸರಿಡುವನು. ಅಲ್ಲಿ ಆತನ ಆಲಯ ಕಟ್ಟಲ್ಪಡುವುದು. ಆತನನ್ನು ಆರಾಧಿಸಲು ನೀವು ಅಲ್ಲಿಗೆ ಹೋಗಬೇಕು.


ಕ್ರಿಸ್ತನು ಅನೇಕ ಸಲ ತನ್ನನ್ನು ಅರ್ಪಿಸಿಕೊಂಡಿದ್ದರೆ, ಈ ಲೋಕವು ಸೃಷ್ಟಿಯಾದಂದಿನಿಂದ ಆತನು ಅನೇಕ ಸಲ ಸಂಕಟವನ್ನು ಅನಭವಿಸ ಬೇಕಾಗುತ್ತಿತ್ತು. ಆದರೆ ಕ್ರಿಸ್ತನು ಯುಗಾಂತ್ಯದಲ್ಲಿ ಪಾಪನಿವಾರಣೆ ಮಾಡುವುದಕ್ಕಾಗಿ ಬಂದು ಒಂದೇ ಸಲ ತನ್ನನ್ನು ಅರ್ಪಿಸಿಕೊಂಡನು.


ಸಾಯಂಕಾಲದಲ್ಲಿ ಯೇಸು ತನ್ನ ಹನ್ನೆರಡು ಮಂದಿ ಶಿಷ್ಯರೊಂದಿಗೆ ಊಟಕ್ಕೆ ಕುಳಿತಿದ್ದನು.


ಅಂಥವರು ಎರಡನೆಯ ತಿಂಗಳಿನ ಹದಿನಾಲ್ಕನೆಯ ದಿನದ ನಸುಸಂಜೆ ವೇಳೆಯಲ್ಲಿ ಪಸ್ಕಹಬ್ಬವನ್ನು ಆಚರಿಸಬೇಕು. ಆ ಸಮಯದಲ್ಲಿ ಅವರು ಪಸ್ಕದ ಕುರಿಮರಿಯ ಮಾಂಸವನ್ನು ಹುಳಿಯಿಲ್ಲದ ರೊಟ್ಟಿಗಳೊಡನೆ ಮತ್ತು ಕಹಿಯಾದ ಸೊಪ್ಪುಗಳೊಡನೆ ಊಟಮಾಡಬೇಕು.


ಅವರು ಈ ತಿಂಗಳ ಹದಿನಾಲ್ಕನೆಯ ದಿನದ ನಸುಸಂಜೆಯ ವೇಳೆ ಪಸ್ಕದ ಊಟವನ್ನು ಮಾಡಬೇಕು. ಅವರು ಇದನ್ನು ಪಸ್ಕಹಬ್ಬದ ಎಲ್ಲಾ ನಿಯಮಗಳ ಪ್ರಕಾರ ನೇಮಕವಾದ ಕಾಲದಲ್ಲಿ ಮಾಡಬೇಕು.”


“ಒಂದು ವಿಶೇಷ ಯಜ್ಞವೇದಿಕೆಯನ್ನು ನನಗೋಸ್ಕರ ಮಣ್ಣಿನಿಂದ ಕಟ್ಟಿರಿ. ಈ ಯಜ್ಞವೇದಿಕೆಯ ಮೇಲೆ ಕುರಿದನಗಳನ್ನು ನನಗೆ ಸರ್ವಾಂಗಹೋಮಗಳನ್ನಾಗಿಯೂ ಸಮಾಧಾನಯಜ್ಞಗಳನ್ನಾಗಿಯೂ ಸಮರ್ಪಿಸಿರಿ. ನಾನು ನಿಮಗೆ ಹೇಳುವ ಪ್ರತಿಯೊಂದು ಸ್ಥಳದಲ್ಲಿಯೂ ನನ್ನನ್ನು ಜ್ಞಾಪಕಮಾಡಿಕೊಳ್ಳಲು ಹೀಗೆಯೇ ಮಾಡಿರಿ. ಆಗ ನಾನು ಬಂದು ನಿಮ್ಮನ್ನು ಆಶೀರ್ವದಿಸುವೆನು.


“ಪಸ್ಕದ ಪಶುವನ್ನು ದೇಶದ ಬೇರೆ ಯಾವ ಸ್ಥಳದಲ್ಲಿಯೂ ಕೊಯ್ಯಬಾರದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು