Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 16:7 - ಪರಿಶುದ್ದ ಬೈಬಲ್‌

7 ನಿಮ್ಮ ದೇವರಾದ ಯೆಹೋವನು ತನ್ನ ವಾಸಸ್ಥಾನಕ್ಕಾಗಿ ಆರಿಸಿಕೊಳ್ಳುವ ಸ್ಥಳದಲ್ಲಿ ನೀವು ಪಸ್ಕದ ಪಶುವನ್ನು ಅಡಿಗೆ ಮಾಡಿ ತಿನ್ನಬೇಕು. ಆಮೇಲೆ ಮುಂಜಾನೆ ನೀವು ನಿಮ್ಮನಿಮ್ಮ ಮನೆಗಳಿಗೆ ಹೋಗಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಆ ಸ್ಥಳದಲ್ಲಿಯೇ ನೀವು ಅದನ್ನು ಅಡಿಗೆಮಾಡಿ ತಿನ್ನಬೇಕು. ಮರುದಿನ ನಿಮ್ಮ ನಿಮ್ಮ ಮನೆಗಳಿಗೆ ನೀವು ಹೊರಟು ಹೋಗಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಆ ಸ್ಥಳದಲ್ಲೇ ನೀವು ಅದನ್ನು ಅಡಿಗೆಮಾಡಿ ತಿನ್ನಬೇಕು. ಮರುದಿವಸ ನಿಮ್ಮ ನಿಮ್ಮ ಮನೆಗಳಿಗೆ ನೀವು ಹೊರಟುಹೋಗಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಆ ಸ್ಥಳದಲ್ಲಿಯೇ ನೀವು ಅದನ್ನು ಅಡಿಗೆಮಾಡಿ ತಿನ್ನಬೇಕು. ಮರುದಿವಸ ನಿಮ್ಮ ನಿಮ್ಮ ಮನೆಗಳಿಗೆ ನೀವು ಹೊರಟುಹೋಗಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ನಿಮ್ಮ ದೇವರಾದ ಯೆಹೋವ ದೇವರು ಆಯ್ದುಕೊಳ್ಳುವ ಸ್ಥಳದಲ್ಲಿ ಅದನ್ನು ಬೇಯಿಸಿ ತಿನ್ನಬೇಕು. ಮರುದಿವಸದಲ್ಲಿ ಹಿಂದಿರುಗಿ ನಿಮ್ಮ ಗುಡಾರಗಳಿಗೆ ಹೋಗಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 16:7
10 ತಿಳಿವುಗಳ ಹೋಲಿಕೆ  

ಲೇವಿಯರು ಪಸ್ಕದ ಪಶುಗಳ ಮಾಂಸವನ್ನು ಕಟ್ಟಳೆಯ ಪ್ರಕಾರ ಬೆಂಕಿಯಲ್ಲಿ ಸುಟ್ಟರು. ಪರಿಶುದ್ಧ ಯಜ್ಞದ ಮಾಂಸವನ್ನು ಪಾತ್ರೆಗಳಲ್ಲಿ ಮತ್ತು ಹಂಡೆಗಳಲ್ಲಿ ಬೇಯಿಸಿದರು. ಆಮೇಲೆ ಅವುಗಳನ್ನು ಜನರಿಗೆ ಹಂಚಿದರು.


ಆಗ ಯೆಹೂದ್ಯರ ಪಸ್ಕಹಬ್ಬವು ಸಮೀಪವಾಗಿತ್ತು. ಪಸ್ಕಹಬ್ಬಕ್ಕಿಂತ ಮೊದಲೇ ತಮ್ಮ ಗ್ರಾಮಗಳಿಂದ ಅನೇಕ ಜನರು ಜೆರುಸಲೇಮಿಗೆ ಹೋಗಿದ್ದರು. ವಿಶೇಷವಾದ ಕಾರ್ಯಗಳನ್ನು ಮಾಡಿ ಪಸ್ಕಹಬ್ಬಕ್ಕಾಗಿ ತಮ್ಮನ್ನು ಶುದ್ಧೀಕರಿಸಿಕೊಳ್ಳಬೇಕೆಂದು ಅವರು ಹೋಗಿದ್ದರು.


ಯೇಸು ಪಸ್ಕಹಬ್ಬಕ್ಕಾಗಿ ಜೆರುಸಲೇಮಿನಲ್ಲಿದ್ದನು. ಆತನು ಮಾಡಿದ ಸೂಚಕಕಾರ್ಯಗಳನ್ನು ನೋಡಿದಾಗ ಅನೇಕ ಜನರು ಆತನನ್ನು ನಂಬಿದರು.


ಆಗ ಯೆಹೂದ್ಯರ ಪಸ್ಕಹಬ್ಬ ಬಹು ಸಮೀಪವಾಗಿತ್ತು. ಆದ್ದರಿಂದ ಯೇಸು ಜೆರುಸಲೇಮಿಗೆ ಹೋದನು.


ಯೋಷೀಯನು ರಾಜನಾಗಿದ್ದ ಹದಿನೆಂಟನೆ ವರ್ಷದಲ್ಲಿ ಅವರು ಯೆಹೋವನಿಗಾಗಿ ಈ ಪಸ್ಕಹಬ್ಬವನ್ನು ಜೆರುಸಲೇಮಿನಲ್ಲಿ ಆಚರಿಸಿದರು.


ನಿಮ್ಮ ದೇವರಾದ ಯೆಹೋವನು ತನ್ನ ವಿಶೇಷವಾದ ವಾಸಸ್ಥಾನಕ್ಕಾಗಿ ಆರಿಸಿಕೊಳ್ಳುವ ಸ್ಥಳದಲ್ಲಿಯೇ ಸಾಯಂಕಾಲ ಸೂರ್ಯಾಸ್ತಮಾನ ಕಾಲದಲ್ಲಿ ಪಸ್ಕಹಬ್ಬದ ಪಶುವನ್ನು ಅರ್ಪಿಸಬೇಕು. ದೇವರು ನಿಮ್ಮನ್ನು ಈಜಿಪ್ಟಿನಿಂದ ಕರೆದುಕೊಂಡು ಬಂದ ಕಾಲವನ್ನು ಈ ಪವಿತ್ರ ದಿನವು ನಿಮಗೆ ನೆನಪು ಮಾಡುತ್ತದೆ.


ನಿಮ್ಮ ದೇವರು ತನ್ನ ವಾಸಸ್ಥಾನಕ್ಕಾಗಿ ಆರಿಸಿಕೊಳ್ಳುವ ಪ್ರತ್ಯೇಕ ಸ್ಥಳಕ್ಕೆ ನೀವು ಹೋಗಿ ಅಲ್ಲಿ ಪಸ್ಕದ ಯಜ್ಞಾರ್ಪಣೆ ಮಾಡಿ ನಿಮ್ಮ ಯೆಹೋವನನ್ನು ಮಹಿಮೆಪಡಿಸಬೇಕು. ಅಲ್ಲಿ ದನವನ್ನಾಗಲಿ ಆಡನ್ನಾಗಲಿ ಯಜ್ಞವಾಗಿ ಅರ್ಪಿಸಬೇಕು.


ನಿಮ್ಮ ದೇವರಾದ ಯೆಹೋವನು ನಿಮ್ಮ ಕುಲದವರ ಪ್ರಾಂತ್ಯಗಳಿಂದ ಒಂದು ವಿಶೇಷ ಸ್ಥಳವನ್ನು ಆರಿಸಿಕೊಂಡು ಅದಕ್ಕೆ ತನ್ನ ಹೆಸರಿಡುವನು. ಅಲ್ಲಿ ಆತನ ಆಲಯ ಕಟ್ಟಲ್ಪಡುವುದು. ಆತನನ್ನು ಆರಾಧಿಸಲು ನೀವು ಅಲ್ಲಿಗೆ ಹೋಗಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು