ಧರ್ಮೋಪದೇಶಕಾಂಡ 17:1 - ಪರಿಶುದ್ದ ಬೈಬಲ್1 “ನಿಮ್ಮ ದೇವರಾದ ಯೆಹೋವನಿಗೆ ನೀವು ಪಶುಗಳನ್ನಾಗಲಿ ಆಡುಕುರಿಮರಿಗಳನ್ನಾಗಲಿ ಸಮರ್ಪಿಸುವಾಗ ಅವು ಕಳಂಕವಿಲ್ಲದೆ ಪೂರ್ಣಾಂಗವಾಗಿರಬೇಕು; ದೋಷಪೂರಿತ ಯಜ್ಞವನ್ನು ಆತನು ದ್ವೇಷಿಸುತ್ತಾನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಯಾವುದೇ ಕುಂದುಕೊರತೆ ಅಥವಾ ಊನ ಇರುವ ಎತ್ತು ಮತ್ತು ಕುರಿಗಳನ್ನು ನಿಮ್ಮ ದೇವರಾದ ಯೆಹೋವನಿಗೆ ಸಮರ್ಪಿಸಬಾರದು. ಅಂಥವುಗಳನ್ನು ಸಮರ್ಪಿಸುವುದು ಆತನಿಗೆ ಅಸಹ್ಯವಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 “ಯಾವುದಾದರೊಂದು ಕುಂದುಕೊರತೆಯಾಗಲಿ, ದುರ್ಲಕ್ಷಣವಾಗಲಿ ಇರುವ ದನಕುರಿಗಳನ್ನು ನಿಮ್ಮ ದೇವರಾದ ಸರ್ವೇಶ್ವರನಿಗೆ ಸಮರ್ಪಿಸಬಾರದು. ಅಂಥವುಗಳನ್ನು ಅವರು ಸಹಿಸರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಕುಂದು ಕೊರತೆಯಾಗಲಿ ಯಾವ ದುರ್ಲಕ್ಷಣವಾಗಲಿ ಇರುವ ದನಕುರಿಗಳನ್ನು ನಿಮ್ಮ ದೇವರಾದ ಯೆಹೋವನಿಗೆ ಸಮರ್ಪಿಸಬಾರದು. ಅಂಥವುಗಳನ್ನು ಸಮರ್ಪಿಸುವದು ಆತನಿಗೆ ಅಸಹ್ಯವಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಯಾವುದೇ ಊನತೆ ಅಥವಾ ಅವಲಕ್ಷಣವುಳ್ಳ ಹೋರಿಯನ್ನಾಗಲಿ, ಕುರಿಯನ್ನಾಗಲಿ ನಿಮ್ಮ ದೇವರಾದ ಯೆಹೋವ ದೇವರಿಗೆ ಅರ್ಪಿಸಬಾರದು. ಏಕೆಂದರೆ ಅದು ನಿಮ್ಮ ದೇವರಾದ ಯೆಹೋವ ದೇವರಿಗೆ ಅಸಹ್ಯವೇ. ಅಧ್ಯಾಯವನ್ನು ನೋಡಿ |
ನೀವು ಕುರುಡು ಪ್ರಾಣಿಗಳನ್ನು ಯಜ್ಞಕ್ಕಾಗಿ ತರುತ್ತೀರಿ. ಅದು ತಪ್ಪಲ್ಲವೇ? ಕುಂಟು, ರೋಗಪೀಡಿತ ಪಶುಗಳನ್ನು ಯಜ್ಞಾರ್ಪಣೆಗಾಗಿ ತರುತ್ತೀರಿ. ಅದು ತಪ್ಪಲ್ಲವೇ? ನಿಮ್ಮ ರಾಜ್ಯಪಾಲನಿಗೆ ನೀವು ಅಂಥಾ ಪ್ರಾಣಿಗಳನ್ನು ಕಾಣಿಕೆಯಾಗಿ ಕೊಟ್ಟರೆ ಅವನು ಅದನ್ನು ಸ್ವೀಕರಿಸುವನೋ? ಇಲ್ಲ, ಅಂಥಾ ಕಾಣಿಕೆಯನ್ನು ಅವನು ಸ್ವೀಕರಿಸುವದೇ ಇಲ್ಲ” ಸರ್ವಶಕ್ತನಾದ ಯೆಹೋವನು ಇದನ್ನು ಹೇಳುತ್ತಿದ್ದಾನೆ.
ಸೂಳೆತನದಿಂದ ಗಳಿಸಿದ ಹಣವನ್ನು ನಿಮ್ಮ ದೇವರಾದ ಯೆಹೋವನ ವಿಶೇಷ ವಾಸಸ್ಥಾನಕ್ಕೆ ತೆಗೆದುಕೊಂಡು ಬರಬಾರದು. ಒಬ್ಬನು ತಾನು ಹೊತ್ತುಕೊಂಡ ಹರಕೆಯನ್ನು ಆ ಹಣದಿಂದ ಪೂರೈಸಕೂಡದು. ಯಾಕೆಂದರೆ ಲೈಂಗಿಕ ಪಾಪದಲ್ಲಿ ತಮ್ಮ ದೇಹಗಳನ್ನು ಮಾರುವವರನ್ನು ನಿಮ್ಮ ದೇವರಾದ ಯೆಹೋವನು ದ್ವೇಷಿಸುತ್ತಾನೆ; ಲೈಂಗಿಕ ಪಾಪಗಳ ಆದಾಯದಿಂದ ಬಂದ ಹಣದಿಂದ ಖರೀದಿ ಮಾಡಿದ ಕಾಣಿಕೆಗಳನ್ನು ಆತನು ದ್ವೇಷಿಸುತ್ತಾನೆ.