ಧರ್ಮೋಪದೇಶಕಾಂಡ 17:15 - ಪರಿಶುದ್ದ ಬೈಬಲ್15 ಅಂಥ ಸಮಯದಲ್ಲಿ ಯೆಹೋವನು ಆರಿಸಿಕೊಂಡವನನ್ನೇ ನೀವು ರಾಜನನ್ನಾಗಿ ಆರಿಸಿಕೊಳ್ಳಬೇಕು; ಅವನು ನಿಮ್ಮ ಸ್ವಂತ ಜನರಲ್ಲಿ ಒಬ್ಬನಾಗಿರಬೇಕು; ಪರದೇಶಸ್ಥನನ್ನು ನೀವು ನಿಮ್ಮ ರಾಜನನ್ನಾಗಿ ಆರಿಸಬಾರದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ನೀವು ಅಗತ್ಯವಾಗಿ ನಿಮ್ಮ ದೇವರಾದ ಯೆಹೋವನು ಆರಿಸಿಕೊಂಡ ವ್ಯಕ್ತಿಯನ್ನೇ ನೇಮಿಸಿಕೊಳ್ಳಬೇಕು. ನಿಮ್ಮ ಬಂಧುಗಳಾದ ಸ್ವಜನರಲ್ಲೇ ಒಬ್ಬನನ್ನು ಅರಸನನ್ನಾಗಿ ನೇಮಿಸಿಕೊಳ್ಳಬೇಕೇ ಹೊರತು ಅನ್ಯದೇಶದವನನ್ನು ನೇಮಿಸಬಾರದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಆಗ ನೀವು ಅಗತ್ಯವಾಗಿ ನಿಮ್ಮ ದೇವರಾದ ಸರ್ವೇಶ್ವರ ಆರಿಸಿಕೊಂಡವನನ್ನೇ ನೇಮಿಸಿಕೊಳ್ಳಬೇಕು. ನಿಮ್ಮ ಬಂಧುಗಳಾದ ಸ್ವಜನರಲ್ಲೇ ಒಬ್ಬನನ್ನು ಅರಸನನ್ನಾಗಿ ನೇಮಿಸಿಕೊಳ್ಳಬೇಕೆ ಹೊರತು ಅನ್ಯದೇಶದವನನ್ನು ನೇಮಿಸಬಾರದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ನೀವು ಅಗತ್ಯವಾಗಿ ನಿಮ್ಮ ದೇವರಾದ ಯೆಹೋವನು ಆದುಕೊಂಡವನನ್ನೇ ನೇವಿುಸಿಕೊಳ್ಳಬೇಕು. ನಿಮ್ಮ ಬಂಧುಗಳಾದ ಸ್ವಜನರಲ್ಲೇ ಒಬ್ಬನನ್ನು ಅರಸನನ್ನಾಗಿ ನೇವಿುಸಿಕೊಳ್ಳಬೇಕೇ ಹೊರತು ಅನ್ಯದೇಶದವನನ್ನು ನೇವಿುಸಬಾರದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ನಿಮ್ಮ ದೇವರಾದ ಯೆಹೋವ ದೇವರು ಆಯ್ದುಕೊಳ್ಳುವವನನ್ನು ನಿಮಗೆ ಅರಸನನ್ನಾಗಿ ನೇಮಿಸಿಕೊಳ್ಳಬೇಕು. ನಿಮ್ಮ ಇಸ್ರಾಯೇಲ್ ಸಹೋದರರಲ್ಲಿಂದ ಒಬ್ಬನನ್ನು ನಿಮ್ಮ ಅರಸನನ್ನಾಗಿ ನೇಮಿಸಿಕೊಳ್ಳಬೇಕು. ನಿಮ್ಮ ಸಹೋದರನಲ್ಲದ ಅನ್ಯದೇಶದವನನ್ನು ನಿಮ್ಮ ಮೇಲೆ ನೇಮಿಸಿಕೊಳ್ಳಬಾರದು. ಅಧ್ಯಾಯವನ್ನು ನೋಡಿ |