ಧರ್ಮೋಪದೇಶಕಾಂಡ 17:16 - ಪರಿಶುದ್ದ ಬೈಬಲ್16 ಅರಸನು ತನ್ನ ಉಪಯೋಗಕ್ಕಾಗಿ ಹೆಚ್ಚೆಚ್ಚಾಗಿ ಕುದುರೆಗಳನ್ನು ಖರೀದಿಸಬಾರದು; ಜನರನ್ನು ಈಜಿಪ್ಟಿಗೆ ಕಳುಹಿಸಿ ಅಲ್ಲಿಂದ ಹೆಚ್ಚುಹೆಚ್ಚು ಕುದುರೆಗಳನ್ನು ತರಿಸಬಾರದು; ಯಾಕೆಂದರೆ, ‘ನೀವು ಆ ಮಾರ್ಗದಲ್ಲಿ ಹಿಂದಕ್ಕೆ ಹೋಗಲೇಬಾರದು’ ಎಂದು ಯೆಹೋವನು ಹೇಳಿದ್ದಾನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಅವನು ಕುದುರೆಯ ದಂಡನ್ನು ಕೂಡಿಸಿಕೊಳ್ಳಬಾರದು. ಕುದುರೆಗಳನ್ನು ಕೊಂಡುಕೊಳ್ಳುವುದಕ್ಕಾಗಿ ತನ್ನ ಪ್ರಜೆಗಳನ್ನು ಐಗುಪ್ತದೇಶಕ್ಕೆ ಹೋಗಗೊಡಿಸಬಾರದು. ನೀವು ಇನ್ನು ಆ ದೇಶಕ್ಕೆ ಹೋಗಲೇಬಾರದು ಎಂದು ಯೆಹೋವನು ಆಜ್ಞಾಪಿಸಿದ್ದಾನಲ್ಲಾ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 “ಅವನು ಕುದುರೆಯ ದಂಡನ್ನು ಹೆಚ್ಚಿಸಿಕೊಳ್ಳಬಾರದು. ಕುದುರೆಗಳನ್ನು ಸಂಪಾದಿಸಿಕೊಳ್ಳುವುದಕ್ಕಾಗಿ ತನ್ನ ಪ್ರಜೆಗಳನ್ನು ಈಜಿಪ್ಟ್ ದೇಶಕ್ಕೆ ಹೋಗಗೊಡಿಸಬಾರದು. ನೀವು ಇನ್ನು ಆ ದೇಶಕ್ಕೆ ಹೋಗಲೇಕೂಡದೆಂದು ಸರ್ವೇಶ್ವರ ಆಜ್ಞಾಪಿಸಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಅವನು ಕುದುರೆಯ ದಂಡನ್ನು ಕೂಡಿಸಿಕೊಳ್ಳಬಾರದು. ಕುದುರೆಗಳನ್ನು ಸಂಪಾದಿಸಿಕೊಳ್ಳುವದಕ್ಕಾಗಿ ತನ್ನ ಪ್ರಜೆಗಳನ್ನು ಐಗುಪ್ತದೇಶಕ್ಕೆ ಹೋಗಗೊಡಿಸಬಾರದು. ನೀವು ಇನ್ನು ಆ ದೇಶಕ್ಕೆ ಹೋಗಲೇಕೂಡದೆಂದು ಯೆಹೋವನು ಆಜ್ಞಾಪಿಸಿದ್ದಾನಲ್ಲಾ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಅರಸನು ತನಗಾಗಿ ಕುದುರೆಗಳನ್ನು ಹೆಚ್ಚಿಸಿಕೊಳ್ಳಬಾರದು. ಕುದುರೆಗಳನ್ನು ಹೆಚ್ಚಿಸಿಕೊಳ್ಳುವ ಹಾಗೆ ಜನರನ್ನು ಈಜಿಪ್ಟ್ ದೇಶಕ್ಕೆ ಕಳುಹಿಸಬಾರದು. “ಆ ಮಾರ್ಗವಾಗಿ ನೀವು ಇನ್ನು ತಿರುಗಿ ಹೋಗಬಾರದು,” ಎಂದು ಯೆಹೋವ ದೇವರು ನಿಮಗೆ ಹೇಳಿದ್ದಾರೆ. ಅಧ್ಯಾಯವನ್ನು ನೋಡಿ |
ಇಸ್ರೇಲರು ಈಜಿಪ್ಟನ್ನು ಬಿಟ್ಟುಹೋಗುವಂತೆ ಫರೋಹನು ಅನುಮತಿ ನೀಡಿದನು. ಇಸ್ರೇಲರು ಫಿಲಿಷ್ಟಿಯರ ದೇಶದ ಮೂಲಕ ಹಾದುಹೋಗುವ ರಸ್ತೆಯಲ್ಲಿ ಹೋಗಲು ಯೆಹೋವನು ಅನುಮತಿ ನೀಡಲಿಲ್ಲ. ಸಮುದ್ರದ ಮೂಲಕ ಹಾದುಹೋಗುವ ಆ ರಸ್ತೆ ಬಹಳ ಹತ್ತಿರವಾಗಿತ್ತು. ಆದರೆ ಯೆಹೋವನು, “ಇಸ್ರೇಲರು ಆ ದಾರಿಯಲ್ಲಿ ಹೋದರೆ, ಯುದ್ಧಮಾಡಬೇಕಾಗುವುದು. ಆಗ ಅವರು ತಮ್ಮ ಮನಸ್ಸುಗಳನ್ನು ಬದಲಾಯಿಸಿ ಈಜಿಪ್ಟಿಗೆ ಹಿಂತಿರುಗಬಹುದು” ಅಂದುಕೊಂಡನು.
ಆದ್ದರಿಂದ ನಿನ್ನ ಸಹಾಯವು ನನಗೆ ಬೇಕಾಗಿದೆ. ನಿನ್ನ ಜನರನ್ನು ಲೆಬನೋನಿಗೆ ಕಳುಹಿಸು. ಅಲ್ಲಿ ಅವರು ನನಗಾಗಿ ದೇವದಾರುಮರಗಳನ್ನು ಕಡಿದು ಬೀಳಿಸಲಿ. ನನ್ನ ಸೇವಕರೂ ನಿನ್ನವರೊಂದಿಗೆ ಕೆಲಸಮಾಡುತ್ತಾರೆ. ನಿನ್ನ ಸೇವಕರಿಗೆ ಗೊತ್ತುಪಡಿಸಿದ ವೇತನವನ್ನು ನಾನು ಕೊಡುತ್ತೇನೆ. ಆದರೆ ನಿನ್ನ ಸಹಾಯ ನನಗೆ ಬೇಕು. ನಮ್ಮ ಬಡಗಿಗಳು ಚೀದೋನ್ಯರ ಬಡಗಿಗಳಂತೆ ಕುಶಲಕರ್ಮಿಗಳಲ್ಲ” ಎಂದು ಹೇಳಿ ಕಳುಹಿಸಿದನು.