Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 17:17 - ಪರಿಶುದ್ದ ಬೈಬಲ್‌

17 ಅರಸನಿಗೆ ಮಿತಿಮೀರಿ ಪತ್ನಿಯರು ಇರಬಾರದು. ಯಾಕೆಂದರೆ ಅವರು ಅರಸನನ್ನು ಯೆಹೋವನ ಮಾರ್ಗದಲ್ಲಿ ನಡೆಯದಂತೆ ಮಾಡಿ ಬೇರೆ ಕಡೆಗೆ ತಿರುಗಿಸುವರು. ರಾಜನು ಬೆಳ್ಳಿಬಂಗಾರಗಳನ್ನು ಶೇಖರಿಸಿ ತನ್ನನ್ನು ಐಶ್ವರ್ಯವಂತನನ್ನಾಗಿ ಮಾಡಿಕೊಳ್ಳಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಅವನು ಅನೇಕ ಸ್ತ್ರೀಯರನ್ನು ಮದುವೆ ಮಾಡಿಕೊಳ್ಳಬಾರದು; ಮಾಡಿಕೊಂಡರೆ ಅವನ ಮನಸ್ಸು ಯೆಹೋವನ ಕಡೆಯಿಂದ ತಿರುಗುವುದಕ್ಕೆ ಅವಕಾಶವಾಗುವುದು. ಅವನು ಹೆಚ್ಚು ಬೆಳ್ಳಿಬಂಗಾರವನ್ನು ಕೂಡಿಸಿಟ್ಟುಕೊಳ್ಳಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಅವನು ಅನೇಕ ಸ್ತ್ರೀಯರನ್ನು ಮದುವೆಮಾಡಿಕೊಳ್ಳಬಾರದು; ಮಾಡಿಕೊಂಡರೆ ಅವನ ಮನಸ್ಸು ಸರ್ವೇಶ್ವರನಿಗೆ ವಿಮುಖವಾಗಲು ಅವಕಾಶವಾಗುವುದು. ಅವನು ಬೆಳ್ಳಿಬಂಗಾರವನ್ನು ವಿಶೇಷವಾಗಿ ಗಳಿಸಿಕೊಳ್ಳಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಅವನು ಅನೇಕ ಸ್ತ್ರೀಯರನ್ನು ಮದುವೆಮಾಡಿಕೊಳ್ಳಬಾರದು; ಮಾಡಿಕೊಂಡರೆ ಅವನ ಮನಸ್ಸು ಯೆಹೋವನ ಕಡೆಯಿಂದ ತಿರುಗುವದಕ್ಕೆ ಅವಕಾಶವಾಗುವದು. ಅವನು ಬೆಳ್ಳಿಬಂಗಾರವನ್ನು ವಿಶೇಷವಾಗಿ ಗಳಿಸಿಕೊಳ್ಳಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಅರಸನು ದಾರಿತಪ್ಪಿ ಹೋಗದಂತೆ ತನಗೆ ಹೆಚ್ಚು ಜನ ಹೆಂಡತಿಯರನ್ನು ಮದುವೆ ಮಾಡಿಕೊಳ್ಳಬಾರದು. ಅವನು ತನಗಾಗಿ ಹೆಚ್ಚು ಬೆಳ್ಳಿಬಂಗಾರವನ್ನು ಕೂಡಿಸಿಟ್ಟುಕೊಳ್ಳಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 17:17
22 ತಿಳಿವುಗಳ ಹೋಲಿಕೆ  

ಇಂಥ ಮದುವೆಗಳಿಂದಾಗಿ ಸೊಲೊಮೋನನು ಪಾಪಕ್ಕೆ ಒಳಗಾದನು ಎಂಬುದು ನಿಮಗೆ ತಿಳಿಯದೋ? ಅವನಂಥ ವೈಭವಶಾಲಿ ಅರಸನು ಯಾವ ರಾಜ್ಯದಲ್ಲಿಯೂ ಇರಲಿಲ್ಲ. ದೇವರು ಸೊಲೊಮೋನನನ್ನು ಪ್ರೀತಿಸಿದನು. ಇಡೀ ಇಸ್ರೇಲಿಗೆ ಅವನನ್ನು ಅರಸನನ್ನಾಗಿ ಮಾಡಿದನು. ಅಂಥವನೂ ಅನ್ಯಸ್ತ್ರೀಯರಿಂದಾಗಿ ಪಾಪ ಮಾಡಿದನು.


ಆದಕಾರಣ ದೇವರು, ‘ಪುರುಷನು ತನ್ನ ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಳ್ಳುವನು. ಅವರಿಬ್ಬರು ಒಂದೇ ಶರೀರವಾಗುವರು.’ ಎಂದು ಹೇಳಿದನು.


ಅನ್ಯಾಯದಿಂದ ಸಂಪಾದಿಸಿದ್ದರಲ್ಲಿ ನಂಬಿಕೆ ಇಡಬೇಡಿ. ಕದ್ದವಸ್ತುಗಳಲ್ಲಿ ಜಂಬಪಡಬೇಡಿ. ಐಶ್ವರ್ಯವು ಅಧಿಕವಾಗುತ್ತಿದ್ದರೂ ಅದರಲ್ಲಿ ಮನಸ್ಸಿಡಬೇಡಿ.


ಆದ್ದರಿಂದ ಪುರುಷನು ತನ್ನ ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಳ್ಳುವನು. ಅವರಿಬ್ಬರೂ ಒಂದೇ ಶರೀರವಾಗುವರು.


ದೇವರ ಇಚ್ಫೆಗನುಸಾರವಾಗಿ ಗಂಡಹೆಂಡತಿಯರು ದೇಹದಲ್ಲಿಯೂ ಆತ್ಮದಲ್ಲಿಯೂ ಒಂದಾಗಿರಬೇಕು. ಆಗ ಅವರ ಮಕ್ಕಳೂ ಪರಿಶುದ್ಧರಾಗಿರುವರು. ಆದ್ದರಿಂದ ಆತ್ಮಿಕ ಅನ್ಯೋನ್ಯತೆಯನ್ನು ಕಾಪಾಡಿಕೊಳ್ಳಿ. ನಿಮ್ಮ ಹೆಂಡತಿಯರಿಗೆ ಮೋಸಮಾಡಬೇಡಿ. ಯಾಕೆಂದರೆ ಯೌವನ ಪ್ರಾಯದಿಂದಲೂ ಆಕೆ ನಿಮ್ಮ ಹೆಂಡತಿಯಾಗಿದ್ದಾಳೆ.


ಇಹಲೋಕದ ವಿಷಯಗಳಲ್ಲಿ ಶ್ರೀಮಂತರಾಗಿರುವ ಜನರಿಗೆ ಈ ಆಜ್ಞೆಗಳನ್ನು ತಿಳಿಸು. ಗರ್ವಪಡದಂತೆಯೂ ಹಣವನ್ನು ಅವಲಂಬಿಸಿಕೊಳ್ಳದೆ ದೇವರಲ್ಲೇ ನಿರೀಕ್ಷೆಯಿಡುವಂತೆಯೂ ಅವರಿಗೆ ತಿಳಿಸು. ಹಣವು ಭರವಸೆಗೆ ಯೋಗ್ಯವಲ್ಲ. ದೇವರಾದರೋ ನಮ್ಮ ಸಂತೋಷಕ್ಕಾಗಿ ಸಮಸ್ತವನ್ನು ನಮಗೆ ಧಾರಾಳವಾಗಿ ದಯಪಾಲಿಸುತ್ತಾನೆ.


ಶ್ರೀಮಂತರಾಗಬೇಕೆನ್ನುವವರು ತಮ್ಮನ್ನು ತಾವೇ ಶೋಧನೆಗೆ ಗುರಿಪಡಿಸಿಕೊಳ್ಳುವರು. ಅವರು ಉರ್ಲಿನಲ್ಲಿ ಸಿಕ್ಕಿಹಾಕಿಕೊಂಡವರಾಗಿದ್ದಾರೆ. ಅವರು ಹಾನಿಕರವಾದ ಅನೇಕ ಮೂರ್ಖ ಆಸೆಗಳಲ್ಲಿ ಸಿಕ್ಕಿಬೀಳುವರು. ಅವು ಜನರನ್ನು ಹಾಳುಮಾಡಿ, ನಾಶಗೊಳಿಸುತ್ತವೆ.


ಬಳಿಕ ಯೇಸು ನೆರೆದಿದ್ದ ಜನರಿಗೆ, “ಎಚ್ಚರಿಕೆ, ಯಾವ ವಿಧವಾದ ಸ್ವಾರ್ಥಕ್ಕೂ ಒಳಗಾಗದಂತೆ ಜಾಗರೂಕರಾಗಿರಿ. ಒಬ್ಬನಿಗೆ ಎಷ್ಟೇ ಆಸ್ತಿಯಿದ್ದರೂ ಅದರಿಂದ ಅವನು ಜೀವವನ್ನು ಪಡೆದುಕೊಳ್ಳಲಾರನು” ಎಂದನು.


“ಮುಳ್ಳುಗಿಡಗಳ ನಡುವೆ ಬಿದ್ದ ಬೀಜ ಅಂದರೇನು? ಬೋಧನೆಯನ್ನು ಕೇಳಿದರೂ ಜೀವನದ ಚಿಂತೆಗಳಿಂದ ಮತ್ತು ಹಣದ ಮೇಲಿನ ಪ್ರೀತಿಯಿಂದ ಬೋಧನೆಯನ್ನು ತನ್ನಲ್ಲಿ ಬೆಳೆಯದಂತೆ ಮಾಡುವವನೇ ಬೀಜ ಬಿದ್ದ ಮುಳ್ಳುಗಿಡಗಳ ನೆಲವಾಗಿರವನು. ಆದ್ದರಿಂದ ಬೋಧನೆಯು ಆ ಮನುಷ್ಯನ ಜೀವಿತದಲ್ಲಿ ಫಲ ಕೊಡುವುದಿಲ್ಲ.


ಸೊಲೊಮೋನನ ಬಟ್ಟಲುಗಳು ಮತ್ತು ಲೋಟಗಳು ಬಂಗಾರದಿಂದ ತಯಾರಿಸಲಾಗಿದ್ದವು. “ಲೆಬನೋನಿನ ಅರಣ್ಯ” ಎಂದು ಕರೆಯುವ ಕಟ್ಟಡದಲ್ಲಿದ್ದ ಎಲ್ಲಾ ಆಯುಧಗಳನ್ನು ಅಪ್ಪಟ ಚಿನ್ನದಿಂದ ಮಾಡಿದ್ದರು. ಅರಮನೆಯ ಯಾವ ವಸ್ತುವನ್ನೂ ಬೆಳ್ಳಿಯಿಂದ ಮಾಡಿರಲಿಲ್ಲ. ಜನರು ಬೆಳ್ಳಿಯನ್ನು ಅಮೂಲ್ಯವೆಂದು ಯೋಚಿಸದಷ್ಟು ಬಂಗಾರವು ಸೊಲೊಮೋನನ ಕಾಲದಲ್ಲಿತ್ತು!


ದಾವೀದನು ಹೆಬ್ರೋನಿನಿಂದ ಜೆರುಸಲೇಮಿಗೆ ಹೋದನು. ದಾವೀದನಿಗೆ ಜೆರುಸಲೇಮಿನಲ್ಲಿ ಅನೇಕ ಪತ್ನಿಯರೂ ಉಪಪತ್ನಿಯರೂ ಇದ್ದರು. ಜೆರುಸಲೇಮಿನಲ್ಲಿ ದಾವೀದನಿಗೆ ಅನೇಕ ಮಕ್ಕಳು ಹುಟ್ಟಿದರು.


“ಯೆಹೋವನು ಹೇಳುವುದೇನೆಂದರೆ: ‘ನಾನು ನಿನಗೆ ತೊಂದರೆಯನ್ನುಂಟುಮಾಡುತ್ತೇನೆ. ನಿನ್ನ ಸ್ವಂತ ಕುಟುಂಬದಿಂದಲೇ ಈ ತೊಂದರೆಯು ಬರುತ್ತದೆ. ನಾನು ನಿನ್ನ ಪತ್ನಿಯರನ್ನು ತೆಗೆದುಕೊಂಡು ನಿನಗೆ ತೀರ ಹತ್ತಿರನಾಗಿರುವ ಒಬ್ಬ ವ್ಯಕ್ತಿಗೆ ಕೊಡುತ್ತೇನೆ. ಅವನು ನಿನ್ನ ಪತ್ನಿಯರ ಜೊತೆಯಲ್ಲಿ ಮಲಗುತ್ತಾನೆ. ಇದು ಎಲ್ಲರಿಗೂ ತಿಳಿಯುತ್ತದೆ.


ರಾಜನು ಇಸ್ರೇಲನ್ನು ಬಹಳ ಶ್ರೀಮಂತವಾಗಿರಿಸಿದನು. ಜೆರುಸಲೇಮಿನಲ್ಲಿ ಬೆಳ್ಳಿಯು ಕಲ್ಲುಗಳಂತೆಯೂ ದೇವದಾರುಮರಗಳು ಬೆಟ್ಟದ ಮೇಲೆ ಬೆಳೆಯುವ ಅನೇಕ ಅಂಜೂರದ ಗಿಡಗಳಂತೆಯೂ ಹೇರಳವಾಗಿದ್ದವು.


ಜೆರುಸಲೇಮಿನಲ್ಲಿ ಸೊಲೊಮೋನನು ಅಪಾರವಾದ ಬೆಳ್ಳಿಬಂಗಾರಗಳನ್ನು ಶೇಖರಿಸಿಟ್ಟಿದನು. ಭೂಮಿಯ ಮೇಲೆ ಕಲ್ಲುಗಳು ಹೇಗಿರುತ್ತವೋ ಅದೇ ರೀತಿಯಲ್ಲಿ ಅವನಲ್ಲಿ ಬೆಳ್ಳಿಬಂಗಾರಗಳಿದ್ದವು. ದೇವದಾರು ಮರಗಳನ್ನೂ ಸೊಲೊಮೋನನು ಶೇಖರಿಸಿಟ್ಟನು. ಪಶ್ಚಿಮದ ಬೆಟ್ಟಪ್ರದೇಶಗಳಲ್ಲಿ ಜಾಲಿಮರಗಳು ಹೇರಳವಾಗಿರುವಂತೆ ದೇವದಾರುಮರಗಳೂ ಹೇರಳವಾಗಿದ್ದವು.


ರೆಹಬ್ಬಾಮನು ತನ್ನ ಬೇರೆ ಪತ್ನಿಯರಿಗಿಂತಲೂ ಉಪಪತ್ನಿಯರಿಗಿಂತಲೂ ಮಾಕಳನ್ನು ಹೆಚ್ಚಾಗಿ ಪ್ರೀತಿಸಿದನು. ಮಾಕಳು ಅಬ್ಷಾಲೋಮನ ಮಗಳಾಗಿದ್ದಳು. ರೆಹಬ್ಬಾಮನಿಗೆ ಹದಿನೆಂಟು ಮಂದಿ ಪತ್ನಿಯರೂ ಅರವತ್ತು ಮಂದಿ ಉಪಪತ್ನಿಯರೂ ಇದ್ದರು. ಅವನಿಗೆ ಇಪ್ಪತ್ತೆಂಟು ಗಂಡುಮಕ್ಕಳೂ ಅರವತ್ತು ಹೆಣ್ಣುಮಕ್ಕಳೂ ಇದ್ದರು.


ನಿನ್ನ ಶಕ್ತಿಯನ್ನು ಹೆಂಗಸರಲ್ಲಿ ವ್ಯರ್ಥಮಾಡಿಕೊಳ್ಳಬೇಡ. ರಾಜನನ್ನು ನಾಶಮಾಡುವವರು ಹೆಂಗಸರುಗಳೇ. ನಿನ್ನನ್ನು ಅವರಲ್ಲಿ ಹಾಳುಮಾಡಿಕೊಳ್ಳಬೇಡ.


ಜೆರುಸಲೇಮಿನಲ್ಲಿ ದಾವೀದನು ಇನ್ನೂ ಹಲವು ಸ್ತ್ರೀಯರನ್ನು ಮದುವೆಯಾದನು. ಅವನಿಗೆ ಅನೇಕ ಗಂಡುಹೆಣ್ಣು ಮಕ್ಕಳು ಹುಟ್ಟಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು