Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 17:4 - ಪರಿಶುದ್ದ ಬೈಬಲ್‌

4 ಇಂಥಾ ಕೆಟ್ಟ ಸುದ್ದಿಯನ್ನು ನೀವು ಕೇಳಿದರೆ ಮೊಟ್ಟಮೊದಲಾಗಿ ಅದು ಸತ್ಯವೋ ಸುಳ್ಳೋ ಎಂಬುದನ್ನು ಸರಿಯಾಗಿ ಪರಿಶೀಲಿಸಬೇಕು. ಅಂಥ ಭಯಂಕರ ಸಂಗತಿಯು ಇಸ್ರೇಲಿನಲ್ಲಿ ಸಂಭವಿಸಿದ್ದು ನಿಜವಾಗಿದ್ದಲ್ಲಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ನೀವು ಆ ಸಂಗತಿಯನ್ನು ಕೇಳಿದಾಗ ಸೂಕ್ಷ್ಮವಾಗಿ ವಿಚಾರಣೆಯನ್ನು ಮಾಡಬೇಕು. ಆಗ ಇಸ್ರಾಯೇಲರಲ್ಲಿ ಯಾರಿಂದಾದರೂ ಆ ನಿಷಿದ್ಧಕಾರ್ಯವು ನಡೆದದ್ದು ನಿಜವೆಂದು ತಿಳಿದು ಬಂದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ನಿಮಗೆ ತಿಳಿದರೆ ಅದನ್ನು ನೀವು ಸೂಕ್ಷ್ಮವಾಗಿ ವಿಚಾರಣೆ ಮಾಡಬೇಕು. ಆಗ ಇಸ್ರಯೇಲರಲ್ಲಿ ಯಾರಿಂದಲಾದರೂ ಆ ನಿಷಿದ್ಧಕಾರ್ಯ ನಡೆದದ್ದು ನಿಜವೆಂದು ತಿಳಿದುಬಂದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ನೀವು ಆ ಸಂಗತಿಯನ್ನು ಕೇಳಿದಾಗ ಸೂಕ್ಷ್ಮವಾಗಿ ವಿಚಾರಣೆಯನ್ನು ಮಾಡಬೇಕು. ಆಗ ಇಸ್ರಾಯೇಲ್ಯರಲ್ಲಿ ಯಾರಿಂದಲಾದರೂ ಆ ನಿಷಿದ್ಧಕಾರ್ಯವು ನಡೆದದ್ದು ನಿಜವೆಂದು ತಿಳಿದುಬಂದರೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಆ ಸಂಗತಿಯನ್ನು ನೀವು ಕೇಳಿದಾಗ ಅದನ್ನು ಕೂಲಂಕಷವಾಗಿ ತನಿಖೆ ಮಾಡಬೇಕು. ಆಗ ಇಸ್ರಾಯೇಲರಲ್ಲಿ ಯಾರಿಂದಾದರೂ ಆ ಅಸಹ್ಯಕರವಾದ ಕಾರ್ಯವು ನಡೆದದ್ದು ಸತ್ಯವೆಂದು ತಿಳಿದುಬಂದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 17:4
8 ತಿಳಿವುಗಳ ಹೋಲಿಕೆ  

ನಿಕೊದೇಮನು, “ಒಬ್ಬ ವ್ಯಕ್ತಿಯ ಹೇಳಿಕೆಯನ್ನು ಕೇಳದೆ ತೀರ್ಪು ನೀಡಲು ನಮ್ಮ ಧರ್ಮಶಾಸ್ತ್ರವು ಸಮ್ಮತಿಸುವುದಿಲ್ಲ. ಆತನು ಮಾಡಿರುವುದನ್ನು ನಾವು ತಿಳಿದುಕೊಳ್ಳುವವರೆಗೆ ಆತನಿಗೆ ತೀರ್ಪು ಮಾಡಲಾಗದು” ಎಂದು ಹೇಳಿದನು.


ನ್ಯಾಯಾಧೀಶರು ಅವರನ್ನು ಪ್ರಶ್ನಿಸಿ ಸರಿಯಾಗಿ ವಿಚಾರಿಸಬೇಕು. ಸಾಕ್ಷಿಯವನು ಸುಳ್ಳು ಹೇಳಿದ್ದಾನೆಂಬುದನ್ನು ಅವರು ಕಂಡುಹಿಡಿದರೆ


ವಿಷಯಗಳನ್ನು ರಹಸ್ಯಗೊಳಿಸಿದ್ದರಿಂದ ದೇವರಿಗೆ ಸನ್ಮಾನ; ವಿಷಯಗಳನ್ನು ಕಂಡುಹಿಡಿಯುವುದರಿಂದ ರಾಜನಿಗೆ ಸನ್ಮಾನ.


ಅವರು ಬೇರೆ ದೇವರುಗಳನ್ನಾಗಲಿ ಸೂರ್ಯಚಂದ್ರ ನಕ್ಷತ್ರಗಳನ್ನಾಗಲಿ ಪೂಜಿಸುತ್ತಾರೆ ಎಂಬ ಸುದ್ದಿಯನ್ನು ನೀವು ಕೇಳಿದರೂ ಕೇಳಬಹುದು, ಅದು ದೇವರ ಕಟ್ಟಳೆಗೆ ವಿರುದ್ಧವಾದದ್ದು.


ಆ ಪಾಪಮಾಡಿದವನಿಗೆ ಶಿಕ್ಷೆಯನ್ನು ವಿಧಿಸಬೇಕು. ಪಟ್ಟಣದ ಹೆಬ್ಬಾಗಿಲ ಹೊರಗಿರುವ ಬಯಲಿಗೆ ಆ ತಪ್ಪು ಮಾಡಿದ ಸ್ತ್ರೀಯನ್ನೂ, ಪುರುಷನನ್ನೂ ತೆಗೆದುಕೊಂಡು ಹೋಗಿ ಅಲ್ಲಿ ಅವರನ್ನು ಕಲ್ಲೆಸೆದು ಸಾಯಿಸಬೇಕು.


“ಆದರೆ ಹುಡುಗಿಯ ಗಂಡನು ಆಕೆಯ ಬಗ್ಗೆ ಹೇಳಿದ್ದು ಸತ್ಯವಾಗಿದ್ದರೆ, ಹುಡುಗಿಯ ತಂದೆತಾಯಂದಿರ ಬಳಿ ಆಕೆಯು ಪುರುಷ ಸಂಪರ್ಕವಿಲ್ಲದವಳಾಗಿದ್ದಳು ಎಂಬುದಕ್ಕೆ ಪುರಾವೆ ಇಲ್ಲದಿದ್ದಲ್ಲಿ


ನೀವು ಆ ಪಟ್ಟಣದ ಜನರನ್ನು ದಂಡಿಸಬೇಕು; ಅವರೆಲ್ಲರನ್ನೂ ಕೊಲ್ಲಬೇಕು; ಅವರ ಎಲ್ಲಾ ಪಶುಗಳನ್ನು ಸಹ ಕೊಲ್ಲಬೇಕು. ಆ ಪಟ್ಟಣವನ್ನು ಸಂಪೂರ್ಣವಾಗಿ ನಾಶಮಾಡಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು