Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 17:5 - ಪರಿಶುದ್ದ ಬೈಬಲ್‌

5 ಆ ಪಾಪಮಾಡಿದವನಿಗೆ ಶಿಕ್ಷೆಯನ್ನು ವಿಧಿಸಬೇಕು. ಪಟ್ಟಣದ ಹೆಬ್ಬಾಗಿಲ ಹೊರಗಿರುವ ಬಯಲಿಗೆ ಆ ತಪ್ಪು ಮಾಡಿದ ಸ್ತ್ರೀಯನ್ನೂ, ಪುರುಷನನ್ನೂ ತೆಗೆದುಕೊಂಡು ಹೋಗಿ ಅಲ್ಲಿ ಅವರನ್ನು ಕಲ್ಲೆಸೆದು ಸಾಯಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಆಗ ಆ ಪುರುಷನನ್ನಾಗಲಿ ಅಥವಾ ಸ್ತ್ರೀಯನ್ನಾಗಲಿ ಹಿಡಿದು ಊರ ಹೊರಗೆ ತಂದು ಕಲ್ಲೆಸೆದು ಕೊಲ್ಲಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಆ ಪುರುಷನನ್ನು ಅಥವಾ ಆ ಸ್ತ್ರೀಯನ್ನು ಹಿಡಿದು, ಊರ ಹೊರಗೆ ತಂದು, ಕಲ್ಲುಬೀರಿ ಕೊಲ್ಲಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಆ ಪುರುಷನನ್ನಾಗಲಿ ಸ್ತ್ರೀಯನ್ನಾಗಲಿ ಹಿಡಿದು ಊರ ಹೊರಗೆ ತಂದು ಕಲ್ಲುಗಳಿಂದ ಕೊಲ್ಲಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಆಗ ನೀವು ಆ ಪುರುಷನನ್ನಾಗಲಿ, ಸ್ತ್ರೀಯನ್ನಾಗಲಿ ಊರ ಹೊರಗೆ ತಂದು, ಅವರು ಸಾಯುವಂತೆ ಅವರ ಮೇಲೆ ಕಲ್ಲೆಸೆಯಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 17:5
13 ತಿಳಿವುಗಳ ಹೋಲಿಕೆ  

“ದೂಷಣೆ ಮಾಡಿದ ಮನುಷ್ಯನನ್ನು ಪಾಳೆಯದ ಹೊರಗಿರುವ ಸ್ಥಳಕ್ಕೆ ತನ್ನಿರಿ. ಬಳಿಕ ಅವನ ದೂಷಣೆ ಮಾತುಗಳನ್ನು ಕೇಳಿದ ಎಲ್ಲಾ ಜನರನ್ನು ಒಟ್ಟಾಗಿ ಕರೆಸಿರಿ. ಆ ಜನರು ತಮ್ಮ ಕೈಗಳನ್ನು ಅವನ ತಲೆಯ ಮೇಲೆ ಇಡುವರು. ಆ ಬಳಿಕ ಎಲ್ಲಾ ಜನರು ಅವನಿಗೆ ಕಲ್ಲೆಸೆದು ಕೊಲ್ಲಬೇಕು.


ಆಗ ಯೆಹೋಶುವನು ಅವನಿಗೆ, “ನೀನು ನಮಗೆ ಕೇಡನ್ನು ಬರಮಾಡಿರುವೆ! ಆದ್ದರಿಂದ ಯೆಹೋವನು ನಿನಗೂ ಕೇಡನ್ನು ಮಾಡಲಿ!” ಎಂದನು. ಆಗ ಜನರೆಲ್ಲರೂ ಕಲ್ಲುಗಳನ್ನು ತೂರಿ ಆಕಾನನನ್ನೂ ಅವನ ಕುಟುಂಬದವರನ್ನೂ ಕೊಂದರು ಮತ್ತು ಅವನ ಎಲ್ಲ ಸ್ವತ್ತನ್ನು ಸುಟ್ಟುಹಾಕಿದರು.


ಯಾವನಾದರೂ ಯೆಹೋವನ ನಾಮದ ವಿರುದ್ಧ ಮಾತಾಡಿದರೆ, ಅವನಿಗೆ ಮರಣಶಿಕ್ಷೆಯಾಗಬೇಕು. ಜನರೆಲ್ಲರೂ ಅವನಿಗೆ ಕಲ್ಲೆಸೆದು ಕೊಲ್ಲಬೇಕು. ಯೆಹೋವನ ನಾಮವನ್ನು ನಿಂದಿಸುವ ಪರದೇಶಸ್ಥರಿಗೂ ಅದೇ ರೀತಿಯ ಶಿಕ್ಷೆಯಾಗಬೇಕು. ಯೆಹೋವನ ನಾಮವನ್ನು ನಿಂದಿಸುವವನಿಗೆ ಮರಣಶಿಕ್ಷೆಯಾಗಬೇಕು.


ನಗರದ ಬಾಗಿಲಿನ ಬಳಿಯಿರುವ ಸಾರ್ವಜನಿಕ ಸ್ಥಳಕ್ಕೆ ನೀವು ಅವರಿಬ್ಬರನ್ನು ಕರೆದುಕೊಂಡು ಬಂದು ಅವರಿಬ್ಬರನ್ನೂ ಕಲ್ಲೆಸೆದು ಕೊಲ್ಲಬೇಕು. ನೀವು ಆ ಪುರುಷನನ್ನು ಕೊಲ್ಲಬೇಕು. ಏಕೆಂದರೆ ಅವನು ಮತ್ತೊಬ್ಬನ ಹೆಂಡತಿಯನ್ನು ಲೈಂಗಿಕವಾಗಿ ಹಿಂಸಿಸಿದನು. ನೀವು ಆ ಸ್ತ್ರೀಯನ್ನು ಕೊಲ್ಲಬೇಕು; ಯಾಕೆಂದರೆ ಆಕೆಯು ನಗರದಲ್ಲಿದ್ದರೂ ಸಹಾಯಕ್ಕಾಗಿ ಕೂಗಿಕೊಳ್ಳಲಿಲ್ಲ. ಆ ಕೆಡುಕನ್ನು ನೀವು ನಿಮ್ಮ ಜನರಿಂದ ತೆಗೆದುಹಾಕಬೇಕು.


ಊರಹಿರಿಯರು ಆ ಹುಡುಗಿಯನ್ನು ಆಕೆಯ ತಂದೆಯ ಮನೆಬಾಗಿಲಿಗೆ ತರಬೇಕು. ಅಲ್ಲಿ ಊರಜನರು ಆಕೆಯನ್ನು ಕಲ್ಲೆಸೆದು ಸಾಯಿಸಬೇಕು. ಯಾಕೆಂದರೆ ಆಕೆಯು ಇಸ್ರೇಲಿನಲ್ಲಿ ನಾಚಿಕೆಕರವಾದ ಕೃತ್ಯವನ್ನು ನಡೆಸಿದ್ದಾಳೆ; ತನ್ನ ತಂದೆಯ ಮನೆಯಲ್ಲಿದ್ದುಕೊಂಡು ವೇಶ್ಯಾವೃತ್ತಿ ನಡಿಸಿದ್ದಾಳೆ. ಅಂಥಾ ಪಾಪವನ್ನು ನೀವು ನಿಮ್ಮ ಮಧ್ಯದಿಂದ ತೆಗೆದುಹಾಕಬೇಕು.


ಆಗ ಆ ಪಟ್ಟಣದ ಜನರು ಸೇರಿ ಆ ಮಗನನ್ನು ಕಲ್ಲೆಸೆದು ಕೊಲ್ಲಬೇಕು. ಹೀಗೆ ನಿಮ್ಮಲ್ಲಿರುವ ದುಷ್ಟತನವನ್ನು ತೆಗೆದುಹಾಕಬೇಕು. ಎಲ್ಲಾ ಇಸ್ರೇಲರು ಇದನ್ನು ಕೇಳಿ ಭಯಗ್ರಸ್ತರಾಗುವರು.


ಅಂಥ ಪ್ರವಾದಿ ಅಥವಾ ಕನಸಿನ ಅರ್ಥ ಹೇಳುವವನನ್ನು ಕೊಂದು ಹಾಕಬೇಕು. ಯಾಕೆಂದರೆ ಅವನು ಯೆಹೋವನನ್ನು ತೊರೆಯಲು ಪ್ರೇರೇಪಿಸಿದನಲ್ಲಾ? ದೇವರಾದ ಯೆಹೋವನೇ ನಿಮ್ಮನ್ನು ಈಜಿಪ್ಟಿನಿಂದ ಬಿಡಿಸಿದವನು. ಆತನು ನಿಮಗೆ ಹೇಳಿದ ನಿಯಮಗಳಿಗೆ ವಿರುದ್ಧವಾಗಿ ನಡೆಯಲು ಪ್ರೇರೇಪಿಸುವವನನ್ನು ಕೊಲ್ಲಬೇಕು; ನಿಮ್ಮ ಮಧ್ಯದಿಂದ ಅಂಥ ದುಷ್ಟತನವನ್ನು ತೆಗೆದುಹಾಕಬೇಕು.


ಇಂಥಾ ಕೆಟ್ಟ ಸುದ್ದಿಯನ್ನು ನೀವು ಕೇಳಿದರೆ ಮೊಟ್ಟಮೊದಲಾಗಿ ಅದು ಸತ್ಯವೋ ಸುಳ್ಳೋ ಎಂಬುದನ್ನು ಸರಿಯಾಗಿ ಪರಿಶೀಲಿಸಬೇಕು. ಅಂಥ ಭಯಂಕರ ಸಂಗತಿಯು ಇಸ್ರೇಲಿನಲ್ಲಿ ಸಂಭವಿಸಿದ್ದು ನಿಜವಾಗಿದ್ದಲ್ಲಿ,


“ಪಶುಸಂಗ ಮಾಡಿದವನಿಗೆ ಮರಣದಂಡನೆಯಾಗಬೇಕು.


“ನೀನು ಇಸ್ರೇಲರಿಗೆ ಹೀಗೆ ಆಜ್ಞಾಪಿಸಬೇಕು. ನಿಮ್ಮ ದೇಶದಲ್ಲಿರುವ ಒಬ್ಬನು ತನ್ನ ಮಕ್ಕಳಲ್ಲಿ ಒಬ್ಬನನ್ನು ಸುಳ್ಳು ದೇವರಾದ ಮೊಲೆಕನಿಗೆ ಅರ್ಪಿಸಿದರೆ ಅವನನ್ನು ಕೊಲ್ಲಬೇಕು. ಅವನು ಸ್ವದೇಶಸ್ಥನಾದರೂ ಇಸ್ರೇಲರಲ್ಲಿ ವಾಸಿಸುವ ಪರದೇಶಸ್ಥನಾದರೂ ಅವನನ್ನು ಕಲ್ಲೆಸೆದು ಕೊಲ್ಲಬೇಕು.


ತನ್ನ ಸುತ್ತಲೂ ನಿಂತಿದ್ದ ಜನರಿಗೆ ಯೋವಾಷನು, “ನೀವು ಬಾಳನ ಪಕ್ಷವನ್ನು ವಹಿಸುವಿರಾ? ನೀವು ಬಾಳನನ್ನು ರಕ್ಷಿಸುವಿರಾ? ಬಾಳನ ಪಕ್ಷದವರನ್ನು ಬೆಳಗಾಗುವುದರೊಳಗೆ ಕೊಂದು ಬಿಡಲಾಗುವುದು. ಬಾಳನು ನಿಜವಾಗಿಯೂ ದೇವರಾಗಿದ್ದರೆ ಅವನ ಯಜ್ಞವೇದಿಕೆಯನ್ನು ಬೀಳಿಸುವಾಗ ಅವನು ತನ್ನ ರಕ್ಷಣೆಯನ್ನು ಏಕೆ ಮಾಡಿಕೊಳ್ಳಲಿಲ್ಲ?” ಅಂದನು.


ನಾನು ಅವುಗಳಲ್ಲಿ ಯಾವುದನ್ನೇ ಮಾಡಿದ್ದರೂ ನನಗೆ ಶಿಕ್ಷೆಯಾಗುತ್ತಿತ್ತು. ಯಾಕೆಂದರೆ ಆಗ ನಾನು ಸರ್ವಶಕ್ತನಾದ ದೇವರಿಗೆ ಅಪನಂಬಿಗಸ್ತನಾಗುತ್ತಿದ್ದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು