ಧರ್ಮೋಪದೇಶಕಾಂಡ 17:7 - ಪರಿಶುದ್ದ ಬೈಬಲ್7 ಸತ್ಯವೆಂದು ಹೇಳಿದ ಸಾಕ್ಷಿಗಳು ಮೊದಲು ಅವರ ಮೇಲೆ ಕಲ್ಲೆಸೆಯಬೇಕು. ಅನಂತರ ಬೇರೆಯವರು ಕಲ್ಲೆಸೆದು ಅವರನ್ನು ಸಾಯಿಸಬೇಕು. ಈ ರೀತಿಯಾಗಿ ನಿಮ್ಮ ಮಧ್ಯೆ ಇದ್ದ ದುಷ್ಕೃತ್ಯವನ್ನು ತೆಗೆದುಹಾಕಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಅಪರಾಧಿಯನ್ನು ಕೊಲ್ಲುವುದಕ್ಕೆ ಸಾಕ್ಷಿಗಳೇ ಮೊದಲು ಕಲ್ಲನ್ನು ಹಾಕಬೇಕು; ತರುವಾಯ ಜನರೆಲ್ಲರೂ ಹಾಕಲಿ. ಹೀಗೆ ಮಾಡಿ ನೀವು ಆ ದುಷ್ಟತ್ವವನ್ನು ನಿಮ್ಮ ಮಧ್ಯದಿಂದ ತೆಗೆದುಹಾಕಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಅಪರಾಧಿಯನ್ನು ಕೊಲ್ಲುವುದಕ್ಕೆ ಸಾಕ್ಷಿಗಳೇ ಮೊದಲು ಕಲ್ಲನ್ನು ಎಸೆಯಬೇಕು. ತರುವಾಯ ಜನರೆಲ್ಲರೂ ಹಾಕಲಿ. ಹೀಗೆಮಾಡಿ ನೀವು ಆ ದುಷ್ಟತ್ವವನ್ನು ನಿಮ್ಮ ಮಧ್ಯೆಯಿಂದ ತೆಗೆದುಹಾಕಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಅಪರಾಧಿಯನ್ನು ಕೊಲ್ಲುವದಕ್ಕೆ ಸಾಕ್ಷಿಗಳೇ ಮೊದಲು ಕಲ್ಲನ್ನು ಹಾಕಬೇಕು; ತರುವಾಯ ಜನರೆಲ್ಲರೂ ಹಾಕಲಿ. ಹೀಗೆ ಮಾಡಿ ನೀವು ಆ ದುಷ್ಟತ್ವವನ್ನು ನಿಮ್ಮ ಮಧ್ಯದಿಂದ ತೆಗೆದುಹಾಕಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಅವನನ್ನು ಕೊಲ್ಲುವ ಮೊದಲು ಸಾಕ್ಷಿಗಳಾದ ಎಲ್ಲಾ ಜನರು ತಮ್ಮ ಕೈಗಳನ್ನು ಅವನ ಮೇಲೆ ಇಡಬೇಕು. ಹೀಗೆ ಕೆಟ್ಟದ್ದನ್ನು ನಿಮ್ಮ ಮಧ್ಯದಿಂದ ತೆಗೆದುಹಾಕಬೇಕು. ಅಧ್ಯಾಯವನ್ನು ನೋಡಿ |
“ನಿಮ್ಮ ಹತ್ತಿರದ ಸಂಬಂಧಿಕರಲ್ಲಿ ಯಾರಾದರೂ ಇತರ ದೇವರುಗಳನ್ನು ಅನುಸರಿಸಲು ನಿಮ್ಮನ್ನು ಗುಪ್ತವಾಗಿ ಒತ್ತಾಯ ಮಾಡಬಹುದು. ಅವರು ನಿಮ್ಮ ಸ್ವಂತ ಸಹೋದರನಾಗಿರಬಹುದು, ನಿಮ್ಮ ಮಕ್ಕಳಾಗಿರಬಹುದು, ನಿಮ್ಮ ಹೆಂಡತಿಯಾಗಿರಬಹುದು, ಅಥವಾ ಆಪ್ತಗೆಳೆಯನಾಗಿರಬಹುದು. ಅವರು ಬಂದು, ‘ಬಾ, ನಾವು ಬೇರೆ ದೇವರನ್ನು ಹಿಂಬಾಲಿಸೋಣ’ (ಈ ದೇವರನ್ನು ನೀವಾಗಲಿ ನಿಮ್ಮ ಪೂರ್ವಿಕರಾಗಲಿ ತಿಳಿದಿರಲಿಲ್ಲ.
ನಗರದ ಬಾಗಿಲಿನ ಬಳಿಯಿರುವ ಸಾರ್ವಜನಿಕ ಸ್ಥಳಕ್ಕೆ ನೀವು ಅವರಿಬ್ಬರನ್ನು ಕರೆದುಕೊಂಡು ಬಂದು ಅವರಿಬ್ಬರನ್ನೂ ಕಲ್ಲೆಸೆದು ಕೊಲ್ಲಬೇಕು. ನೀವು ಆ ಪುರುಷನನ್ನು ಕೊಲ್ಲಬೇಕು. ಏಕೆಂದರೆ ಅವನು ಮತ್ತೊಬ್ಬನ ಹೆಂಡತಿಯನ್ನು ಲೈಂಗಿಕವಾಗಿ ಹಿಂಸಿಸಿದನು. ನೀವು ಆ ಸ್ತ್ರೀಯನ್ನು ಕೊಲ್ಲಬೇಕು; ಯಾಕೆಂದರೆ ಆಕೆಯು ನಗರದಲ್ಲಿದ್ದರೂ ಸಹಾಯಕ್ಕಾಗಿ ಕೂಗಿಕೊಳ್ಳಲಿಲ್ಲ. ಆ ಕೆಡುಕನ್ನು ನೀವು ನಿಮ್ಮ ಜನರಿಂದ ತೆಗೆದುಹಾಕಬೇಕು.