Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 17:8 - ಪರಿಶುದ್ದ ಬೈಬಲ್‌

8 “ನಿಮ್ಮ ನ್ಯಾಯಸ್ಥಾನದಲ್ಲಿ ನ್ಯಾಯತೀರಿಸಲಾಗದ ಕಷ್ಟದ ಸಮಸ್ಯೆಗಳು ಬರುವವು. ಅವು ಕೊಲೆ ಅಥವಾ ಇಬ್ಬರ ಮಧ್ಯೆ ವಿವಾದವಿರಬಹುದು; ಅಥವಾ ಜಗಳಮಾಡಿ ಗಾಯಗೊಂಡಿರುವ ಪ್ರಕರಣವಾಗಿರಬಹುದು. ನಿಮ್ಮ ಪಟ್ಟಣಗಳ ನ್ಯಾಯಸ್ಥಾನದಲ್ಲಿ ಈ ಪ್ರಕರಣಗಳ ವಿಚಾರಣೆ ನಡಿಸುವಾಗ ಸರಿಯಾದ ಇತ್ಯರ್ಥಮಾಡಿ ತೀರ್ಪುಮಾಡಲು ಕಷ್ಟವಾದಲ್ಲಿ ನೀವು ದೇವರು ಆರಿಸುವ ಸ್ಥಳಕ್ಕೆ ಹೋಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ವಿಧವಿಧವಾದ ಕೊಲೆ, ನ್ಯಾಯ, ಹೊಡೆದಾಟ ಇವುಗಳ ವಿಷಯದಲ್ಲಿ ಅನುಮಾನ ಅಥವಾ ಚರ್ಚೆಗಳು ನಿಮ್ಮ ಊರಿನಲ್ಲಿ ಉಂಟಾದಾಗ, ನ್ಯಾಯ ತೀರಿಸುವುದು ಕಷ್ಟವಾದರೆ, ನೀವು ಊರಿನಿಂದ ಹೊರಟು ನಿಮ್ಮ ದೇವರಾದ ಯೆಹೋವನು ಆರಿಸಿಕೊಳ್ಳುವ ಸ್ಥಳಕ್ಕೆ ಹೋಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 “ವಿಧವಿಧವಾದ ಜೀವಹತ್ಯ, ಹಕ್ಕುಬಾಧ್ಯತೆ, ಹೊಡೆದಾಟ ಇವುಗಳ ವಿಷಯದಲ್ಲಿ ಅನುಮಾನ, ಚರ್ಚೆಗಳು ನಿಮ್ಮ ಊರಲ್ಲಿ ಉಂಟಾಗಬಹುದು. ಆಗ ಸರಿಯಾಗಿ ವಿವೇಚಿಸುವುದು ನಿಮ್ಮ ಶಕ್ತಿಗೆ ಮೀರಿದ ಪಕ್ಷಕ್ಕೆ ನೀವು ಊರಿನಿಂದ ಹೊರಟು ನಿಮ್ಮ ದೇವರಾದ ಸರ್ವೇಶ್ವರ ಆರಿಸಿಕೊಳ್ಳುವ ಸ್ಥಳದಲ್ಲಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ವಿಧವಿಧವಾದ ಜೀವಹತ್ಯ, ನ್ಯಾಯ, ಹೊಡೆದಾಟ ಇವುಗಳ ವಿಷಯದಲ್ಲಿ ಅನುಮಾನ ಚರ್ಚೆಗಳು ನಿಮ್ಮ ಊರಲ್ಲಿ ಉಂಟಾದಾಗ, ಸರಿಯಾಗಿ ವಿವೇಚಿಸುವದು ನಿಮ್ಮ ಶಕ್ತಿಗೆ ಮೀರಿದ ಪಕ್ಷಕ್ಕೆ ನೀವು ಊರಿನಿಂದ ಹೊರಟು ನಿಮ್ಮ ದೇವರಾದ ಯೆಹೋವನು ಆದುಕೊಳ್ಳುವ ಸ್ಥಳಕ್ಕೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ನಿಮ್ಮ ಊರುಗಳಲ್ಲಿ ಉಂಟಾದ ವಿವಾದಗಳ ವಿಷಯವಾಗಿ ಅಂದರೆ, ಕೊಲೆಯ ವ್ಯಾಜ್ಯವಾಗಲಿ, ವಾದಿ ಪ್ರತಿವಾದ ವ್ಯಾಜ್ಯವಾಗಲಿ, ಹೊಡೆದಾಟದ ವ್ಯಾಜ್ಯವಾಗಲಿ, ನಿಮಗೆ ನ್ಯಾಯತೀರಿಸುವುದು ಕಷ್ಟವಾದರೆ, ನಿಮ್ಮ ದೇವರಾದ ಯೆಹೋವ ದೇವರು ಆಯ್ದುಕೊಳ್ಳುವ ಸ್ಥಳಕ್ಕೆ ಹೋಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 17:8
28 ತಿಳಿವುಗಳ ಹೋಲಿಕೆ  

ನಿಮ್ಮ ದೇವರಾದ ಯೆಹೋವನು ನಿಮ್ಮ ಕುಲದವರ ಪ್ರಾಂತ್ಯಗಳಿಂದ ಒಂದು ವಿಶೇಷ ಸ್ಥಳವನ್ನು ಆರಿಸಿಕೊಂಡು ಅದಕ್ಕೆ ತನ್ನ ಹೆಸರಿಡುವನು. ಅಲ್ಲಿ ಆತನ ಆಲಯ ಕಟ್ಟಲ್ಪಡುವುದು. ಆತನನ್ನು ಆರಾಧಿಸಲು ನೀವು ಅಲ್ಲಿಗೆ ಹೋಗಬೇಕು.


“ಈ ವಿಷಯದ ಬಗ್ಗೆ ಧರ್ಮಶಾಸ್ತ್ರವು ಏನು ಹೇಳುತ್ತದೆ ಎಂಬುದನ್ನು ತಿಳಿದುಕೊಳ್ಳಲು ಯಾಜಕರನ್ನು ವಿಚಾರಿಸು ಎಂಬುದಾಗಿ ಸರ್ವಶಕ್ತನಾದ ಯೆಹೋವನು ನಿನಗೆ ಆಜ್ಞಾಪಿಸುತ್ತಾನೆ.


ನ್ಯಾಯತೀರಿಸುವಾಗ ಒಬ್ಬನು ಇನ್ನೊಬ್ಬನಿಗಿಂತ ವಿಶೇಷ ವ್ಯಕ್ತಿಯಾಗಿದ್ದಾನೆ ಎಂಬುದನ್ನು ಲೆಕ್ಕಿಸದೆ ಇಬ್ಬರೂ ಸಮಾನರೆಂದು ಪರಿಗಣಿಸಿ ಸರಿಯಾದ ತೀರ್ಪು ಕೊಡಬೇಕು. ನೀವು ಯಾರಿಗೂ ಭಯಪಡಬೇಡಿರಿ. ಯಾಕೆಂದರೆ ನಿಮ್ಮ ತೀರ್ಪು ದೇವರಿಂದ ಬಂದ ತೀರ್ಪಾಗಿರುತ್ತದೆ. ನಿಮಗೆ ಬಗೆಹರಿಸಲು ಕಷ್ಟವಾಗುವ ದೂರುಗಳಿದ್ದಲ್ಲಿ ಅವುಗಳನ್ನು ನನ್ನ ಬಳಿಗೆ ತನ್ನಿರಿ. ಅವುಗಳಿಗೆ ನಾನು ನ್ಯಾಯತೀರ್ಪು ನೀಡುವೆನು.’


ಒಬ್ಬ ಯಾಜಕನು ಯೆಹೋವನ ಬೋಧನೆಯನ್ನು ಚೆನ್ನಾಗಿ ಅರಿತಿರಬೇಕು. ಜನರು ಯಾಜಕನ ಬಳಿಗೆ ಹೋಗಿ ದೇವರ ಬೋಧನೆಯನ್ನು ಕೇಳಿ ತಿಳಿದುಕೊಳ್ಳಬೇಕು. ಯಾಜಕನು ದೇವರ ಸಂದೇಶವನ್ನು ಜನರಿಗೆ ತಲುಪಿಸುವವನಾಗಿರಬೇಕು.


ಆ ಪ್ರಕರಣಕ್ಕೆ ಸೇರಿದವರಿಬ್ಬರೂ ಯೆಹೋವನು ಆರಿಸಿದ ಸ್ಥಳಕ್ಕೆ ಹೋಗಿ ಅಲ್ಲಿ ಕಾರ್ಯತತ್ಪರರಾಗಿರುವ ಯಾಜಕರನ್ನು ಮತ್ತು ನ್ಯಾಯಾಧೀಶರನ್ನು ಕಾಣಬೇಕು.


“ಅಂಥಾ ಮನುಷ್ಯನಿಗೆ ಅನ್ವಯಿಸುವ ನಿಯಮಗಳು ಯಾವುವೆಂದರೆ: ಆ ಮನುಷ್ಯನು ಇನ್ನೊಬ್ಬನನ್ನು ಕೊಂದದ್ದು ಆಕಸ್ಮಿಕವಾಗಿರಬೇಕು; ಕೊಲ್ಲಲ್ಪಟ್ಟವನ ಮೇಲೆ ಅವನಿಗೆ ದ್ವೇಷವಿರಬಾರದು.


“ಯಾವನಾದರೂ ಕಬ್ಬಿಣದ ಆಯುಧದಿಂದ ಮತ್ತೊಬ್ಬನನ್ನು ಹೊಡೆದು ಕೊಂದರೆ ಅವನನ್ನು ಕೊಲೆಗಾರನೆಂದು ನೀವು ತೀರ್ಮಾನಿಸಬೇಕು. ಅಂಥವನಿಗೆ ಮರಣಶಿಕ್ಷೆಯಾಗಬೇಕು.


ಆಶ್ರಯ ಸ್ಥಳಗಳಾಗುವುದಕ್ಕೆ ಪಟ್ಟಣಗಳನ್ನು ಆರಿಸಿಕೊಳ್ಳಬೇಕು. ಕೈತಪ್ಪಿ ಮತ್ತೊಬ್ಬನನ್ನು ಕೊಂದವನು ಅವುಗಳಲ್ಲಿ ಒಂದಕ್ಕೆ ಓಡಿಹೋಗಿ ಸುರಕ್ಷಿತನಾಗಿರಬಹುದು.


ಅವನಲ್ಲಿ ಏನೂ ಇಲ್ಲದ ಪಕ್ಷಕ್ಕೆ, ಅವನು ಗುಲಾಮನಾಗುವನು. ಆದರೆ ಆ ಕಳ್ಳನು ಪಶುವನ್ನು ಇನ್ನೂ ಇಟ್ಟುಕೊಂಡಿರುವುದು ನಿಮಗೆ ಗೊತ್ತಾದರೆ, ಅವನು ಕದ್ದ ಪಶುವಿಗೆ ಪ್ರತಿಯಾಗಿ ಎರಡು ಪಶುಗಳನ್ನು ಮಾಲೀಕನಿಗೆ ಕೊಡಿಸಬೇಕು. ಕದ್ದದ್ದು ಎತ್ತಾಗಿರಬಹುದು, ಕತ್ತೆಯಾಗಿರಬಹುದು ಅಥವಾ ಕುರಿಯಾಗಿರಬಹುದು. “ಕಳ್ಳನು ರಾತ್ರಿಯಲ್ಲಿ ಮನೆಗೆ ಕನ್ನ ಹಾಕಲು ಪ್ರಯತ್ನಿಸುತ್ತಿರುವಾಗ ಕೊಲ್ಲಲ್ಪಟ್ಟರೆ, ಅವನನ್ನು ಕೊಂದದ್ದಕ್ಕೆ ಯಾರೂ ತಪ್ಪಿತಸ್ಧರಾಗುವುದಿಲ್ಲ. ಆದರೆ ಇದು ಹಗಲಿನಲ್ಲಿ ನಡೆದರೆ ಕೊಂದವನು ಕೊಲೆಗಾರನಾಗುವನು.


“ಒಬ್ಬನ ಎತ್ತು ಪುರುಷನನ್ನಾಗಲಿ ಸ್ತ್ರೀಯನ್ನಾಗಲಿ ಕೊಂದರೆ, ಆಗ ನೀವು ಕಲ್ಲುಗಳಿಂದ ಆ ಎತ್ತನ್ನು ಕೊಲ್ಲಬೇಕು. ನೀವು ಅದರ ಮಾಂಸವನ್ನು ತಿನ್ನಬಾರದು. ಆದರೆ ಎತ್ತಿನ ಮಾಲೀಕನು ತಪ್ಪಿತಸ್ಥನಲ್ಲ.


“ಇಬ್ಬರು ಜಗಳವಾಡುವಾಗ ಗರ್ಭಿಣೆ ಸ್ತ್ರೀಗೆ ಪೆಟ್ಟಾಗಿ ಗರ್ಭಸ್ರಾವವಾದರೆ ಅದಕ್ಕೆ ಕಾರಣನಾದ ವ್ಯಕ್ತಿಯು ಅವಳಿಗೆ ದಂಡ ಕೊಡಬೇಕು. ಅವನು ಎಷ್ಟು ದಂಡ ಕೊಡಬೇಕೆಂಬುದನ್ನು ಅವಳ ಗಂಡನು ನ್ಯಾಯಾಧಿಪತಿಗಳ ಸಹಾಯದಿಂದ ತೀರ್ಮಾನಿಸುವನು.


“ಕೆಲವು ಸಲ ಯಜಮಾನರು ಗುಲಾಮನನ್ನಾಗಲಿ ಗುಲಾಮಳನ್ನಾಗಲಿ ಹೊಡೆಯುತ್ತಾರೆ. ಹೊಡೆದಾಗ ಆ ವ್ಯಕ್ತಿಯು ಸತ್ತರೆ, ಯಜಮಾನನಿಗೆ ಶಿಕ್ಷೆಯಾಗಬೇಕು.


ಈ ಅಧಿಕಾರಿಗಳು ಜನರ ನ್ಯಾಯಾಧಿಪತಿಗಳಾಗಿದ್ದರು. ಜನರು ತಮ್ಮ ವ್ಯಾಜ್ಯಗಳನ್ನು ಈ ಅಧಿಕಾರಿಗಳ ಬಳಿಗೆ ಯಾವಾಗಲೂ ತರಬಹುದಾಗಿತ್ತು. ಮೋಶೆಯು ಬಹು ಪ್ರಾಮುಖ್ಯವಾದ ವ್ಯಾಜ್ಯಗಳನ್ನು ಮಾತ್ರ ತೀರ್ಮಾನಿಸುತ್ತಿದ್ದನು.


ಆಗ ಮೋಶೆ ತನ್ನ ಮಾವನಿಗೆ, “ಜನರು ನನ್ನ ಬಳಿಗೆ ಬಂದು ದೇವರ ತೀರ್ಮಾನವನ್ನು ಕೇಳಬಯಸುತ್ತಾರೆ.


ಆದರೆ ನೀವು ಕಳ್ಳನನ್ನು ಕಂಡುಹಿಡಿಯಲಾಗದಿದ್ದರೆ, ಆ ಮನೆಯ ಮಾಲೀಕನು ತಪ್ಪಿತಸ್ಧನಾಗಿದ್ದಾನೋ ಇಲ್ಲವೋ ಎಂದು ದೇವರು ನಿರ್ಣಯಿಸುವನು. ಮನೆಯ ಮಾಲೀಕನು ದೇವರ ಸನ್ನಿಧಿಗೆ ಹೋಗಬೇಕು. ಅವನು ಕದ್ದಿದ್ದಾನೋ ಇಲ್ಲವೋ ಎಂದು ದೇವರು ತೀರ್ಮಾನಿಸುವನು.


ಆಗ ನಿಮ್ಮ ಯೆಹೋವನು ತನ್ನ ಹೆಸರಿಗಾಗಿ ಒಂದು ಸ್ಥಳವನ್ನು ಆರಿಸಿಕೊಳ್ಳುವನು. ಆ ಸ್ಥಳಕ್ಕೆ ನೀವು ನಿಮ್ಮ ಸರ್ವಾಂಗಹೋಮಗಳನ್ನು ಮತ್ತು ಯಜ್ಞಾದಿಗಳನ್ನು ಸಮರ್ಪಿಸಬೇಕು; ನಿಮ್ಮ ಹರಕೆಯ ಕಾಣಿಕೆಗಳನ್ನು, ಚೊಚ್ಚಲ ಪಶುಗಳನ್ನು, ದಶಾಂಶವನ್ನು ಸಲ್ಲಿಸಬೇಕು.


“ನಿಮ್ಮಲ್ಲಿ ಯಾರಿಗಾದರೂ ಇಬ್ಬರಿಗೆ ವಾಗ್ವಾದವಿದ್ದಲ್ಲಿ ಅವರು ಅದನ್ನು ನ್ಯಾಯಸ್ಥಾನಕ್ಕೆ ತೆಗೆದುಕೊಂಡು ಹೋಗಲಿ. ಅಲ್ಲಿ ನ್ಯಾಯಾಧೀಶರು ಯಾರು ಸರಿ ಯಾರು ತಪ್ಪು ಎಂದು ತೀರ್ಮಾನಿಸುವರು.


ವ್ಯಾಜ್ಯಗಳಿಗೆ ತೀರ್ಪು ನೀಡುವ ನ್ಯಾಯಾಧಿಶರಾಗಿ ಯಾಜಕರು ಸೇವೆಮಾಡಬೇಕು ಮತ್ತು ನನ್ನ ಆಡಳಿತವನ್ನು ಆಧರಿಸಿ ಅವರು ತೀರ್ಪು ನೀಡಬೇಕು. ಅವರು ವಿಶೇಷವಾದ ಕೂಟಗಳನ್ನು ಏರ್ಪಡಿಸುವಾಗ ನನ್ನ ವಿಧಿನಿಯಮಗಳನ್ನು ಅನುಸರಿಸುವರು ಮತ್ತು ವಿಶೇಷವಾದ ಎಲ್ಲಾ ರಜಾದಿನಗಳನ್ನು ಮತ್ತು ಸಬ್ಬತ್ ದಿನಗಳನ್ನು ಅವರು ಗೌರವಿಸುವರು.


ಯೆಹೋವನು ತನ್ನ ವಿಶೇಷವಾದ ಸ್ಥಳವನ್ನು ನಿಮ್ಮ ಕುಲಗಳವರ ಮಧ್ಯದಿಂದ ಆರಿಸಿಕೊಳ್ಳುವನು. ನಿಮ್ಮ ಸರ್ವಾಂಗಹೋಮಗಳನ್ನು ಮತ್ತು ನಾನು ನಿಮಗೆ ಹೇಳಿದವುಗಳೆಲ್ಲವನ್ನು ಅದೇ ಸ್ಥಳದಲ್ಲಿ ಮಾಡಿರಿ.


ಊರಿನಲ್ಲಿದ್ದ ಲೇವಿಯರೂ ಅಲ್ಲಿಗೆ ಹೋಗಬೇಕು. ಯೆಹೋವನು ಅವರ ಜನರನ್ನು ಆತನ ಹೆಸರಿನಲ್ಲಿ ಆಶೀರ್ವದಿಸುವುದಕ್ಕಾಗಿಯೂ ತನ್ನ ಸೇವೆ ಮಾಡುವುದಕ್ಕಾಗಿಯೂ ಆರಿಸಿದ್ದಾನೆ. ಎಲ್ಲಾ ವಾಗ್ವಾದಗಳನ್ನು ಯಾಜಕನೇ ಇತ್ಯರ್ಥಮಾಡುವನು.


ಅಬ್ಷಾಲೋಮನು ಹೊತ್ತಾರೆಯಲ್ಲಿಯೇ ಎದ್ದು ದ್ವಾರದ ಹತ್ತಿರದಲ್ಲಿ ನಿಂತುಕೊಳ್ಳುತ್ತಿದ್ದನು. ತೊಂದರೆಯಲ್ಲಿ ಸಿಕ್ಕಿಕೊಂಡಿರುವ ಯಾವನಾದರೂ ತೀರ್ಪಿಗಾಗಿ ರಾಜನಾದ ದಾವೀದನ ಬಳಿಗೆ ಹೋಗುತ್ತಿರುವುದನ್ನು ಅಬ್ಷಾಲೋಮನು ಕಂಡರೆ ಅವನನ್ನು ತನ್ನ ಬಳಿಗೆ ಕರೆಯುತ್ತಿದ್ದನು. ಅಬ್ಷಾಲೋಮನು, “ನೀನು ಯಾವ ನಗರದಿಂದ ಬಂದೆ?” ಎಂದು ಕೇಳುತ್ತಿದ್ದನು. ಆ ಮನುಷ್ಯನು, “ನಾನು ಇಸ್ರೇಲಿನ ಇಂಥ ಕುಲಕ್ಕೆ ಸೇರಿದವನು” ಎಂದು ಉತ್ತರಿಸುತ್ತಿದ್ದನು.


ಕೆನನ್ಯನು ಇಚ್ಹಾರ್ಯ ವಂಶದವನಾಗಿದ್ದನು. ಕೆನನ್ಯನೂ ಅವನ ಮಕ್ಕಳೂ ನ್ಯಾಯಾಧೀಶರಾಗಿಯೂ ಕಾನೂನು ಪಾಲಕರಾಗಿಯೂ ಇಸ್ರೇಲಿನ ಅನೇಕ ಕಡೆಗಳಲ್ಲಿ ಕೆಲಸ ಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು