ಧರ್ಮೋಪದೇಶಕಾಂಡ 18:1 - ಪರಿಶುದ್ದ ಬೈಬಲ್1 “ಇಸ್ರೇಲ್ ದೇಶದೊಳಗೆ ಲೇವಿಕುಲದವರಿಗೆ ಸ್ವಾಸ್ತ್ಯವು ಇರುವುದಿಲ್ಲ. ಅವರು ಯಾಜಕರಾಗಿ ಸೇವೆ ಸಲ್ಲಿಸುವರು. ದೇವರಿಗೆ ಸಮರ್ಪಿಸಿದ ಕಾಣಿಕೆಗಳಲ್ಲಿ ಬೆಂಕಿಯಲ್ಲಿ ಬೇಯಿಸಿದ ಯಜ್ಞಶೇಷವೇ ಅವರ ಆಹಾರ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಯಾಜಕಸೇವೆ ಮಾಡುವ ಲೇವಿಯರಿಗಾಗಲಿ ಅಥವಾ ಲೇವಿಯ ಕುಲದವರಲ್ಲಿ ಯಾರಿಗೇ ಆಗಲಿ ಇತರ ಇಸ್ರಾಯೇಲರೊಡನೆ ಸ್ವಂತಕ್ಕಾಗಿ ಪಾಲಾಗಲಿ ಅಥವಾ ಸ್ವಾಸ್ತ್ಯವಾಗಲಿ ದೊರೆಯುವುದಿಲ್ಲ. ಯೆಹೋವನಿಗೆ ಸಮರ್ಪಿಸಲ್ಪಡುವ ಹೋಮದ್ರವ್ಯಗಳೂ ಆತನಿಗೋಸ್ಕರ ಪ್ರತ್ಯೇಕಿಸಲ್ಪಟ್ಟದ್ದೆಲ್ಲವೂ ಅವರಿಗೆ ಜೀವನಾಧಾರ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 “ಯಾಜಕಸೇವೆ ಮಾಡುವ ಲೇವಿಯರಿಗೆ ಹಾಗು ಲೇವಿಯಕುಲದ ಸರ್ವರಿಗೆ ಇತರ ಇಸ್ರಯೇಲರಂತೆ ಸ್ವಂತಕ್ಕಾಗಿ ಭೂಸ್ವತ್ತು ದೊರೆಯುವುದಿಲ್ಲ. ಸರ್ವೇಶ್ವರನಿಗೆ ಸಮರ್ಪಿತವಾದ ಬಲಿದ್ರವ್ಯಗಳು ಹಾಗು ಎಲ್ಲ ಮೀಸಲಾಗಿಟ್ಟವುಗಳೇ ಅವರಿಗೆ ಜೀವನಾಧಾರ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಯಾಜಕಸೇವೆಮಾಡುವ ಲೇವಿಯರಿಗಾಗಲಿ ಲೇವಿಕುಲದವರಲ್ಲಿ ಯಾರಿಗೇಯಾಗಲಿ ಇತರ ಇಸ್ರಾಯೇಲ್ಯರೊಡನೆ ಸ್ವಂತಕ್ಕಾಗಿ ಭೂಸ್ಥಿತಿ ದೊರೆಯುವದಿಲ್ಲವಷ್ಟೆ. ಯೆಹೋವನಿಗೆ ಸಮರ್ಪಿಸಲ್ಪಡುವ ಹೋಮದ್ರವ್ಯಗಳೂ ಆತನಿಗೋಸ್ಕರ ಪ್ರತ್ಯೇಕಿಸಲ್ಪಟ್ಟದ್ದೆಲ್ಲವೂ ಅವರಿಗೆ ಜೀವನಾಧಾರ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಯಾಜಕರಾದ ಲೇವಿಯರಿಗೂ, ಆ ಎಲ್ಲಾ ಲೇವಿಯ ಗೋತ್ರಕ್ಕೂ, ಇಸ್ರಾಯೇಲಿನ ಸಂಗಡ ಪಾಲೂ ಸೊತ್ತೂ ಇರಬಾರದು. ಅವರು ಯೆಹೋವ ದೇವರಿಗೆ ಸಮರ್ಪಿಸಿದ ದಹನಬಲಿಯ ಕಾಣಿಕೆಗಳ ಮೇಲೆ ಆಧಾರಮಾಡಿಕೊಂಡು ಜೀವಿಸಬೇಕು. ಅದು ಅವರ ಬಾಧ್ಯತೆಯಾಗಿದೆ. ಅಧ್ಯಾಯವನ್ನು ನೋಡಿ |