ಧರ್ಮೋಪದೇಶಕಾಂಡ 18:10 - ಪರಿಶುದ್ದ ಬೈಬಲ್10 ನಿಮ್ಮ ಗಂಡುಮಕ್ಕಳನ್ನಾಗಲಿ ಹೆಣ್ಣುಮಕ್ಕಳನ್ನಾಗಲಿ ನಿಮ್ಮ ಯಜ್ಞವೇದಿಕೆಯ ಬೆಂಕಿಯ ಮೇಲೆ ಬಲಿಯನ್ನಾಗಿ ಅರ್ಪಿಸಬೇಡಿ. ನಿಮ್ಮ ಭವಿಷ್ಯವನ್ನು ತಿಳಿದುಕೊಳ್ಳುವುದಕ್ಕಾಗಿ ಕಣಿಹೇಳುವವರ ಬಳಿಗಾಗಲಿ, ಮಂತ್ರಗಾರರ ಬಳಿಗಾಗಲಿ ಬೇತಾಳಿಕರ ಬಳಿಗಾಗಲಿ, ಮಾಟಗಾರರ ಬಳಿಗಾಗಲಿ ಹೋಗಬೇಡಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಮಕ್ಕಳನ್ನು ಬಲಿಕೊಡುವವರು, ಕಣಿಹೇಳುವವರು, ಶಕುನನೋಡುವವರು, ಯಂತ್ರ ಮಂತ್ರಗಳನ್ನು ಮಾಡುವವರು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಮಕ್ಕಳನ್ನು ಆಹುತಿಕೊಡುವವರು, ಕಣಿಹೇಳುವವರು, ಶಕುನ ನೋಡುವವರು, ಯಂತ್ರಮಂತ್ರಗಳನ್ನು ಮಾಡುವವರು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಮಕ್ಕಳನ್ನು ಆಹುತಿಕೊಡುವವರು, ಕಣಿಹೇಳುವವರು, ಶಕುನನೋಡುವವರು, ಯಂತ್ರಮಂತ್ರಗಳನ್ನು ಮಾಡುವವರು, ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ತನ್ನ ಮಗನನ್ನು ಇಲ್ಲವೆ ಮಗಳನ್ನು ಆಹುತಿ ಕೊಡುವವನೂ, ಕಣಿ ಹೇಳುವವನೂ, ಶಕುನ ನೋಡುವವನೂ, ಸರ್ಪ ಮಂತ್ರದವನೂ, ಮಾಟಗಾರನೂ, ಅಧ್ಯಾಯವನ್ನು ನೋಡಿ |
ಮನಸ್ಸೆಯು ತನ್ನ ಮಗನನ್ನು ಆಹುತಿಕೊಟ್ಟು ಅವನನ್ನು ಯಜ್ಞವೇದಿಕೆಯ ಮೇಲೆ ಹೋಮಮಾಡಿದನು. ಮನಸ್ಸೆಯು ಭವಿಷ್ಯತ್ಕಾಲವನ್ನು ಅರಿಯಲು ಅನೇಕ ಮಾರ್ಗಗಳಲ್ಲಿ ಪ್ರಯತ್ನಿಸುತ್ತಿದ್ದನು. ಅವನು ಪ್ರೇತಾತ್ಮಗಳನ್ನು ವಶಪಡಿಸಿಕೊಂಡಿರುವ ಮಾಂತ್ರಿಕರನ್ನು ಮತ್ತು ತಾಂತ್ರಿಕರನ್ನು ಭೇಟಿಮಾಡಿದನು. ಯೆಹೋವನು ಕೆಟ್ಟದ್ದೆಂದು ಹೇಳಿದ ಅನೇಕಾನೇಕ ಕಾರ್ಯಗಳನ್ನು ಮನಸ್ಸೆಯು ಮಾಡಿದನು. ಯೆಹೋವನು ಕೋಪಗೊಳ್ಳಲು ಇದು ಕಾರಣವಾಯಿತು.
ಆಗ ನಾನು ನಿಮ್ಮ ಬಳಿಗೆ ಬಂದು ಯೋಗ್ಯವಾದ ಕಾರ್ಯವನ್ನು ಮಾಡುವೆನು. ದುಷ್ಟ ಕ್ರಿಯೆಗಳನ್ನು ಮಾಡಿದ ಜನರ ಬಗ್ಗೆ ನ್ಯಾಯಾಧೀಶರೊಡನೆ ದೂರು ಹೇಳುವ ಮನುಷ್ಯನಂತಿರುವೆನು. ಕೆಲವರು ಮಾಟಮಂತ್ರ ಮಾಡುವರು; ಕೆಲವರು ವ್ಯಭಿಚಾರ ಮಾಡುವರು; ಕೆಲವರು ಸುಳ್ಳು ವಾಗ್ದಾನಗಳನ್ನು ಮಾಡುವರು; ಕೆಲವರು ಕೂಲಿಯಾಳುಗಳಿಗೆ ಹೇಳಿದ ಕೂಲಿಯನ್ನು ಕೊಡದೆ ಅವರಿಗೆ ಮೋಸಮಾಡುವರು. ಜನರು ವಿಧವೆಯರಿಗೂ ಅನಾಥರಿಗೂ ಸಹಾಯ ಮಾಡುವದಿಲ್ಲ. ಪರದೇಶಿಗಳಿಗೆ ಸಹಾಯ ಮಾಡುವದಿಲ್ಲ. ನನಗೆ ಗೌರವ ಸಲ್ಲಿಸುವದಿಲ್ಲ.” ಇದು ಸರ್ವಶಕ್ತನಾದ ಯೆಹೋವನ ನುಡಿ.
ಯೆಹೋವನು ಅವರ ಪೂರ್ವಿಕರೊಂದಿಗೆ ಮಾಡಿಕೊಂಡಿದ್ದ ಒಡಂಬಡಿಕೆಯನ್ನು ಮತ್ತು ಆತನ ನಿಯಮಗಳನ್ನು ಅವರು ಒಪ್ಪಲಿಲ್ಲ. ಅವರು ಯೆಹೋವನ ಎಚ್ಚರಿಕೆಗೆ ಗಮನವನ್ನೂ ನೀಡಲಿಲ್ಲ. ಅವರು ನಿರರ್ಥಕವಾದ ವಿಗ್ರಹಗಳನ್ನು ಅನುಸರಿಸಿ ನಿಷ್ಪ್ರಯೋಜಕರಾದರು, ಅವರು ತಮ್ಮ ಸುತ್ತಮುತ್ತಲಿನ ಜನಾಂಗಗಳನ್ನು ಅನುಸರಿಸಿದರು. ಯೆಹೋವನು ಇಸ್ರೇಲಿನ ಜನರಿಗೆ ಮಾಡಬಾರದೆಂದು ಎಚ್ಚರಿಸಿ ಹೇಳಿದ್ದನ್ನು ಈ ಜನಾಂಗಗಳು ಮಾಡಿದವು.