ಧರ್ಮೋಪದೇಶಕಾಂಡ 18:14 - ಪರಿಶುದ್ದ ಬೈಬಲ್14 “ನಿಮ್ಮ ದೇಶದೊಳಗಿಂದ ಇತರ ಜನಾಂಗದವರನ್ನು ನಾಶಮಾಡಬೇಕು. ಆ ಜನರು ಮಾಟಮಂತ್ರಗಳ ಮೂಲಕ ಮತ್ತು ಕಣಿ ಹೇಳುವವರಿಂದ ತಮ್ಮ ಭವಿಷ್ಯವನ್ನು ವಿಚಾರಿಸುವರು. ಆದರೆ ನಿಮ್ಮ ದೇವರಾದ ಯೆಹೋವನು ಅಂಥಾ ಕೆಲಸವನ್ನು ಮಾಡಲು ನಿಮ್ಮನ್ನು ಬಿಡುವುದಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ನೀವು ಸ್ವಾಧೀನಮಾಡಿಕೊಳ್ಳುವ ದೇಶದ ಜನಾಂಗಗಳು ಶಕುನಗಳನ್ನು ನೋಡುತ್ತಾರೆ ಮತ್ತು ಯಂತ್ರ ಮಂತ್ರಗಳನ್ನು ಮಾಡುತ್ತಾರೆ. ನೀವಾದರೋ ಹಾಗೆ ಮಾಡುವುದಕ್ಕೆ ನಿಮ್ಮ ದೇವರಾದ ಯೆಹೋವನಿಂದ ಅಪ್ಪಣೆಹೊಂದಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ನೀವು ಸ್ವಾಧೀನಮಾಡಿಕೊಳ್ಳುವ ಆ ನಾಡಿನ ಜನಾಂಗಗಳು ಶಕುನಗಳನ್ನು ನೋಡುತ್ತಾರೆ, ಯಂತ್ರಮಂತ್ರಗಳನ್ನು ಮಾಡುತ್ತಾರೆ. ನೀವಾದರೋ ಹಾಗೆ ಮಾಡುವುದಕ್ಕೆ ನಿಮ್ಮ ದೇವರಾದ ಸರ್ವೇಶ್ವರನ ಅನುಮತಿ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ನೀವು ಸ್ವಾಧೀನಮಾಡಿಕೊಳ್ಳುವ ದೇಶದ ಜನಾಂಗಗಳು ಶಕುನಗಳನ್ನು ನೋಡುತ್ತಾರೆ. ಯಂತ್ರಮಂತ್ರಗಳನ್ನು ಮಾಡುತ್ತಾರೆ. ನೀವಾದರೋ ಹಾಗೆ ಮಾಡುವದಕ್ಕೆ ನಿಮ್ಮ ದೇವರಾದ ಯೆಹೋವನಿಂದ ಅಪ್ಪಣೆ ಹೊಂದಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ನೀವು ಸ್ವಾಧೀನಪಡಿಸಿಕೊಳ್ಳುವ ಆ ಜನಾಂಗಗಳು ಶಕುನ ನೋಡುವವರ ಹಾಗೂ ಕಣಿಹೇಳುವವರ ಮಾತನ್ನು ಕೇಳುತ್ತಿದ್ದರು. ನಿಮ್ಮನ್ನಾದರೋ ನಿಮ್ಮ ದೇವರಾದ ಯೆಹೋವ ದೇವರು ಹಾಗೆ ಮಾಡಲು ಅನುಮತಿಸಲಿಲ್ಲ. ಅಧ್ಯಾಯವನ್ನು ನೋಡಿ |
ಮನಸ್ಸೆಯು ತನ್ನ ಮಗನನ್ನು ಆಹುತಿಕೊಟ್ಟು ಅವನನ್ನು ಯಜ್ಞವೇದಿಕೆಯ ಮೇಲೆ ಹೋಮಮಾಡಿದನು. ಮನಸ್ಸೆಯು ಭವಿಷ್ಯತ್ಕಾಲವನ್ನು ಅರಿಯಲು ಅನೇಕ ಮಾರ್ಗಗಳಲ್ಲಿ ಪ್ರಯತ್ನಿಸುತ್ತಿದ್ದನು. ಅವನು ಪ್ರೇತಾತ್ಮಗಳನ್ನು ವಶಪಡಿಸಿಕೊಂಡಿರುವ ಮಾಂತ್ರಿಕರನ್ನು ಮತ್ತು ತಾಂತ್ರಿಕರನ್ನು ಭೇಟಿಮಾಡಿದನು. ಯೆಹೋವನು ಕೆಟ್ಟದ್ದೆಂದು ಹೇಳಿದ ಅನೇಕಾನೇಕ ಕಾರ್ಯಗಳನ್ನು ಮನಸ್ಸೆಯು ಮಾಡಿದನು. ಯೆಹೋವನು ಕೋಪಗೊಳ್ಳಲು ಇದು ಕಾರಣವಾಯಿತು.