Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 18:17 - ಪರಿಶುದ್ದ ಬೈಬಲ್‌

17 “ಆಗ ಯೆಹೋವನು ನನಗೆ ಹೇಳಿದ್ದೇನೆಂದರೆ: ‘ಅವರು ಕೇಳುವ ವಿಷಯವು ಒಳ್ಳೆಯದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಆಗ ಯೆಹೋವನು ನನಗೆ, “ಇವರು ಹೇಳಿದ ಮಾತು ಒಳ್ಳೆಯದೇ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಆಗ ಸರ್ವೇಶ್ವರ ನನಗೆ, ‘ಇವರು ಹೇಳಿದ್ದು ಸರಿಯಾಗಿದೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಆಗ ಯೆಹೋವನು ನನಗೆ - ಇವರು ಹೇಳಿದ ಮಾತು ಒಳ್ಳೇದೇ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಆಗ ಯೆಹೋವ ದೇವರು ನನಗೆ, “ಅವರು ಹೇಳಿದ್ದು ಸರಿಯಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 18:17
6 ತಿಳಿವುಗಳ ಹೋಲಿಕೆ  

“ನೀವು ಹೇಳಿದ್ದನ್ನು ಯೆಹೋವನು ಕೇಳಿ ನನ್ನೊಡನೆ ಹೀಗೆಂದನು: ‘ನಿನ್ನ ಜನರು ಹೇಳುವುದನ್ನು ನಾನು ಕೇಳಿದೆನು. ಆ ಮಾತುಗಳೆಲ್ಲಾ ಒಳ್ಳೆಯವೇ.


ನಾನು ಅವರಿಗಾಗಿ ನಿನ್ನ ತರಹದ ಒಬ್ಬ ಪ್ರವಾದಿಯನ್ನು ಕಳುಹಿಸುವೆನು. ಅವನು ಅವರ ಜನರಲ್ಲಿ ಒಬ್ಬನಾಗಿರುವನು. ಅವನು ಜನರಿಗೆ ತಿಳಿಸಬೇಕಾದ ವಿಷಯವನ್ನು ನಾನೇ ಅವನಿಗೆ ತಿಳಿಸುವೆನು. ನಾನು ಆಜ್ಞಾಪಿಸುವುದೆಲ್ಲವನ್ನು ಅವನು ಜನರಿಗೆ ತಿಳಿಸುವನು.


ಆದರೆ ನಮ್ಮ ದೇವರಾದ ಯೆಹೋವನು ಮಾತನಾಡುವುದನ್ನು ನಾವು ಮತ್ತೆ ಕೇಳಿದರೆ ಖಂಡಿತವಾಗಿ ಸಾಯುವೆವು. ಆ ಭಯಂಕರವಾದ ಬೆಂಕಿಯು ನಮ್ಮನ್ನು ದಹಿಸುವುದು. ನಮಗೆ ಸಾಯಲು ಇಷ್ಟವಿಲ್ಲ.


ನನ್ನ ಒಡೆಯನಾದ ಯೆಹೋವನು ನನಗೆ ಬೋಧಿಸುವ ಸಾಮರ್ಥ್ಯವನ್ನು ಅನುಗ್ರಹಿಸಿದ್ದಾನೆ. ಈಗ ನಾನು ದುಃಖದಲ್ಲಿರುವ ಈ ಜನರಿಗೆ ಬೋಧಿಸುತ್ತಿದ್ದೇನೆ. ಪ್ರತೀ ಮುಂಜಾನೆ ವಿದ್ಯಾರ್ಥಿಯೋ ಎಂಬಂತೆ ಆತನು ನನ್ನನ್ನು ಎಬ್ಬಿಸಿ ನನಗೆ ಬೋಧಿಸುತ್ತಾನೆ.


ನನ್ನ ಒಡೆಯನಾದ ಯೆಹೋವನು ನನಗೆ ಕಲಿಯಲು ಸಹಾಯ ಮಾಡುತ್ತಾನೆ. ನಾನು ಆತನಿಗೆ ವಿರುದ್ಧವಾಗಿ ದಂಗೆ ಏಳಲಿಲ್ಲ. ಆತನನ್ನು ಹಿಂಬಾಲಿಸುವದನ್ನು ನಿಲ್ಲಿಸುವದಿಲ್ಲ.


ಆಗ ಯೆಹೋವನು ಕೈಚಾಚಿ ನನ್ನ ಬಾಯನ್ನು ಮುಟ್ಟಿ, “ಯೆರೆಮೀಯನೇ, ಇಗೋ, ನಾನು ನನ್ನ ಮಾತುಗಳನ್ನು ನಿನ್ನ ಬಾಯಲ್ಲಿ ಇಡುತ್ತಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು