Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 18:18 - ಪರಿಶುದ್ದ ಬೈಬಲ್‌

18 ನಾನು ಅವರಿಗಾಗಿ ನಿನ್ನ ತರಹದ ಒಬ್ಬ ಪ್ರವಾದಿಯನ್ನು ಕಳುಹಿಸುವೆನು. ಅವನು ಅವರ ಜನರಲ್ಲಿ ಒಬ್ಬನಾಗಿರುವನು. ಅವನು ಜನರಿಗೆ ತಿಳಿಸಬೇಕಾದ ವಿಷಯವನ್ನು ನಾನೇ ಅವನಿಗೆ ತಿಳಿಸುವೆನು. ನಾನು ಆಜ್ಞಾಪಿಸುವುದೆಲ್ಲವನ್ನು ಅವನು ಜನರಿಗೆ ತಿಳಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಇವರ ಸ್ವದೇಶದವರಲ್ಲಿ ನಿನ್ನಂಥ ಪ್ರವಾದಿಯನ್ನು ಅವರಿಗೋಸ್ಕರ ಏರ್ಪಡಿಸುವೆನು; ಅವನ ಬಾಯಿಂದ ನನ್ನ ಮಾತುಗಳನ್ನು ನುಡಿಸುವೆನು; ನಾನು ಅವನಿಗೆ ಆಜ್ಞಾಪಿಸಿದ್ದನ್ನೆಲ್ಲಾ ಅವನು ಅವರಿಗೆ ತಿಳಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಇವರ ಸ್ವದೇಶದವರಲ್ಲಿ ನಿನ್ನಂಥ ಪ್ರವಾದಿಯನ್ನು ಅವರಿಗೆ ಏರ್ಪಡಿಸುವೆನು; ಅವನ ಬಾಯಿಂದ ನನ್ನ ಮಾತುಗಳನ್ನು ನುಡಿಸುವೆನು; ನಾನು ಅವನಿಗೆ ಆಜ್ಞಾಪಿಸಿದ್ದನ್ನೆಲ್ಲಾ ಅವನು ಅವರಿಗೆ ತಿಳಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಇವರ ಸ್ವದೇಶದವರಲ್ಲಿ ನಿನ್ನಂಥ ಪ್ರವಾದಿಯನ್ನು ಅವರಿಗೋಸ್ಕರ ಏರ್ಪಡಿಸುವೆನು; ಅವನ ಬಾಯಿಂದ ನನ್ನ ಮಾತುಗಳನ್ನು ನುಡಿಸುವೆನು; ನಾನು ಅವನಿಗೆ ಆಜ್ಞಾಪಿಸಿದ್ದನ್ನೆಲ್ಲಾ ಅವನು ಅವರಿಗೆ ತಿಳಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ನಿನ್ನ ಹಾಗಿರುವ ಪ್ರವಾದಿಯನ್ನು ನಾನು ಅವರ ಸಹೋದರರ ಮಧ್ಯದಿಂದ ಅವರಿಗೆ ಎಬ್ಬಿಸುವೆನು; ನನ್ನ ವಾಕ್ಯಗಳನ್ನು ಆತನ ಬಾಯಿಯಲ್ಲಿ ಇಡುವೆನು. ನಾನು ಆತನಿಗೆ ಆಜ್ಞಾಪಿಸುವುದನ್ನೆಲ್ಲಾ ಆತನು ಅವರಿಗೆ ಹೇಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 18:18
40 ತಿಳಿವುಗಳ ಹೋಲಿಕೆ  

ಆದ್ದರಿಂದ ಆತನು ಅವರಿಗೆ, “ನೀವು ಮನುಷ್ಯಕುಮಾರನನ್ನು ಮೇಲಕ್ಕೇರಿಸುವಿರಿ (ಕೊಲ್ಲುವಿರಿ). ನಾನೇ ಆತನೆಂಬುದು ಆಗ ನಿಮಗೆ ತಿಳಿಯುವುದು. ನಾನು ಈ ಕಾರ್ಯಗಳನ್ನು ನನ್ನ ಸ್ವಂತ ಅಧಿಕಾರದಿಂದ ಮಾಡುತ್ತಿಲ್ಲ ಎಂಬುದನ್ನು ನೀವು ತಿಳಿದುಕೊಳ್ಳುವಿರಿ. ಅಲ್ಲದೆ, ತಂದೆಯು ನನಗೆ ಉಪದೇಶಿಸಿದ ಸಂಗತಿಗಳನ್ನು ಮಾತ್ರ ನಾನು ಹೇಳುತ್ತೇನೆಂಬುದೂ ನಿಮಗೆ ಅರಿವಾಗುವುದು.


ನಿಮ್ಮ ದೇವರು ನಿಮ್ಮ ಬಳಿಗೆ ಪ್ರವಾದಿಯನ್ನು ಕಳುಹಿಸುವನು. ಆ ಪ್ರವಾದಿಯು ನಿಮ್ಮ ಕುಲದವರಲ್ಲಿ ಒಬ್ಬನಾಗಿರುವನು. ಅವನು ನನ್ನ ಹಾಗೆ ಇರುವನು ಮತ್ತು ನೀವು ಅವನ ಮಾತುಗಳನ್ನು ಕೇಳಬೇಕು.


ಆ ಸ್ತ್ರೀಯು, “ಮೆಸ್ಸೀಯನು ಬರುತ್ತಾನೆಂದು ನನಗೆ ಗೊತ್ತು. ಆತನು ಬಂದಾಗ ನಮಗೆ ಪ್ರತಿಯೊಂದನ್ನೂ ವಿವರಿಸುವನು” ಎಂದು ಹೇಳಿದಳು. (“ಮೆಸ್ಸೀಯನು” ಅಂದರೆ “ಕ್ರಿಸ್ತನು”)


ಯೇಸು ಅವರಿಗೆ, “ನೀವು ಯಾವುದರ ಬಗ್ಗೆ ಮಾತಾಡುತ್ತಿದ್ದೀರಿ?” ಎಂದು ಕೇಳಿದನು. ಅವರು ಆತನಿಗೆ, “ನಜರೇತಿನ ಯೇಸುವಿನ ಬಗ್ಗೆ. ಆತನು ದೇವರ ಮತ್ತು ಮನುಷ್ಯರ ದೃಷ್ಟಿಯಲ್ಲಿ ಮಹಾಪ್ರವಾದಿಯಾಗಿದ್ದನು. ಆತನು ಅನೇಕ ಸಂಗತಿಗಳನ್ನು ಹೇಳಿದನು ಮತ್ತು ಅದ್ಭುತಕಾರ್ಯಗಳನ್ನು ಮಾಡಿದನು.


ಫಿಲಿಪ್ಪನು ನತಾನಿಯೇಲನನ್ನು ಕಂಡು ಅವನಿಗೆ, “ಯಾವನ ವಿಷಯದಲ್ಲಿ ಮೋಶೆಯು ಧರ್ಮಶಾಸ್ತ್ರದಲ್ಲಿ ಬರೆದನೋ ಮತ್ತು ಪ್ರವಾದಿಗಳು ಬರೆದರೋ, ಆತನನ್ನು ನಾವು ಕಂಡುಕೊಂಡೆವು. ಆತನ ಹೆಸರು ಯೇಸು. ಆತನು ಯೋಸೇಫನ ಮಗನು. ಆತನು ನಜರೇತಿನವನು” ಎಂದು ಹೇಳಿದನು.


ಸರ್ವಶಕ್ತನಾದ ಯೆಹೋವನು ಹೀಗೆನ್ನುತ್ತಾನೆ: “ನನ್ನ ಮಾರ್ಗವನ್ನು ಸಿದ್ಧಮಾಡಲು ನಾನು ಮುಂದೂತನನ್ನು ಕಳುಹಿಸುತ್ತೇನೆ. ನೀವು ಹುಡುಕುತ್ತಿರುವ ಧಣಿಯು ತನ್ನ ಆಲಯಕ್ಕೆ ಬರುತ್ತಾನೆ. ಹೌದು, ನಿಮಗೆ ಬೇಕಾಗಿರುವ ಹೊಸ ಒಡಂಬಡಿಕೆಯ ಸಂದೇಶಕನು ನಿಜವಾಗಿಯೂ ಬರುತ್ತಿದ್ದಾನೆ.


“ನನ್ನ ಸೇವಕನೇ, ನೀನು ಹೇಳತಕ್ಕ ಇಷ್ಟವಾದ ಮಾತುಗಳನ್ನು ನಿನ್ನ ಬಾಯಲ್ಲಿಡುತ್ತೇನೆ. ನಾನು ನನ್ನ ಕೈಗಳಿಂದ ನಿನ್ನನ್ನು ಮುಚ್ಚಿ ಕಾಪಾಡುವೆನು. ಹೊಸ ಭೂಮ್ಯಾಕಾಶಗಳನ್ನು ನಿರ್ಮಿಸಲು ನಾನು ನಿನ್ನನ್ನು ಉಪಯೋಗಿಸುತ್ತೇನೆ. ಚೀಯೋನಿಗೆ, ‘ನೀವು ನನ್ನ ಜನರು’ ಎಂದು ಹೇಳುವದಕ್ಕೆ ನಿನ್ನನ್ನು ಉಪಯೋಗಿಸುತ್ತೇನೆ.”


ನೀನು ನನಗೆ ಕೊಟ್ಟ ಮಾತುಗಳನ್ನು ನಾನು ಇವರಿಗೆ ಕೊಟ್ಟಿದ್ದೇನೆ. ಇವರು ಆ ಮಾತುಗಳನ್ನು ಸ್ವೀಕರಿಸಿಕೊಂಡಿದ್ದಾರೆ. ನಾನು ನಿಜವಾಗಿಯೂ ನಿನ್ನ ಬಳಿಯಿಂದ ಬಂದಿರುವುದಾಗಿಯೂ ನೀನೇ ನನ್ನನ್ನು ಕಳುಹಿಸಿರುವುದಾಗಿಯೂ ಇವರು ನಂಬಿದ್ದಾರೆ.


ದೇವರು ಒಬ್ಬನೇ. ದೇವರಿಗೂ ಮನುಷ್ಯರಿಗೂ ಮಧ್ಯಸ್ತನು ಒಬ್ಬನೇ. ಮನುಷ್ಯನಾಗಿರುವ ಯೇಸುಕ್ರಿಸ್ತನೇ ಆತನು.


ನೀನು ನನ್ನನ್ನು ಈ ಲೋಕಕ್ಕೆ ಕಳುಹಿಸಿದಂತೆ ನಾನೂ ಇವರನ್ನು ಈ ಲೋಕಕ್ಕೆ ಕಳುಹಿಸಿದ್ದೇನೆ.


ಈಗ ನಾನು ನಿಮ್ಮನ್ನು ನನ್ನ ಸೇವಕರುಗಳೆಂದು ಕರೆಯುವುದಿಲ್ಲ. ಯಜಮಾನನ ಕೆಲಸಕಾರ್ಯಗಳು ಸೇವಕನಿಗೆ ತಿಳಿದಿರುವುದಿಲ್ಲ. ಆದರೆ ಈಗ ನಾನು ನಿಮ್ಮನ್ನು ನನ್ನ ಗೆಳೆಯರೆಂದು ಕರೆಯುತ್ತೇನೆ. ಏಕೆಂದರೆ ನನ್ನ ತಂದೆಯಿಂದ ಕೇಳಿದ ಪ್ರತಿಯೊಂದನ್ನೂ ನಾನು ನಿಮಗೆ ಹೇಳಿದ್ದೇನೆ.


ಯೆಹೋವನು ನನಗೆ, “ನೀನು ಸದಾಕಾಲ ಮೆಲ್ಕಿಜೆದೇಕನಂತಹ ಯಾಜಕನಾಗಿರುವೆ” ಎಂದು ವಾಗ್ದಾನ ಮಾಡಿದ್ದಾನೆ. ಆತನು ತನ್ನ ಮನಸ್ಸನ್ನು ಬದಲಾಯಿಸುವುದಿಲ್ಲ.


ದೇವರು ತನ್ನ ಜನರೊಂದಿಗೆ ಮಾಡಿಕೊಂಡ ಶ್ರೇಷ್ಠವಾದ ಒಡಂಬಡಿಕೆಗೆ ಯೇಸುವೇ ಆಧಾರ ಎಂಬುದೇ ಇದರರ್ಥ.


ನನ್ನ ಒಡೆಯನಾದ ಯೆಹೋವನು ನನಗೆ ಬೋಧಿಸುವ ಸಾಮರ್ಥ್ಯವನ್ನು ಅನುಗ್ರಹಿಸಿದ್ದಾನೆ. ಈಗ ನಾನು ದುಃಖದಲ್ಲಿರುವ ಈ ಜನರಿಗೆ ಬೋಧಿಸುತ್ತಿದ್ದೇನೆ. ಪ್ರತೀ ಮುಂಜಾನೆ ವಿದ್ಯಾರ್ಥಿಯೋ ಎಂಬಂತೆ ಆತನು ನನ್ನನ್ನು ಎಬ್ಬಿಸಿ ನನಗೆ ಬೋಧಿಸುತ್ತಾನೆ.


ಆಗ ಇಸ್ರೇಲಿನ ಜನರು ತಮ್ಮ ನಾಯಕರೊಂದಿಗೆ ಒಟ್ಟಾಗಿ ಸೇರಿದರು. ಯೆಹೋವನು ತಾನೇ ಯೆಶುರೂನಿನಲ್ಲಿ ಅರಸನಾದನು.


ಆದ್ದರಿಂದ ಮೋಶೆ ಯೆಹೋವನಿಗೆ ಪ್ರಾರ್ಥಿಸಿ, “ದೇವರೇ, ದಯಮಾಡಿ ಈಕೆಯನ್ನು ವಾಸಿಮಾಡು” ಎಂದು ಮೊರೆಯಿಟ್ಟನು.


ಆದರೆ ನೀವು ಬೆಂಕಿಗೆ ಭಯಪಟ್ಟಿದ್ದರಿಂದ ಬೆಟ್ಟವನ್ನು ಏರಲಿಲ್ಲ. ಆಗ ನಾನು ನಿಮಗೂ ಯೆಹೋವನಿಗೂ ಮಧ್ಯದಲ್ಲಿದ್ದುಕೊಂಡು ಯೆಹೋವನು ಹೇಳಿದ್ದನ್ನು ತಿಳಿಸಿದೆನು.


ಯೆಹೂದ್ಯರು ಯೋಹಾನನಿಗೆ, “ಹಾಗಾದರೆ ನೀನು ಯಾರು? ನೀನು ಎಲೀಯನೋ?” ಎಂದು ಕೇಳಿದರು. ಅವನು, “ಇಲ್ಲ, ನಾನು ಎಲೀಯನಲ್ಲ” ಎಂದು ಉತ್ತರಿಸಿದನು. ಯೆಹೂದ್ಯರು, “ನೀನು ಪ್ರವಾದಿಯೋ?” ಎಂದು ಕೇಳಿದರು. ಯೋಹಾನನು, “ಇಲ್ಲ, ನಾನು ಪ್ರವಾದಿಯಲ್ಲ” ಎಂದು ಉತ್ತರಕೊಟ್ಟನು.


ಅವರು ಅವನಿಗೆ, “ನೀನು ನಿನ್ನ ಬಗ್ಗೆ, ‘ನಾನು ಕ್ರಿಸ್ತನೂ ಅಲ್ಲ, ಎಲೀಯನೂ ಅಲ್ಲ, ಪ್ರವಾದಿಯೂ ಅಲ್ಲ’ ಎಂದು ಹೇಳುತ್ತಿರುವೆ. ಹಾಗಾದರೆ ನೀನು ಜನರಿಗೆ ಏಕೆ ದೀಕ್ಷಾಸ್ನಾನ ಮಾಡಿಸುವೆ?” ಎಂದು ಕೇಳಿದರು.


ನನ್ನಲ್ಲಿ ನಂಬಿಕೆ ಇಡದಿರುವವನಿಗೆ ಮತ್ತು ನಾನು ಹೇಳುವುದನ್ನು ತಿರಸ್ಕರಿಸುವವನಿಗೆ ತೀರ್ಪುಮಾಡುವಂಥದ್ದು ನಾನು ಆಡಿದ ಮಾತುಗಳೇ. ಅಂತಿಮ ದಿನದಂದು ಅವೇ ಅವನಿಗೆ ತೀರ್ಪುಮಾಡುತ್ತವೆ.


ಮೋಶೆಯು ಇಂತೆಂದಿದ್ದಾನೆ: ‘ನಿಮ್ಮ ದೇವರಾದ ಪ್ರಭುವು ನಿಮಗೊಬ್ಬ ಪ್ರವಾದಿಯನ್ನು ಕೊಡುವನು. ನಿಮ್ಮ ಸ್ವಂತ ಜನರ ಮಧ್ಯದಿಂದಲೇ ಆ ಪ್ರವಾದಿ ಬರುವನು. ಆತನು ನನ್ನಂತೆ ಇರುವನು. ಆ ಪ್ರವಾದಿ ಹೇಳುವ ಪ್ರತಿಯೊಂದಕ್ಕೂ ನೀವು ವಿಧೇಯರಾಗಬೇಕು.


“ಈ ಮೋಶೆಯೇ ಯೆಹೂದ್ಯ ಜನರಿಗೆ, ‘ದೇವರು ನಿಮಗೊಬ್ಬ ಪ್ರವಾದಿಯನ್ನು ಕೊಡುವನು. ಆ ಪ್ರವಾದಿಯು ನಿಮ್ಮ ಸ್ವಜನರ ಮಧ್ಯದಿಂದಲೇ ಬರುವನು. ಅವನು ನನ್ನಂತೆಯೇ ಇರುವನು’ ಎಂದು ಹೇಳಿದನು.


ಈಗ ಹೋಗು. ನೀನು ಮಾತಾಡುವಾಗ ನಾನೇ ನಿನ್ನೊಂದಿಗಿರುವೆನು. ನೀನು ಹೇಳಬೇಕಾದ ಮಾತುಗಳನ್ನು ನಾನು ನಿನಗೆ ಕೊಡುವೆನು” ಎಂದು ಹೇಳಿದನು.


ಅವನು ನಿನ್ನೊಡನೆ ಫರೋಹನ ಬಳಿಗೆ ಬರುವನು. ನೀನು ಹೇಳಬೇಕಾದದ್ದನ್ನು ನಾನೇ ನಿನಗೆ ತಿಳಿಸುವೆನು. ಅದನ್ನು ನೀನು ಆರೋನನಿಗೆ ತಿಳಿಸು. ಆರೋನನು ಫರೋಹನೊಡನೆ ಸರಿಯಾಗಿ ಮಾತಾಡುವನು.


ಆಗ ಯೆಹೋವನು ಬಿಳಾಮನಿಗೆ ಅವನು ಹೇಳಬೇಕಾದ ಮಾತನ್ನು ಕಲಿಸಿಕೊಟ್ಟು, “ನೀನು ಬಾಲಾಕನ ಬಳಿಗೆ ತಿರುಗಿಹೋಗಿ ಹೀಗೆ ಹೇಳಬೇಕು” ಎಂದು ಆಜ್ಞಾಪಿಸಿದನು.


ಮೋಶೆಯಂತ ಪ್ರವಾದಿಯು ಇಸ್ರೇಲರಿಗೆ ದೊರೆಯಲೇ ಇಲ್ಲ. ಯೆಹೋವನು ಅವನೊಂದಿಗೆ ಮುಖಾಮುಖಿಯಾಗಿ ಮಾತನಾಡಿದನು.


“ನನ್ನ ಜನರೇ, ನನ್ನ ಮಾತನ್ನು ಕೇಳಿರಿ. ನನ್ನ ಕಟ್ಟಳೆ ಮತ್ತು ನ್ಯಾಯ ಬೆಳಕಿನಂತಿದ್ದು ಹೇಗೆ ಜೀವಿಸಬೇಕೆಂಬುದನ್ನು ಜನರಿಗೆ ತೋರಿಸುತ್ತವೆ.


ಆಗ ಯೆಹೋವನು ಕೈಚಾಚಿ ನನ್ನ ಬಾಯನ್ನು ಮುಟ್ಟಿ, “ಯೆರೆಮೀಯನೇ, ಇಗೋ, ನಾನು ನನ್ನ ಮಾತುಗಳನ್ನು ನಿನ್ನ ಬಾಯಲ್ಲಿ ಇಡುತ್ತಿದ್ದೇನೆ.


ನಿಮ್ಮ ಕೆಲವು ಗಂಡುಮಕ್ಕಳನ್ನು ನಾನು ಪ್ರವಾದಿಗಳನ್ನಾಗಿ ಮಾಡಿದೆನು. ಇನ್ನು ಕೆಲವರನ್ನು ನಾಜೀರರನ್ನಾಗಿ ಮಾಡಿದೆನು. ಇಸ್ರೇಲ್ ಜನರೇ, ಇವು ಸತ್ಯವಾದ ಮಾತುಗಳು,” ಇವು ಯೆಹೋವನ ನುಡಿಗಳು.


ಯೆಹೋವನು ಬಿಳಾಮನಿಗೆ ಎದುರಾಗಿ ಬಂದು ಅವನು ಹೇಳಬೇಕಾದ ಮಾತನ್ನು ಕಲಿಸಿಕೊಟ್ಟು, “ನೀನು ಬಾಲಾಕನ ಬಳಿಗೆ ಮತ್ತೆ ಹೋಗಿ ಹೀಗೆ ಹೇಳಬೇಕು” ಅಂದನು.


ಆದರೆ ಎಫ್ರಾಯೀಮನು ಯೆಹೋವನನ್ನು ಅತಿಯಾಗಿ ಕೋಪಿಸಿಕೊಳ್ಳುವಂತೆ ಮಾಡಿದನು. ಎಫ್ರಾಯೀಮನು ಅನೇಕ ಮಂದಿಯನ್ನು ಕೊಲೆ ಮಾಡಿದನು. ಅವನ ಅಪರಾಧಗಳಿಗಾಗಿ ಅವನು ಶಿಕ್ಷಿಸಲ್ಪಡುವನು. ಅವನ ದೇವರಾದ ಯೆಹೋವನು ಅವನು ಮಾಡಿದ ಅಪರಾಧಕ್ಕೆ ತಕ್ಕ ದಂಡನೆಯನ್ನು ವಿಧಿಸಿ ಅವಮಾನ ಹೊರುವಂತೆ ಮಾಡುವನು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು