Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 18:20 - ಪರಿಶುದ್ದ ಬೈಬಲ್‌

20 “ಒಬ್ಬ ಪ್ರವಾದಿಯು ನಾನು ಹೇಳದ ಸಂಗತಿಯನ್ನು ನಿಮಗೆ ಹೇಳಿದರೂ ಹೇಳಬಹುದು. ದೇವರಿಂದ ಬಂದ ಸಂದೇಶವನ್ನು ನಿಮಗೆ ತಿಳಿಸುತ್ತಿರುವೆನು ಎಂದು ಅವನು ಹೇಳಬಹುದು. ಇಂಥಾ ಸಂದರ್ಭಗಳು ಬಂದಲ್ಲಿ ಆ ಪ್ರವಾದಿಯನ್ನು ಸಾಯಿಸಬೇಕು. ಇಷ್ಟು ಮಾತ್ರವಲ್ಲ ಇತರ ದೇವರುಗಳ ಸಂದೇಶವನ್ನು ಕೊಡುವ ಪ್ರವಾದಿಗಳೂ ಬರಬಹುದು. ಅವರನ್ನೂ ನೀವು ಸಾಯಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಆದರೆ ಯಾವ ಪ್ರವಾದಿ ನನ್ನಿಂದ ಅಧಿಕಾರಹೊಂದದೆ, ನಾನು ಪ್ರೇರಣೆಮಾಡದ ಮಾತುಗಳನ್ನು ಯೆಹೋವನ ಮಾತೆಂದು ಹೇಳಿ ಜನರಿಗೆ ತಿಳಿಸುವನೋ, ಇಲ್ಲವೆ ಇತರ ದೇವರುಗಳ ಹೆಸರಿನಲ್ಲಿ ಮಾತನಾಡುವನೋ ಅವನಿಗೆ ಮರಣಶಿಕ್ಷೆಯಾಗಬೇಕೆಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಆದರೆ ಯಾವ ಪ್ರವಾದಿ ನನ್ನಿಂದ ಅಧಿಕಾರ ಹೊಂದದೆ ನಾನು ಪ್ರೇರಣೆಮಾಡದ ಮಾತುಗಳನ್ನು ಸರ್ವೇಶ್ವರನ ಮಾತೆಂದು ಜನರಿಗೆ ತಿಳಿಸುವನೋ, ಇಲ್ಲವೆ ಇತರ ದೇವರುಗಳ ಹೆಸರಿನಲ್ಲಿ ಮಾತಾಡುವನೋ, ಅವನಿಗೆ ಮರಣಶಿಕ್ಷೆಯಾಗಬೇಕು,’ ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಆದರೆ ಯಾವ ಪ್ರವಾದಿ ನನ್ನಿಂದ ಅಧಿಕಾರಹೊಂದದೆ ನಾನು ಪ್ರೇರಣೆಮಾಡದ ಮಾತುಗಳನ್ನು ಯೆಹೋವನ ಮಾತೆಂದು ಹೇಳಿ ಜನರಿಗೆ ತಿಳಿಸುವನೋ ಇಲ್ಲವೆ ಇತರ ದೇವರುಗಳ ಹೆಸರಿನಲ್ಲಿ ಮಾತಾಡುವನೋ ಅವನಿಗೆ ಮರಣಶಿಕ್ಷೆಯಾಗಬೇಕೆಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಆದರೆ ನಾನು ಮಾತನಾಡಲು ಆಜ್ಞಾಪಿಸದೆ ಇರುವುದನ್ನು ನನ್ನ ಹೆಸರಿನಿಂದ ಮಾತನಾಡುವ ಪ್ರವಾದಿಯೂ, ಬೇರೆ ದೇವರುಗಳ ಹೆಸರಿನಿಂದ ಮಾತನಾಡುವ ಪ್ರವಾದಿಯೂ ಸಾಯಬೇಕು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 18:20
24 ತಿಳಿವುಗಳ ಹೋಲಿಕೆ  

ನಾನು ಆ ಪ್ರವಾದಿಗಳನ್ನು ಕಳುಹಿಸಿಲ್ಲ. ಅವರು ಸುಳ್ಳು ಪ್ರವಾದನೆಗಳನ್ನು ಮಾಡುತ್ತಿದ್ದಾರೆ ಮತ್ತು ಅದು ನನ್ನ ಸಂದೇಶವೆಂದು ಹೇಳುತ್ತಲಿದ್ದಾರೆ. ನಾನು ಯೆಹೂದದ ಜನರಾದ ನಿಮ್ಮನ್ನು ದೂರ ಕಳುಹಿಸುತ್ತೇನೆ. ನೀವು ಸಾಯುವಿರಿ. ನಿಮಗೆ ಪ್ರವಾದನೆಯನ್ನು ಮಾಡುತ್ತಿರುವ ಆ ಪ್ರವಾದಿಗಳು ಸಹ ಸಾಯುತ್ತಾರೆ’” ಇದು ಯೆಹೋವನ ನುಡಿ.


“ಸುಳ್ಳುಪ್ರವಾದಿಗಳ ಬಗ್ಗೆ ಎಚ್ಚರವಾಗಿರಿ. ಅವರು ಕುರಿಗಳ ಹಾಗೆ ಕಾಣಿಸಿಕೊಂಡು ನಿಮ್ಮ ಬಳಿಗೆ ಬರುತ್ತಾರೆ. ಆದರೆ ಅವರು ತೋಳಗಳಂತೆ ನಿಜವಾಗಿಯೂ ಅಪಾಯಕಾರಿಗಳಾಗಿದ್ದಾರೆ.


ಯಾವನಾದರೂ ಪ್ರವಾದಿಸುವದನ್ನು ಮಂದುವರಿಸಿದರೆ ಅವನು ಶಿಕ್ಷೆಗೆ ಗುರಿಯಾಗುವನು. ‘ನೀನು ಯೆಹೋವನ ಹೆಸರಿನಲ್ಲಿ ಸುಳ್ಳನ್ನು ಹೇಳಿರುವೆ. ಆದ್ದರಿಂದ ನೀನು ಸಾಯಲೇಬೇಕು’ ಎಂದು ಅವನ ಸ್ವಂತ ತಂದೆತಾಯಿಗಳು ಅವನಿಗೆ ಹೇಳುವರು. ಅವನ ಸ್ವಂತ ತಂದೆ ತಾಯಿಗಳು ಅವನು ಸುಳ್ಳು ಪ್ರವಾದನೆ ಹೇಳಿದ್ದಕ್ಕೆ ಅವನನ್ನು ಖಡ್ಗದಿಂದ ಕೊಲ್ಲಿಸುವರು.


“‘ಅವರನ್ನು ಯೆಹೋವನು ಕಳುಹಿಸಿಲ್ಲದಿದ್ದರೂ ಅವರು, “ಯೆಹೋವನು ಇದನ್ನು ಹೇಳಿದ್ದಾನೆ” ಎನ್ನುತ್ತಾರೆ. ಅವರು ಮಾಟಮಂತ್ರ ಮಾಡಿ ಇಂತಿಂಥದ್ದು ಸಂಭವಿಸುವುದು ಎಂದು ಸುಳ್ಳು ಹೇಳುತ್ತಾರೆ. ದೇವರು ನಮ್ಮನ್ನು ಕಳುಹಿಸಿದ್ದು ಎಂದು ಸುಳ್ಳು ಹೇಳುವರು. ಅವರು ತಮ್ಮ ಸುಳ್ಳು ನಿಜವಾಗುತ್ತಿರುವದನ್ನು ನೋಡಲು ಕಾಯುತ್ತಿದ್ದಾರೆ.


ನಾನು ಸುಳ್ಳುಪ್ರವಾದಿಗಳನ್ನು ವಿರೋಧಿಸುತ್ತೇನೆ.” ಇದು ಯೆಹೋವನ ನುಡಿ. “ಅವರು ತಮ್ಮ ಮಾತುಗಳನ್ನು ಹೇಳಿ ಅದು ನನ್ನ ಸಂದೇಶವೆಂಬುವಂತೆ ನಟನೆ ಮಾಡುತ್ತಾರೆ.


“‘ಯೆಹೋವನು ಎಲ್ಲಿ?’ ಎಂದು ಯಾಜಕರು ಕೇಳಲಿಲ್ಲ. ಧರ್ಮಶಾಸ್ತ್ರವನ್ನು ಬಲ್ಲವರು ನನ್ನನ್ನು ತಿಳಿಯಬಯಸಲಿಲ್ಲ. ಇಸ್ರೇಲರ ಜನನಾಯಕರು ನನ್ನ ವಿರೋಧಿಗಳಾದರು. ಪ್ರವಾದಿಗಳು ಸುಳ್ಳುದೇವರಾದ ಬಾಳನ ಹೆಸರಿನಿಂದ ಭವಿಷ್ಯವಾಣಿಯನ್ನು ನುಡಿದರು. ಅವರು ನಿಷ್ಪ್ರಯೋಜಕವಾದ ವಿಗ್ರಹಗಳನ್ನು ಪೂಜಿಸಿದರು.”


ಮಧ್ಯಾಹ್ನವಾದಾಗ ಎಲೀಯನು ಅವರನ್ನು ಅಪಹಾಸ್ಯ ಮಾಡಲಾರಂಭಿಸಿದನು. ಎಲೀಯನು, “ಬಾಳನು ನಿಜವಾದ ದೇವರಾಗಿದ್ದರೆ, ನೀವು ಮತ್ತಷ್ಟು ಗಟ್ಟಿಯಾಗಿ ಪ್ರಾರ್ಥಿಸಿ! ಬಹುಶಃ ಅವನು ಯೋಚನಾನಿರತನಾಗಿರಬಹುದು! ಅಥವಾ ಕಾರ್ಯನಿರತನಾಗಿರಬಹುದು! ಅಥವಾ ಸಂಚಾರನಿರತನಾಗಿರಬಹುದು! ಅಥವಾ ನಿದ್ರಾಮಗ್ನನಾಗಿರಬಹುದು! ನೀವು ಮತ್ತಷ್ಟು ಗಟ್ಟಿಯಾಗಿ ಪ್ರಾರ್ಥಿಸಿ, ಅವನನ್ನು ಎಚ್ಚರಗೊಳಿಸಿ!” ಎಂದು ಹೇಳಿದನು.


ಆದರೆ ಈ ಸುಳ್ಳುಬೋಧಕರು ತಮಗೆ ಅರ್ಥವಾಗದ ಸಂಗತಿಗಳ ವಿರುದ್ಧ ಕೆಟ್ಟದ್ದನ್ನು ಮಾತಾಡುತ್ತಾರೆ. ಅವರು ವಿವೇಚಿಸದೆ ಕಾರ್ಯ ಮಾಡುವ ಪ್ರಾಣಿಗಳಂತಿದ್ದಾರೆ. ಹಿಡಿಯಲ್ಪಟ್ಟು ಕೊಲ್ಲಲ್ಪಡುವುದಕ್ಕಾಗಿಯೇ ಹುಟ್ಟಿರುವ ಕ್ರೂರಪ್ರಾಣಿಗಳಂತೆ ಅವರು ನಾಶವಾಗುವರು.


ಆಗ ಎಲೀಯನು, “ಬಾಳನ ಪ್ರವಾದಿಗಳನ್ನು ಹಿಡಿದು ತನ್ನಿ! ಅವರಲ್ಲಿ ಒಬ್ಬರಾದರೂ ತಪ್ಪಿಸಿಕೊಳ್ಳದಂತೆ ನೋಡಿಕೊಳ್ಳಿ!” ಎಂದು ಹೇಳಿದನು. ಪ್ರವಾದಿಗಳನ್ನೆಲ್ಲ ಜನರು ಹಿಡಿದುಕೊಂಡರು. ಎಲೀಯನು ಅವರನ್ನೆಲ್ಲಾ ಕೀಷೋನ್ ಬುಗ್ಗೆಗೆ ಎಳೆದುಕೊಂಡು ಹೋಗಿ ಕೊಂದು ಹಾಕಿದನು.


ಆದರೆ ಆ ಮೃಗವನ್ನೂ ಸುಳ್ಳುಪ್ರವಾದಿಯನ್ನೂ ಸೆರೆಹಿಡಿಯಲಾಯಿತು. ಈ ಸುಳ್ಳುಪ್ರವಾದಿಯೇ ಮೃಗಕ್ಕಾಗಿ ಅದ್ಭುತಗಳನ್ನು ಮಾಡಿದವನು. ಈ ಸುಳ್ಳುಪ್ರವಾದಿಯು ಮೃಗದ ಗುರುತು ಹಾಕಿಸಿಕೊಂಡಿರುವ ಮತ್ತು ಅದರ ವಿಗ್ರಹವನ್ನು ಆರಾಧಿಸಿದ ಜನರನ್ನು ಮರುಳು ಮಾಡಲು ಈ ಅದ್ಭುತಗಳನ್ನು ಬಳಸಿದ್ದನು. ಈ ಸುಳ್ಳುಪ್ರವಾದಿಯನ್ನೂ ಮೃಗವನ್ನೂ, ಬೆಂಕಿ ಮತ್ತು ಗಂಧಕಗಳಿಂದ ಉರಿಯುವ ಕೆರೆಯಲ್ಲಿ ಜೀವಂತವಾಗಿ ಎಸೆಯಲಾಯಿತು.


ಈಗ ಕರ್ಮೆಲ್ ಬೆಟ್ಟದ ಮೇಲೆ ನನ್ನನ್ನು ಭೇಟಿಮಾಡಲು ಎಲ್ಲಾ ಇಸ್ರೇಲರಿಗೆ ತಿಳಿಸು. ಬಾಳನ ನಾನೂರೈವತ್ತು ಮಂದಿ ಪ್ರವಾದಿಗಳನ್ನು ಆ ಸ್ಥಳಕ್ಕೆ ಕರೆದುಕೊಂಡು ಬಾ. ಸುಳ್ಳುದೇವತೆಯಾದ ಅಶೇರಳ ನಾನೂರು ಮಂದಿ ಪ್ರವಾದಿಗಳನ್ನೂ ಕರೆದುಕೊಂಡು ಬಾ. ಆ ಪ್ರವಾದಿಗಳನ್ನು ರಾಣಿಯಾದ ಈಜೆಬೆಲಳು ಪೋಷಣೆ ಮಾಡುತ್ತಿದ್ದಾಳೆ” ಎಂದು ಹೇಳಿದನು.


“ನಿಮ್ಮ ದೇವರಾದ ಯೆಹೋವನ ಸೇವೆಮಾಡುತ್ತಿರುವ ಯಾಜಕನಾಗಲಿ ನ್ಯಾಯಾಧೀಶನಾಗಲಿ ಹೇಳಿದ ತೀರ್ಪನ್ನು ಉಲ್ಲಂಘಿಸಿದವನಿಗೆ ಮರಣದಂಡನೆ ಆಗಬೇಕು. ನೀವು ಆ ದುಷ್ಟನನ್ನು ಇಸ್ರೇಲಿನಿಂದ ನಿರ್ಮೂಲ ಮಾಡಬೇಕು.


‘ಆ ಪ್ರವಾದಿಯು ಹೇಳಿದ್ದು ದೇವರ ಮಾತಲ್ಲವೆಂದು ತಿಳಿದುಕೊಳ್ಳುವುದು ಹೇಗೆ?’ ಎಂದು ನೀವು ಅಂದುಕೊಳ್ಳಬಹುದು.


ಒಬ್ಬ ಪ್ರವಾದಿಯು ತಾನು ಯೆಹೋವನಿಂದ ಕಳುಹಿಸಲ್ಪಟ್ಟವನು ಎಂದು ಹೇಳಿಕೊಂಡರೆ ಮತ್ತು ಅವನು ಹೇಳಿದ ಮಾತುಗಳು ನೆರವೇರದೆ ಹೋದರೆ ಆಗ ಆ ವಿಷಯಗಳನ್ನು ಯೆಹೋವನು ಹೇಳಲಿಲ್ಲವೆಂದು ನಿಮಗೆ ಗೊತ್ತಾಗುವುದು. ಆ ಪ್ರವಾದಿಯು ತನ್ನದೆ ಆದ ಆಲೋಚನೆಯನ್ನು ನಿಮಗೆ ಹೇಳುತ್ತಿದ್ದಾನೆಂದು ನಿಮಗೆ ತಿಳಿಯುವುದು. ನೀವು ಅವನಿಗೆ ಭಯಪಡಬೇಡಿರಿ.


“ನಾನು ಸುಳ್ಳುಪ್ರವಾದಿಗಳ ವಿರೋಧಿಯಾಗಿದ್ದೇನೆ.” ಇದು ಯೆಹೋವನ ನುಡಿ. “ಈ ಪ್ರವಾದಿಗಳು ನನ್ನ ಪದಗಳನ್ನು ಒಬ್ಬರಿಂದೊಬ್ಬರು ಕದಿಯುತ್ತಿದ್ದಾರೆ.


ಆಗ ಯಾಜಕರು ಮತ್ತು ಪ್ರವಾದಿಗಳು ಅಧಿಪತಿಗಳಿಗೂ ಇನ್ನುಳಿದ ಜನರಿಗೂ ಹೀಗೆ ಹೇಳಿದರು: “ಯೆರೆಮೀಯನನ್ನು ಕೊಲ್ಲಬೇಕು. ಅವನು ಜೆರುಸಲೇಮಿನ ಬಗ್ಗೆ ಕೆಟ್ಟ ಮಾತುಗಳನ್ನಾಡಿದ್ದಾನೆ. ಅವನು ಆಡಿದ ಆ ಮಾತುಗಳನ್ನು ನೀವೇ ಕೇಳಿದ್ದೀರಿ.”


“ನಿಮ್ಮ ಹತ್ತಿರದ ಸಂಬಂಧಿಕರಲ್ಲಿ ಯಾರಾದರೂ ಇತರ ದೇವರುಗಳನ್ನು ಅನುಸರಿಸಲು ನಿಮ್ಮನ್ನು ಗುಪ್ತವಾಗಿ ಒತ್ತಾಯ ಮಾಡಬಹುದು. ಅವರು ನಿಮ್ಮ ಸ್ವಂತ ಸಹೋದರನಾಗಿರಬಹುದು, ನಿಮ್ಮ ಮಕ್ಕಳಾಗಿರಬಹುದು, ನಿಮ್ಮ ಹೆಂಡತಿಯಾಗಿರಬಹುದು, ಅಥವಾ ಆಪ್ತಗೆಳೆಯನಾಗಿರಬಹುದು. ಅವರು ಬಂದು, ‘ಬಾ, ನಾವು ಬೇರೆ ದೇವರನ್ನು ಹಿಂಬಾಲಿಸೋಣ’ (ಈ ದೇವರನ್ನು ನೀವಾಗಲಿ ನಿಮ್ಮ ಪೂರ್ವಿಕರಾಗಲಿ ತಿಳಿದಿರಲಿಲ್ಲ.


ಇಸ್ರೇಲರು ಯುದ್ಧಕ್ಕೆ ಹೋದಾಗಲೆಲ್ಲಾ ಸೋಲನ್ನನುಭವಿಸಿದರು; ಏಕೆಂದರೆ ಯೆಹೋವನು ಅವರ ಸಂಗಡವಿರಲಿಲ್ಲ. ಸುತ್ತಮುತ್ತಲಿನ ಜನರ ದೇವತೆಗಳನ್ನು ಪೂಜಿಸಿದರೆ ಸೋಲಾಗುವುದೆಂದು ಈಗಾಗಲೇ ಯೆಹೋವನು ಇಸ್ರೇಲರಿಗೆ ಮುನ್ನೆಚ್ಚರಿಕೆಯನ್ನು ಕೊಟ್ಟಿದ್ದನು. ಇಸ್ರೇಲರು ಹೆಚ್ಚಿನ ಕಷ್ಟನಷ್ಟಗಳನ್ನು ಅನುಭವಿಸಿದರು.


ಆದ್ದರಿಂದ ಆ ಪ್ರವಾದಿಯ ಮನೆಗೆ ದೇವಮನುಷ್ಯನು ಹೋಗಿ, ಅವನ ಸಂಗಡ ಅನ್ನಪಾನಗಳನ್ನು ತೆಗೆದುಕೊಂಡನು.


ಸರ್ವಶಕ್ತನಾದ ಯೆಹೋವನು ಹೇಳುವುದೇನೆಂದರೆ, “ಆ ಸಮಯದಲ್ಲಿ ಈ ಪ್ರಪಂಚದಲ್ಲಿರುವ ವಿಗ್ರಹಗಳನ್ನೆಲ್ಲಾ ನಾನು ತೆಗೆದುಬಿಡುವೆನು. ಜನರು ಅವುಗಳ ಹೆಸರನ್ನು ತಮ್ಮ ನೆನಪಿಗೆ ತಾರರು. ಸುಳ್ಳು ಪ್ರವಾದಿಗಳನ್ನೂ ಅಶುದ್ಧ ಆತ್ಮಗಳನ್ನೂ ನಾನು ಭೂಮಿಯ ಮೇಲಿಂದ ತೆಗೆದುಬಿಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು