ಧರ್ಮೋಪದೇಶಕಾಂಡ 18:22 - ಪರಿಶುದ್ದ ಬೈಬಲ್22 ಒಬ್ಬ ಪ್ರವಾದಿಯು ತಾನು ಯೆಹೋವನಿಂದ ಕಳುಹಿಸಲ್ಪಟ್ಟವನು ಎಂದು ಹೇಳಿಕೊಂಡರೆ ಮತ್ತು ಅವನು ಹೇಳಿದ ಮಾತುಗಳು ನೆರವೇರದೆ ಹೋದರೆ ಆಗ ಆ ವಿಷಯಗಳನ್ನು ಯೆಹೋವನು ಹೇಳಲಿಲ್ಲವೆಂದು ನಿಮಗೆ ಗೊತ್ತಾಗುವುದು. ಆ ಪ್ರವಾದಿಯು ತನ್ನದೆ ಆದ ಆಲೋಚನೆಯನ್ನು ನಿಮಗೆ ಹೇಳುತ್ತಿದ್ದಾನೆಂದು ನಿಮಗೆ ತಿಳಿಯುವುದು. ನೀವು ಅವನಿಗೆ ಭಯಪಡಬೇಡಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಪ್ರವಾದಿಯು ‘ಇದು ಯೆಹೋವನ ನುಡಿ’ ಎಂದು ಹೇಳಿ, ಆತನು ತಿಳಿಸಿದ ಸಂಗತಿಯೂ ನಡೆಯದೆ ಹೋದರೆ, ಅವನ ಮಾತು ಯೆಹೋವನದಲ್ಲವೆಂದು ನೀವು ತಿಳಿದುಕೊಳ್ಳಬೇಕು. ಅವನು ನನ್ನ ಅಪ್ಪಣೆ ಇಲ್ಲದೆ ಮಾತನಾಡಿದವನು ಮತ್ತು ನೀವು ಅವನಿಗೆ ಹೆದರಬಾರದು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಪ್ರವಾದಿ ಸರ್ವೇಶ್ವರನ ಮಾತೆಂದು ಹೇಳಿ, ಮುಂತಿಳಿಸಿದ ಸಂಗತಿ ನಡೆಯದೆ ಹೋದರೆ, ಅವನ ಮಾತು ಸರ್ವೇಶ್ವರನದಲ್ಲವೆಂದು ನೀವು ತಿಳಿದುಕೊಳ್ಳಬೇಕು. ಅವನು ಅಧಿಕಾರವಿಲ್ಲದೆ ಮಾತಾಡಿದವನು; ಅವನಿಗೆ ಹೆದರಬಾರದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಪ್ರವಾದಿಯು ಯೆಹೋವನ ಮಾತೆಂದು ಹೇಳಿ ಮುಂತಿಳಿಸಿದ ಸಂಗತಿ ನಡೆಯದೆ ಹೋದರೆ ಅವನ ಮಾತು ಯೆಹೋವನದಲ್ಲವೆಂದು ನೀವು ತಿಳಿದುಕೊಳ್ಳಬೇಕು. ಅವನು ಅಧಿಕಾರವಿಲ್ಲದೆ ಮಾತಾಡಿದವನು; ಅವನಿಗೆ ಹೆದರಬಾರದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ಒಬ್ಬ ಪ್ರವಾದಿಯು ಯೆಹೋವ ದೇವರ ಹೆಸರಿನಲ್ಲಿ ಮುಂತಿಳಿಸಿದ ಮಾತು ಸಂಭವಿಸದೆ ಹೋದರೆ ಅಥವಾ ನಿಜವಾಗದಿದ್ದರೆ, ಅದು ಯೆಹೋವ ದೇವರ ಮಾತು ಅಲ್ಲವೆಂದು ನೀವು ತಿಳಿದುಕೊಳ್ಳಬೇಕು. ಆ ಪ್ರವಾದಿಯು ಅಹಂಕಾರದಿಂದ ಅದನ್ನು ಮಾತನಾಡಿದ್ದರೆ, ಆದ್ದರಿಂದ ನೀವು ಅವನಿಗೆ ಭಯಪಡಬಾರದು. ಅಧ್ಯಾಯವನ್ನು ನೋಡಿ |
ಯೋನನು ಯೆಹೋವನಿಗೆ ದೂರು ಹೇಳುತ್ತಾ, “ಇದು ಹೀಗಾಗುತ್ತದೆಯೆಂದು ನನಗೆ ಗೊತ್ತಿತ್ತು. ನಾನು ನನ್ನ ದೇಶದಲ್ಲಿದ್ದೆ. ಇಲ್ಲಿಗೆ ಬರಲು ನನಗೆ ಹೇಳಿದವನು ನೀನೇ. ಈ ದುಷ್ಟಪಟ್ಟಣದ ಜನರನ್ನು ನೀನು ಕ್ಷಮಿಸುತ್ತೀ ಎಂದು ನನಗೆ ಆಗಲೇ ಗೊತ್ತಿತ್ತು. ಆದ್ದರಿಂದ ನಾನು ತಾರ್ಷೀಷಿಗೆ ಓಡಿಹೋಗಲು ನಿರ್ಧರಿಸಿದೆನು. ನೀನು ದಯಾಪರನಾದ, ಕೃಪಾಪೂರ್ಣನಾದ, ಕೋಪಗೊಳ್ಳುವುದರಲ್ಲಿ ನಿಧಾನವಾದ ಮತ್ತು ಮಹಾಕನಿಕರವುಳ್ಳ ದೇವರೆಂದು ನನಗೆ ಗೊತ್ತಿತ್ತು. ಆ ಜನರು ಪಾಪ ಮಾಡುವದನ್ನು ನಿಲ್ಲಿಸಿದರೆ, ನೀನು ನಿನ್ನ ಯೋಜನೆಯಂತೆ ಅವರನ್ನು ನಾಶಮಾಡುವುದಿಲ್ಲ ಎಂದು ನನಗೆ ಗೊತ್ತಿತ್ತು.