ಧರ್ಮೋಪದೇಶಕಾಂಡ 18:6 - ಪರಿಶುದ್ದ ಬೈಬಲ್6 “ಪ್ರತಿಯೊಬ್ಬ ಲೇವಿಯನಿಗೂ ದೇವಾಲಯದಲ್ಲಿ ಸೇವೆಮಾಡಲು ಒಂದು ನಿರ್ಧಿಷ್ಟ ಸಮಯವನ್ನು ಗೊತ್ತುಪಡಿಸಲಾಗಿದೆ. ಆದರೆ ಬೇರೆ ಸಮಯದಲ್ಲಿಯೂ ಸಹ ಅವನು ಅಲ್ಲಿ ಸೇವೆಮಾಡಲು ಇಷ್ಟಪಟ್ಟರೆ, ಅವನು ತನಗೆ ಇಷ್ಟಬಂದ ಸಮಯದಲ್ಲಿ ಸೇವೆ ಮಾಡಬಹುದು. ಇಸ್ರೇಲಿನ ಯಾವದೇ ಭಾಗದಲ್ಲಿರುವ ಯಾವುದೇ ಊರಿನಲ್ಲಿರುವ ಲೇವಿಯನು ತನ್ನ ಸ್ವಂತ ಸ್ಥಳವನ್ನು ಬಿಟ್ಟು ಯೆಹೋವನ ವಿಶೇಷ ಸ್ಥಳಕ್ಕೆ ಬರಬಹುದು. ಅವನು ತನಗೆ ಇಷ್ಟಬಂದ ಯಾವುದೇ ಸಮಯದಲ್ಲಿ ಬೇಕಾದರೂ ಹೀಗೆ ಮಾಡಬಹುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಇಸ್ರಾಯೇಲರ ಯಾವುದಾದರೂ ಒಂದು ಊರಲ್ಲಿ ಇಳಿದುಕೊಂಡಿರುವ ಲೇವಿಯನು ಸ್ವಂತ ಮನಸ್ಸಿನಿಂದ ಆ ಊರನ್ನು ಬಿಟ್ಟು, ಯೆಹೋವನು ಆರಿಸಿಕೊಂಡ ಪವಿತ್ರ ಸ್ಥಳಕ್ಕೆ ಬಂದು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 “ಇಸ್ರಯೇಲರ ಯಾವುದಾದರೊಂದು ಊರಲ್ಲಿ ಇಳಿದುಕೊಂಡಿದ್ದ ಒಬ್ಬ ಲೇವಿಯನು ಸ್ವಂತ ಮನಸ್ಸಿನಿಂದ ಆ ಊರನ್ನು ಬಿಟ್ಟು ಸರ್ವೇಶ್ವರ ಆರಿಸಿಕೊಂಡ ಸ್ಥಳಕ್ಕೆ ಬರಬಹುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಇಸ್ರಾಯೇಲ್ಯರ ಯಾವದಾದರೂ ಒಂದು ಊರಲ್ಲಿ ಇಳಿದುಕೊಂಡಿರುವ ಲೇವಿಯನು ಸ್ವಂತ ಮನಸ್ಸಿನಿಂದ ಆ ಊರನ್ನು ಬಿಟ್ಟು ಯೆಹೋವನು ಆದುಕೊಂಡ ಸ್ಥಳಕ್ಕೆ ಬಂದು ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಒಬ್ಬ ಲೇವಿಯು ಸಮಸ್ತ ಇಸ್ರಾಯೇಲಿನಲ್ಲಿರುವ ಯಾವುದೇ ಊರಿನಲ್ಲಿ ಇಳಿದುಕೊಂಡಿರುವ ಸ್ಥಳದಿಂದ ತನ್ನ ಮನಸ್ಸಿನ ಪೂರ್ಣಾಪೇಕ್ಷೆಯೊಂದಿಗೆ ಯೆಹೋವ ದೇವರು ಆಯ್ದುಕೊಳ್ಳುವ ಸ್ಥಳಕ್ಕೆ ಬರಬಹುದು. ಅಧ್ಯಾಯವನ್ನು ನೋಡಿ |
ನೀವು ಜವಾಬ್ದಾರಿ ವಹಿಸಿಕೊಂಡಿರುವ ಸಭೆಯನ್ನು ಪರಿಪಾಲಿಸಬೇಕೆಂದು ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ. ಅವರು ದೇವರ ಮಂದೆ. ನೀವು ಆ ಮಂದೆಯನ್ನು ಕಾಯಿರಿ, ಏಕೆಂದರೆ ಅದು ನಿಮ್ಮ ಬಯಕೆಯಾಗಿದೆ; ಅದು ಬಲವಂತದಿಂದ ಹೊರಿಸಿದ ಹೊರೆಯಲ್ಲ. ದೇವರು ಅದನ್ನೇ ಇಷ್ಟಪಡುತ್ತಾನೆ. ನೀವು ಆ ಮಂದೆಯನ್ನು ಕಾಯುವುದು ಹಣದ ನಿಮಿತ್ತವಲ್ಲ, ದೇವರ ಸೇವೆ ಮಾಡಲು ನಿಮಗಿರುವ ಸಂತಸದ ನಿಮಿತ್ತವಾಗಿಯೇ.
ಪಟ್ಟಣದ ಹೊರಗೆ ಪ್ರತಿಯೊಂದು ದಿಕ್ಕಿನಲ್ಲಿ ಎರಡು ಸಾವಿರ ಮೊಳಗಳನ್ನು ಅಳೆದು ಪಟ್ಟಣಕ್ಕೆ ಗಡಿಯನ್ನು ಗೊತ್ತುಪಡಿಸಬೇಕು; ಪೂರ್ವದಿಕ್ಕಿನಲ್ಲಿ ಎರಡು ಸಾವಿರ ಮೊಳಗಳು; ದಕ್ಷಿಣದಿಕ್ಕಿನಲ್ಲಿ ಎರಡು ಸಾವಿರ ಮೊಳಗಳು; ಪಶ್ಚಿಮದಿಕ್ಕಿನಲ್ಲಿ ಎರಡು ಸಾವಿರ ಮೊಳಗಳು ಮತ್ತು ಉತ್ತರದಿಕ್ಕಿನಲ್ಲಿ ಎರಡು ಸಾವಿರ ಮೊಳಗಳು. ಇವುಗಳ ಮಧ್ಯದಲ್ಲಿ ಪಟ್ಟಣವಿರಬೇಕು. ಅದು ಅವರ ಪಟ್ಟಣಗಳಿಗೆ ಹುಲ್ಲುಗಾವಲುಗಳಾಗಿರುವುದು.