“ಪ್ರತಿಯೊಬ್ಬ ಲೇವಿಯನಿಗೂ ದೇವಾಲಯದಲ್ಲಿ ಸೇವೆಮಾಡಲು ಒಂದು ನಿರ್ಧಿಷ್ಟ ಸಮಯವನ್ನು ಗೊತ್ತುಪಡಿಸಲಾಗಿದೆ. ಆದರೆ ಬೇರೆ ಸಮಯದಲ್ಲಿಯೂ ಸಹ ಅವನು ಅಲ್ಲಿ ಸೇವೆಮಾಡಲು ಇಷ್ಟಪಟ್ಟರೆ, ಅವನು ತನಗೆ ಇಷ್ಟಬಂದ ಸಮಯದಲ್ಲಿ ಸೇವೆ ಮಾಡಬಹುದು. ಇಸ್ರೇಲಿನ ಯಾವದೇ ಭಾಗದಲ್ಲಿರುವ ಯಾವುದೇ ಊರಿನಲ್ಲಿರುವ ಲೇವಿಯನು ತನ್ನ ಸ್ವಂತ ಸ್ಥಳವನ್ನು ಬಿಟ್ಟು ಯೆಹೋವನ ವಿಶೇಷ ಸ್ಥಳಕ್ಕೆ ಬರಬಹುದು. ಅವನು ತನಗೆ ಇಷ್ಟಬಂದ ಯಾವುದೇ ಸಮಯದಲ್ಲಿ ಬೇಕಾದರೂ ಹೀಗೆ ಮಾಡಬಹುದು.
ಹೀಗೆ ಲೇವಿಯರು ತಾವು ಮಾಡಬೇಕಾದ ಕೆಲಸಗಳನ್ನೆಲ್ಲಾ ಮಾಡಿದರು. ಅವರು ಪವಿತ್ರ ಗುಡಾರವನ್ನು ಮತ್ತು ಪವಿತ್ರಸ್ಥಳವನ್ನು ನೋಡಿಕೊಂಡರು; ತಮ್ಮ ಸಂಬಂಧಿಕರೂ ಆರೋನನ ಕುಲದವರೂ ಆಗಿದ್ದ ಯಾಜಕರಿಗೆ ಸಹಾಯ ಮಾಡಿದರು.