ಧರ್ಮೋಪದೇಶಕಾಂಡ 19:1 - ಪರಿಶುದ್ದ ಬೈಬಲ್1 “ಬೇರೆ ಜನಾಂಗಗಳು ವಾಸಿಸುವ ದೇಶವನ್ನು ನಿಮ್ಮ ದೇವರು ನಿಮಗೆ ಕೊಡುತ್ತಿದ್ದಾನೆ. ಆ ಜನಾಂಗಗಳನ್ನು ಆತನು ನಾಶಮಾಡುತ್ತಾನೆ. ಅವರು ವಾಸಿಸುತ್ತಿದ್ದ ಸ್ಥಳಗಳಲ್ಲಿ ನೀವು ವಾಸಿಸುವಿರಿ. ಅವರ ಮನೆಗಳನ್ನೂ ಪಟ್ಟಣಗಳನ್ನೂ ನೀವು ವಶಪಡಿಸಿಕೊಳ್ಳುವಿರಿ. ಅಂಥಾ ಸಮಯದಲ್ಲಿ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ದೇಶದ ಜನಾಂಗಗಳನ್ನು ಆತನು ನಾಶಮಾಡಿ ಬಿಟ್ಟ ತರುವಾಯ, ನೀವು ಆ ದೇಶವನ್ನು ಸ್ವಾಧೀನಮಾಡಿಕೊಂಡು ಅವರ ಗ್ರಾಮಗಳಲ್ಲಿಯೂ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 “ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಕೊಡುವ ನಾಡಿನಲ್ಲಿರುವ ಜನಾಂಗಗಳನ್ನು ಅಲ್ಲಿಂದ ತೆಗೆದುಹಾಕಿಬಿಡುವರು. ತರುವಾಯ ನೀವು ಆ ನಾಡನ್ನು ಸ್ವಾಧೀನಕ್ಕೆ ತೆಗೆದುಕೊಳ್ಳುವಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ದೇಶದಲ್ಲಿರುವ ಜನಾಂಗಗಳನ್ನು ಆತನು ತೆಗೆದುಹಾಕಿಬಿಟ್ಟ ತರುವಾಯ ನೀವು ಆ ದೇಶವನ್ನು ಸ್ವಾಧೀನಕ್ಕೆ ತೆಗೆದುಕೊಂಡು ಅವರ ಗ್ರಾಮಗಳಲ್ಲಿಯೂ ಮನೆಗಳಲ್ಲಿಯೂ ವಾಸವಾಗಿರುವಾಗ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಕೊಡುವ ದೇಶದ ಜನಾಂಗಗಳನ್ನು ದೇವರು ತೆಗೆದುಹಾಕಿದ ತರುವಾಯ, ನೀವು ದೇಶವನ್ನು ಸ್ವಾಧೀನಮಾಡಿಕೊಂಡು ಅದರ ಪಟ್ಟಣಗಳಲ್ಲಿಯೂ ಮನೆಗಳಲ್ಲಿಯೂ ವಾಸಮಾಡುವಿರಿ. ಅಧ್ಯಾಯವನ್ನು ನೋಡಿ |
“‘ಯೆಹೋವನಾದ ನಾನು ನಿಮಗೆ ಆ ದೇಶವನ್ನು ಕೊಟ್ಟಿದ್ದೇನೆ. ನೀವು ಆ ದೇಶಕ್ಕಾಗಿ ಏನನ್ನೂ ಮಾಡಿಲ್ಲ. ನಿಮಗೆ ಅದನ್ನು ಕೊಟ್ಟವನು ನಾನೇ. ನೀವು ಆ ನಗರಗಳನ್ನು ಕಟ್ಟಲೇ ಇಲ್ಲ. ಅವುಗಳನ್ನು ನಿಮಗೆ ಕೊಟ್ಟವನು ನಾನೇ. ಈಗ ನೀವು ಆ ಪ್ರದೇಶದಲ್ಲಿ ಮತ್ತು ಆ ನಗರಗಳಲ್ಲಿ ವಾಸಮಾಡುತ್ತಿದ್ದೀರಿ. ನೀವು ದ್ರಾಕ್ಷಿ ಮತ್ತು ಆಲಿವ್ ಮರದ ತೋಟಗಳನ್ನು ಹೊಂದಿರುವಿರಿ. ಆದರೆ ಆ ತೋಟಗಳನ್ನು ನೀವು ಬೆಳೆಸಲಿಲ್ಲ.’”