ಧರ್ಮೋಪದೇಶಕಾಂಡ 19:10 - ಪರಿಶುದ್ದ ಬೈಬಲ್10 ಆಗ ಯೆಹೋವನು ನಿಮಗೆ ಕೊಡಲಿರುವ ದೇಶದಲ್ಲಿ ಅಂಥ ನಿರಪರಾಧಿಗಳು ಕೊಲ್ಲಲ್ಪಡುವುದಿಲ್ಲ; ನೀವು ಯಾವ ಮರಣದ ವಿಷಯದಲ್ಲಿಯೂ ದೋಷಿಗಳಾಗಿರುವುದಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ನಿಮ್ಮ ದೇವರಾದ ಯೆಹೋವನು ನಿಮಗೆ ಸ್ವದೇಶವಾಗುವುದಕ್ಕೆ ಕೊಡುವ ದೇಶದಲ್ಲಿ ನಿರಪರಾಧಿಗೆ ಮರಣಶಿಕ್ಷೆಯಾಗದಂತೆ; ಆ ದೋಷವು ನಿಮ್ಮದಾಗದಂತೆ ನೀವು ಹೀಗೆ ಮಾಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಸ್ವದೇಶವಾಗಲೆಂದು ಕೊಡುವ ನಾಡಿನಲ್ಲಿ ನಿರಪರಾಧಿಗೆ ಮರಣ ಶಿಕ್ಷೆಯಾಗಬಾರದು; ಅಂಥವನಿಗೆ ಮರಣಶಿಕ್ಷೆ ಆದರೆ ಆ ರಕ್ತದೋಷ ನಿಮ್ಮದಾಗಿಯೇ ಇರುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ನಿಮ್ಮ ದೇವರಾದ ಯೆಹೋವನು ನಿಮಗೆ ಸ್ವದೇಶವಾಗುವದಕ್ಕೆ ಕೊಡುವ ದೇಶದಲ್ಲಿ ನಿರಪರಾಧಿಗೆ ಮರಣಶಿಕ್ಷೆಯಾಗಬಾರದು; ಅಂಥವನಿಗೆ ಮರಣಶಿಕ್ಷೆಯಾದರೆ ಆ ದೋಷವು ನಿಮ್ಮದಾಗಿಯೇ ಇರುವದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಸೊತ್ತಾಗಿ ಕೊಡುವ ದೇಶದಲ್ಲಿ ನಿರಪರಾಧಿಗೆ ಮರಣಶಿಕ್ಷೆಯಾಗಬಾರದು, ಅಂಥವನಿಗೆ ಮರಣಶಿಕ್ಷೆಯಾದರೆ ಆ ರಕ್ತಾಪರಾಧ ನಿಮ್ಮದಾಗಿಯೇ ಇರುವುದು. ಅಧ್ಯಾಯವನ್ನು ನೋಡಿ |
ಆಗ ಆ ಜನರು ಯೆಹೋವನಿಗೆ, “ಯೆಹೋವನೇ, ಈ ಮನುಷ್ಯನು ಕೆಟ್ಟಕಾರ್ಯ ಮಾಡಿದ್ದರಿಂದ ನಾವು ಇವನನ್ನು ಸಮುದ್ರಕ್ಕೆ ಬಿಸಾಡುತ್ತೇವೆ. ನಾವು ಒಬ್ಬ ನಿರಪರಾಧಿಯನ್ನು ಕೊಂದೆವು ಎಂಬ ಅಪರಾಧವನ್ನು ನಮ್ಮ ಮೇಲೆ ಹೊರಿಸಬೇಡ. ಅವನನ್ನು ಕೊಂದದ್ದಕ್ಕಾಗಿ ನಮ್ಮನ್ನು ಕೊಲ್ಲಬೇಡ. ನೀನು ಯೆಹೋವನೆಂದು ನಮಗೆ ಗೊತ್ತಿದೆ. ನಿನಗೆ ಇಷ್ಟಬಂದದ್ದನ್ನು ನೀನು ನೆರವೇರಿಸುವೆ. ಆದ್ದರಿಂದ ದಯವಿಟ್ಟು ನಮಗೆ ಕರುಣೆ ತೋರಿಸು” ಅಂದರು.