Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 19:12 - ಪರಿಶುದ್ದ ಬೈಬಲ್‌

12 ಅವನ ಊರಿನ ಹಿರಿಯರು ಅವನನ್ನು ಆ ಆಶ್ರಯನಗರದೊಳಗಿಂದ ಹಿಡಿದುತಂದು ಕೊಲೆ ಮಾಡಲ್ಪಟ್ಟವನ ಸಮೀಪ ಬಂಧುವಿಗೆ ಒಪ್ಪಿಸಬೇಕು, ಕೊಲೆಗಾರನು ಸಾಯಲೇಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಒಂದಕ್ಕೆ ಓಡಿಹೋದರೆ, ಅವನ ಊರಿನ ಹಿರಿಯರು ಅವನನ್ನು ಅಲ್ಲಿಂದ ಹಿಡಿದು ತರಿಸಿ ಅವನಿಗೆ ಮರಣಶಿಕ್ಷೆಯಾಗುವಂತೆ ಮುಯ್ಯಿತೀರಿಸುವ ಹಂಗುಳ್ಳವನ ಕೈಗೆ ಒಪ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಆ ಊರಿನ ಹಿರಿಯರು ಅವನನ್ನು ಅಲ್ಲಿಂದ ಹಿಡಿದು ತರಿಸಿ ಅವನಿಗೆ ಮರಣಶಿಕ್ಷೆಯಾಗುವಂತೆ ಮುಯ್ಯಿತೀರಿಸುವ ಹಂಗುಳ್ಳವನ ಕೈಗೆ ಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಅವನ ಊರಿನ ಹಿರಿಯರು ಅವನನ್ನು ಅಲ್ಲಿಂದ ಹಿಡತರಿಸಿ ಅವನಿಗೆ ಮರಣಶಿಕ್ಷೆಯಾಗುವಂತೆ ಮುಯ್ಯಿತೀರಿಸುವ ಹಂಗುಳ್ಳವನ ಕೈಗೆ ಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಆ ಪಟ್ಟಣದ ಹಿರಿಯರು ಅವನನ್ನು ಅಲ್ಲಿಂದ ಹಿಡಿದು ತರಿಸಿ, ಅವನಿಗೆ ಮರಣದಂಡನೆಯಾಗುವಂತೆ ಸೇಡು ತೀರಿಸಿಕೊಳ್ಳುವವನ ಕೈಗೆ ಅವನನ್ನು ಒಪ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 19:12
8 ತಿಳಿವುಗಳ ಹೋಲಿಕೆ  

ಆದರೆ ಒಬ್ಬನು ಕೋಪದಿಂದಾಗಲಿ ದ್ವೇಷದಿಂದಾಗಲಿ ಇನ್ನೊಬ್ಬನನ್ನು ಕೊಂದರೆ, ಆ ಕೊಲೆಗಾರನಿಗೆ ದಂಡನೆಯಾಗಬೇಕು. ನನ್ನ ಯಜ್ಞವೇದಿಕೆಯಿಂದ ಅವನನ್ನು ದೂರಕ್ಕೆ ತೆಗೆದುಕೊಂಡು ಹೋಗಿ ಕೊಲ್ಲಬೇಕು.


“ಆದರೆ ಒಬ್ಬನು ಇನ್ನೊಬ್ಬ ವ್ಯಕ್ತಿಯನ್ನು ದ್ವೇಷಿಸಿದರೆ, ಅವನನ್ನು ಉದ್ದೇಶಪೂರ್ವಕವಾಗಿ ಕೊಂದು ಆಶ್ರಯ ನಗರದೊಳಗೆ ಸುರಕ್ಷಿತನಾಗಿದ್ದಲ್ಲಿ


ನೀವು ಅವನ ವಿಷಯದಲ್ಲಿ ದುಃಖಪಡಬಾರದು. ಯಾಕೆಂದರೆ ಅವನು ನಿರಪರಾಧಿಯನ್ನು ಕೊಂದ ಅಪರಾಧಿಯಾಗಿದ್ದಾನೆ. ಅವನು ಮಾಡಿದ ಪಾಪವನ್ನು ಇಸ್ರೇಲಿನಿಂದ ತೆಗೆದುಹಾಕಬೇಕು. ಆಗ ನಿಮಗೆ ಶುಭವಾಗುವುದು.


ಈಗ ನಮ್ಮ ಕುಟುಂಬದವರೆಲ್ಲಾ ನನಗೆ ವಿರುದ್ಧವಾಗಿದ್ದಾರೆ. ಅವರು ನನಗೆ, ‘ತನ್ನ ಸೋದರನನ್ನೇ ಕೊಂದ ಮಗನನ್ನು ಕರೆದುಕೊಂಡು ಬಾ. ಅವನು ತನ್ನ ಸೋದರನನ್ನೇ ಕೊಂದುಹಾಕಿದ್ದರಿಂದ ಅವನನ್ನು ನಾವು ಕೊಂದುಹಾಕುತ್ತೇವೆ’ ಎಂದು ಹೇಳಿದರು. ನನ್ನ ಮಗನನ್ನು ಕೊಲ್ಲಲು ನಾನು ಅವರಿಗೆ ಬಿಟ್ಟುಕೊಟ್ಟರೆ, ತನ್ನ ತಂದೆಯ ಆಸ್ತಿಗೆ ವಾರಸುದಾರನಾದ ಮಗನನ್ನೇ ಕೊಂದುಹಾಕಿದಂತಾಗುತ್ತದೆ. ನನ್ನ ಮಗ ನನ್ನ ಬದುಕಿನ ಕೊನೆಯ ಆಶಾಕಿರಣ. ಆ ಕೊನೆಯ ಆಶಾಕಿರಣವು ಸುಟ್ಟು ನಾಶವಾಗಿಬಿಡುತ್ತದೆ. ನಂತರ ನನ್ನ ಸತ್ತ ಗಂಡನ ಆಸ್ತಿ ಬೇರೊಬ್ಬನಿಗೆ ಹೋಗುತ್ತದೆ ಮತ್ತು ಅವನ ಹೆಸರು ದೇಶದೊಳಗಿಂದ ತೆಗೆದುಹಾಕಲ್ಪಡುತ್ತದೆ” ಎಂದು ಹೇಳಿದಳು.


ಯಾವನಾದರೂ ನಿಮ್ಮ ಜೀವಹತ್ಯೆ ಮಾಡಿದರೆ, ನಾನು ಅವನ ಜೀವವನ್ನು ತೆಗೆಯುವೆನು. ಯಾವ ಪ್ರಾಣಿಯಾದರೂ ಮನುಷ್ಯನನ್ನು ಕೊಂದರೆ, ನಾನು ಆ ಪ್ರಾಣಿಯ ಪ್ರಾಣವನ್ನು ತೆಗೆಯುತ್ತೇನೆ.


“ಲೇವಿಯರು, ‘ಇನ್ನೊಬ್ಬ ವ್ಯಕ್ತಿಯನ್ನು ಕೊಲೆ ಮಾಡಿದವನು ಹಿಡಿಯಲ್ಪಡದಿದ್ದರೂ ಸಹ ಶಾಪಗ್ರಸ್ತನಾಗಲಿ’ ಎಂದು ಹೇಳಬೇಕು. “ಆಗ ಎಲ್ಲಾ ಜನರು, ‘ಆಮೆನ್’ ಎಂದು ಹೇಳಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು