Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 19:14 - ಪರಿಶುದ್ದ ಬೈಬಲ್‌

14 “ನಿಮ್ಮ ನೆರೆಯವನ ಭೂಮಿಯ ಗಡಿಕಲ್ಲುಗಳ ಸ್ಥಳವನ್ನು ನೀವು ಬದಲಾಯಿಸಬಾರದು. ಹಿಂದಿನ ಕಾಲದಲ್ಲಿ ಜನರು ತಮ್ಮ ಭೂಮಿಯ ಮೇರೆಯನ್ನು ಗುರುತಿಸಲು ನೆಟ್ಟಿರುತ್ತಾರೆ. ಆ ಗಡಿಕಲ್ಲುಗಳು ನಿಮ್ಮ ದೇವರಾದ ಯೆಹೋವನು ನಿಮಗೆ ಕೊಟ್ಟಿರುವ ಆ ಭೂಮಿಗೆ ಗುರುತಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ನಿಮ್ಮ ದೇವರಾದ ಯೆಹೋವನು ನಿಮಗೆ ಸ್ವದೇಶವಾಗುವುದಕ್ಕೆ ಕೊಡುವ ದೇಶದಲ್ಲಿ ನಿಮ್ಮ ಪಾಲಿಗೆ ಬಂದ ಸ್ವತ್ತಿನಲ್ಲಿ ನೆರೆಯವನ ಭೂಮಿಯ ಹಿಂದಿನ ಕಾಲದ ಗಡಿಯನ್ನು ಒತ್ತಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 “ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಸ್ವದೇಶವಾಗಲೆಂದು ಕೊಡುವ ನಾಡಿನಲ್ಲಿ ನಿಮ್ಮ ಪಾಲಿಗೆ ಬಂದ ಸೊತ್ತಿನಲ್ಲಿ ನೆರೆಯವನ ಭೂಮಿಯ ಪೂರ್ವಕಾಲದ ಗಡಿಕಲ್ಲನ್ನು ಒತ್ತರಿಸಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ನಿಮ್ಮ ದೇವರಾದ ಯೆಹೋವನು ನಿಮಗೆ ಸ್ವದೇಶವಾಗುವದಕ್ಕೆ ಕೊಡುವ ದೇಶದಲ್ಲಿ ನಿಮ್ಮ ಪಾಲಿಗೆ ಬಂದ ಸ್ವಾಸ್ತ್ಯದಲ್ಲಿ ನೆರೆಯವನ ಭೂವಿುಯ ಪೂರ್ವಕಾಲದ ಮೇರೆಯನ್ನು ಒತ್ತಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಸ್ವಾಧೀನಮಾಡಿಕೊಳ್ಳುವುದಕ್ಕೆ ಕೊಡುವ ದೇಶದೊಳಗೆ ನೀವು ಹೊಂದುವ ಸೊತ್ತಿನಲ್ಲಿ ಹಿರಿಯರು ಇಟ್ಟಂಥ ನಿಮ್ಮ ನೆರೆಯವನ ಮೇರೆಯನ್ನು ಸರಿಸಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 19:14
9 ತಿಳಿವುಗಳ ಹೋಲಿಕೆ  

ಬಹುಕಾಲದ ಹಿಂದೆ ನಿನ್ನ ಪೂರ್ವಿಕರು ಜಮೀನಿಗೆ ಹಾಕಿದ ಮೇರೆಗಲ್ಲನ್ನು ಎಂದಿಗೂ ಜರುಗಿಸಬೇಡ.


“ಲೇವಿಯರು, ‘ನೆರೆಯವನ ಗಡಿಕಲ್ಲಿನ ಸ್ಥಳ ಬದಲಾಯಿಸುವವನು ಶಾಪಗ್ರಸ್ತನಾಗಲಿ’ ಎಂದು ಹೇಳಬೇಕು. “ಆಗ ಎಲ್ಲಾ ಜನರು ‘ಆಮೆನ್’ ಎಂದು ಹೇಳಬೇಕು.


ಯೆಹೂದದ ನಾಯಕರು ಪರರ ಆಸ್ತಿಯನ್ನು ದೋಚುವ ಕಳ್ಳರಂತಿದ್ದಾರೆ. ಯೆಹೋವನಾದ ನಾನು ಅವರ ಮೇಲೆ ನನ್ನ ಕೋಪವನ್ನು ನೀರಿನಂತೆ ಸುರಿಸುವೆನು.


ಜಮೀನಿನ ಮೇರೆಯನ್ನು ಎಂದಿಗೂ ಒತ್ತಬೇಡ. ಅನಾಥರಿಗೆ ಸೇರಿದ ಭೂಮಿಯನ್ನು ಎಂದಿಗೂ ಕಸಿದುಕೊಳ್ಳಬೇಡ.


“ಜಮೀನಿನ ಮೇರೆಯನ್ನು ಸರಿಸುವವರೂ ಇದ್ದಾರೆ. ದನಕುರಿಗಳನ್ನು ಅಪಹರಿಸಿಕೊಂಡು ಹೋಗುವವರೂ ಇದ್ದಾರೆ.


ಅಹಂಕಾರಿಗಳ ಆಸ್ತಿಯನ್ನು ಯೆಹೋವನು ನಾಶಗೊಳಿಸುತ್ತಾನೆ; ಆದರೆ ವಿಧವೆಯರ ಆಸ್ತಿಯನ್ನು ಕಾಪಾಡುವನು.


ಆದರೆ ಕೊಲ್ಲಬೇಕೆಂಬ ಉದ್ದೇಶವಿಲ್ಲದೆ ಹೊಡೆದಾಗ ಸತ್ತುಹೋದರೆ ಅದು ದೇವರ ಸಂಕಲ್ಪವೆಂದು ಪರಿಗಣಿಸಬೇಕು. ನಾನು ನೇಮಿಸಲಿರುವ ಆಶ್ರಯಸ್ಥಳಗಳಿಗೆ ಹೊಡೆದವನು ಓಡಿಹೋಗಿ ಸುರಕ್ಷಿತವಾಗಿ ಬದುಕಲಿ.


“ಆ ಕಾಲದಲ್ಲಿ ನಾನು ನಿಮಗೆ ಆಜ್ಞಾಪಿಸಿದ್ದೇನೆಂದರೆ: ‘ನಿಮ್ಮ ದೇವರಾದ ಯೆಹೋವನು ನಿಮಗೆ ಜೋರ್ಡನ್ ನದಿಯ ಪೂರ್ವದಿಕ್ಕಿನಲ್ಲಿ ಸ್ವಾಸ್ತ್ಯವನ್ನು ಕೊಟ್ಟಿದ್ದಾನೆ. ಆದರೆ ನಿಮ್ಮಲ್ಲಿರುವ ಸೈನಿಕರು ತಮ್ಮ ಆಯುಧಗಳನ್ನು ತೆಗೆದುಕೊಂಡು ಇತರ ಇಸ್ರೇಲರೊಂದಿಗೆ ನದಿಯಾಚೆಗೆ ಬರಬೇಕು. ಅಲ್ಲಿಯ ದೇಶಗಳನ್ನು ಸ್ವಾಧೀನಪಡಿಸಿಕೊಂಡು ಶಾಂತಿ ನೆಲೆಸುವ ತನಕ ಅವರೊಂದಿಗಿರಬೇಕು.


ಆಮೇಲೆ ಮೋಶೆಯು ಜೋರ್ಡನ್ ನದಿಯ ಪೂರ್ವ ಪ್ರಾಂತ್ಯದ ಮೂರು ಆಶ್ರಯನಗರಗಳನ್ನು ಆರಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು