Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 19:15 - ಪರಿಶುದ್ದ ಬೈಬಲ್‌

15 “ಒಬ್ಬನು ಕಟ್ಟಳೆಗಳಿಗೆ ವಿರುದ್ಧವಾಗಿ ನಡೆದುಕೊಂಡು ಅಪಾದಿಸಲ್ಪಟ್ಟದ್ದಲ್ಲಿ ಒಬ್ಬನ ಸಾಕ್ಷಿಯಿಂದ ಅವನು ತಪ್ಪಿತಸ್ಥನೆಂದು ತೀರ್ಮಾನಿಸಬಾರದು. ಅವನು ತಪ್ಪಿತಸ್ಥನೆಂದು ತೋರಿಸಲು ಎರಡು ಅಥವಾ ಮೂರು ಸಾಕ್ಷಿಗಳಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಯಾವ ದೋಷದ ಅಥವಾ ಅಪರಾಧದ ವಿಷಯದಲ್ಲೂ ಒಬ್ಬನೇ ಒಬ್ಬನ ಸಾಕ್ಷಿಯನ್ನು ನೀವು ಅಂಗೀಕರಿಸಬಾರದು. ನಡೆದ ಸಂಗತಿ ರುಜುವಾತಾಗುವುದಕ್ಕೆ ಇಬ್ಬರ ಇಲ್ಲವೆ ಮೂವರ ಸಾಕ್ಷಿಗಳು ಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 “ಯಾವ ದೋಷದ ಅಥವಾ ಅಪರಾಧದ ನಿಷಯದಲ್ಲೂ ಒಬ್ಬನೇ ಒಬ್ಬನ ಸಾಕ್ಷಿಯನ್ನು ನೀವು ಅಂಗೀಕರಿಸಬಾರದು. ನಡೆದ ಘಟನೆ ರುಜುವಾತಾಗಲು ಇಬ್ಬರು ಇಲ್ಲವೆ ಮೂವರು ಸಾಕ್ಷಿಗಳು ಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಯಾವ ದೋಷದ ಅಥವಾ ಅಪರಾಧದ ವಿಷಯದಲ್ಲೂ ಒಬ್ಬನೇ ಒಬ್ಬನ ಸಾಕ್ಷಿಯನ್ನು ನೀವು ಅಂಗೀಕರಿಸಬಾರದು. ನಡೆದ ಸಂಗತಿ ಸ್ಥಾಪನೆಯಾಗುವದಕ್ಕೆ ಇಬ್ಬರು ಇಲ್ಲವೆ ಮೂವರು ಸಾಕ್ಷಿಗಳು ಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಯಾವ ಅಕ್ರಮದ ನಿಮಿತ್ತವೂ, ಅಥವಾ ಪಾಪದ ನಿಮಿತ್ತವೂ ಒಬ್ಬ ಮನುಷ್ಯನಿಗೆ ವಿರೋಧವಾಗಿ ಒಬ್ಬ ಸಾಕ್ಷಿ ನಿಂತುಕೊಳ್ಳಬಾರದು. ಇಬ್ಬರು ಸಾಕ್ಷಿಗಳ ಇಲ್ಲವೆ ಮೂವರು ಸಾಕ್ಷಿಗಳ ಮಾತಿನಿಂದ ವಿಷಯವು ಸ್ಥಿರವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 19:15
12 ತಿಳಿವುಗಳ ಹೋಲಿಕೆ  

“ಯಾವನಾದರೂ ಮತ್ತೊಬ್ಬನನ್ನು ಕೊಂದರೆ, ಸಾಕ್ಷ್ಯಾಧಾರಗಳು ಇದ್ದರೆ ಮಾತ್ರ ಕೊಂದವನು ಕೊಲ್ಲಲ್ಪಡಬೇಕು.


ನಾನು ಮತ್ತೆ ನಿಮ್ಮ ಬಳಿಗೆ ಮೂರನೆ ಸಾರಿ ಬರುತ್ತೇನೆ. ನೆನಪಿಟ್ಟುಕೊಳ್ಳಿರಿ, “ಪ್ರತಿಯೊಂದು ದೂರಿಗೂ ಇಬ್ಬರಾಗಲಿ ಮೂವರಾಗಲಿ ಸಾಕ್ಷಿಗಳಿದ್ದು ತಮಗೆ ಗೊತ್ತಿರುವುದಾಗಿ ಮತ್ತು ಅದು ಸತ್ಯವೆಂದು” ಹೇಳಬೇಕು.


ಅವರು ವಿಗ್ರಹಾರಾಧನೆ ಮಾಡಿದ್ದಕ್ಕೆ ಒಂದೇ ಸಾಕ್ಷಿ ಇರುವುದಾದರೆ ಅವರಿಗೆ ಮರಣಶಿಕ್ಷೆಯಾಗಬಾರದು. ಆದರೆ ಇಬ್ಬರು ಅಥವಾ ಮೂವರು ಸಾಕ್ಷಿಗಳು ಅವರು ವಿಗ್ರಹಾರಾಧನೆ ಮಾಡಿದ್ದು ಸತ್ಯವೆಂದು ಹೇಳಿದರೆ ಮಾತ್ರ ಅವರನ್ನು ಸಾಯಿಸಬೇಕು.


ಮೋಶೆಯ ನಿಯಮಗಳಿಗೆ ಅವಿಧೇಯನಾದ ವ್ಯಕ್ತಿಯು ಇಬ್ಬರು ಅಥವಾ ಮೂವರು ಸಾಕ್ಷಿಗಳಿಂದ ತಪ್ಪಿತಸ್ಥನೆಂದು ನಿರ್ಧರಿಸಲ್ಪಟ್ಟರೆ, ಅವನಿಗೆ ಕ್ಷಮೆ ದೊರೆಯುತ್ತಿರಲಿಲ್ಲ. ಅವನನ್ನು ಕೊಂದುಹಾಕುತ್ತಿದ್ದರು.


ಆದರೆ ಅವನು ನಿನ್ನ ಮಾತನ್ನು ಕೇಳದಿದ್ದರೆ, ನಿನ್ನೊಂದಿಗೆ ಒಬ್ಬಿಬ್ಬರನ್ನು ಕರೆದುಕೊಂಡು ಮತ್ತೆ ಅವನ ಬಳಿಗೆ ಹೋಗು. ಆಗ ಪ್ರತಿಯೊಂದು ದೂರಿನ ವಿಷಯದಲ್ಲೂ ಇಬ್ಬರು ಅಥವಾ ಮೂವರು ಸಾಕ್ಷಿಗಳಿರುವರು.


ಸಭೆಯ ಹಿರಿಯರನ್ನು ಕುರಿತು ಯಾವನಾದರೂ ದೂರು ಹೇಳಿದರೆ ಇಬ್ಬರು ಅಥವಾ ಮೂವರು ಸಾಕ್ಷಿಗಳಿಲ್ಲದ ಹೊರತು ಅವನ ಮಾತುಗಳಿಗೆ ಕಿವಿಗೊಡಬೇಡ.


ಇಬ್ಬರ ಸಾಕ್ಷಿ ಒಂದೇ ಆಗಿದ್ದರೆ ಅವರ ಹೇಳಿಕೆಯನ್ನು ಸ್ವೀಕರಿಸಿಕೊಳ್ಳಬೇಕೆಂದು ನಿಮ್ಮ ಧರ್ಮಶಾಸ್ತ್ರವೇ ತಿಳಿಸುತ್ತದೆ.


ನಾಬೋತನು ದೇವರ ವಿರುದ್ಧವಾಗಿಯೂ ರಾಜನ ವಿರುದ್ಧವಾಗಿಯೂ ಮಾತನಾಡಿದ್ದನ್ನು ತಾವು ಕೇಳಿರುವುದಾಗಿ ಇಬ್ಬರು ಅಲ್ಲಿನ ಜನರಿಗೆ ಹೇಳಿದರು. ಜನರು ನಾಬೋತನನ್ನು ನಗರದ ಹೊರಕ್ಕೆ ಕರೆದೊಯ್ದು ಅವನನ್ನು ಕಲ್ಲೆಸೆದು ಕೊಂದರು.


ನಾಬೋತನ ಬಗ್ಗೆ ಸುಳ್ಳುಹೇಳುವ ಕೆಲವು ಜನರನ್ನು ಪತ್ತೆಹಚ್ಚಿ, ನಾಬೋತನು ರಾಜನ ವಿರುದ್ಧವಾಗಿ ಮತ್ತು ದೇವರ ವಿರುದ್ಧವಾಗಿ ಮಾತನಾಡುವುದನ್ನು ನಾವು ಕೇಳಿಸಿಕೊಂಡೆವೆಂದು ಅವರು ಹೇಳಲೇಬೇಕು. ಆಗ ನಾಬೋತನನ್ನು ನಗರದಿಂದ ಹೊರಕ್ಕೆ ಕರೆದೊಯ್ದು ಅವನನ್ನು ಕಲ್ಲೆಸೆದು ಕೊಂದುಹಾಕಿರಿ.”


ನಿಕೊದೇಮನು, “ಒಬ್ಬ ವ್ಯಕ್ತಿಯ ಹೇಳಿಕೆಯನ್ನು ಕೇಳದೆ ತೀರ್ಪು ನೀಡಲು ನಮ್ಮ ಧರ್ಮಶಾಸ್ತ್ರವು ಸಮ್ಮತಿಸುವುದಿಲ್ಲ. ಆತನು ಮಾಡಿರುವುದನ್ನು ನಾವು ತಿಳಿದುಕೊಳ್ಳುವವರೆಗೆ ಆತನಿಗೆ ತೀರ್ಪು ಮಾಡಲಾಗದು” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು