ಧರ್ಮೋಪದೇಶಕಾಂಡ 19:19 - ಪರಿಶುದ್ದ ಬೈಬಲ್19 ಆ ಸಾಕ್ಷಿಯವನಿಗೆ ಶಿಕ್ಷೆ ವಿಧಿಸಬೇಕು. ತನ್ನ ವಿರೋಧಿಗೆ ಯಾವ ಶಿಕ್ಷೆ ಬರಬೇಕೆಂಬುದಾಗಿ ಅವನು ಸುಳ್ಳಾಡಿದ್ದನೋ, ಅದೇ ಶಿಕ್ಷೆಯನ್ನು ಅವನಿಗೆ ವಿಧಿಸಬೇಕು. ಈ ರೀತಿಯಾಗಿ ಆ ದುಷ್ಟತನವನ್ನು ನಿಮ್ಮ ಕುಲಗಳಿಂದ ತೆಗೆದುಹಾಕಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಅವನು ಆ ಮತ್ತೊಬ್ಬನಿಗೆ ಕೊಡಿಸಬೇಕೆಂದಿದ್ದ ಶಿಕ್ಷೆಯನ್ನು ಅವನಿಗೆ ವಿಧಿಸಬೇಕು. ಹೀಗೆ ನೀವು ಆ ದುಷ್ಟತ್ವವನ್ನು ನಿಮ್ಮ ಮಧ್ಯದೊಳಗಿಂದ ತೆಗೆದುಹಾಕಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಅವನು ಆ ಮತ್ತೊಬ್ಬನಿಗೆ ಮಾಡಿಸಬೇಕೆಂದಿದ್ದ ಶಿಕ್ಷೆಯನ್ನು ಅವನಿಗೇ ವಿಧಿಸಬೇಕು. ಹೀಗೆ, ನೀವು ಆ ದುಷ್ಟತ್ವವನ್ನು ನಿಮ್ಮ ಮಧ್ಯೆಯಿಂದ ತೆಗೆದುಹಾಕಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಹೀಗೆ ನೀವು ಆ ದುಷ್ಟತ್ವವನ್ನು ನಿಮ್ಮ ಮಧ್ಯದೊಳಗಿಂದ ತೆಗೆದುಹಾಕಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಅವನು ತನ್ನ ಸಹೋದರನಿಗೆ ಮಾಡುವುದಕ್ಕೆ ಯೋಚಿಸಿದ ಪ್ರಕಾರವೇ ಅವನಿಗೆ ಶಿಕ್ಷೆ ಕೊಡಬೇಕು. ಹೀಗೆ ಕೆಟ್ಟದ್ದನ್ನು ನಿಮ್ಮ ಮಧ್ಯದಲ್ಲಿಂದ ತೆಗೆದುಹಾಕಬೇಕು. ಅಧ್ಯಾಯವನ್ನು ನೋಡಿ |
ನಗರದ ಬಾಗಿಲಿನ ಬಳಿಯಿರುವ ಸಾರ್ವಜನಿಕ ಸ್ಥಳಕ್ಕೆ ನೀವು ಅವರಿಬ್ಬರನ್ನು ಕರೆದುಕೊಂಡು ಬಂದು ಅವರಿಬ್ಬರನ್ನೂ ಕಲ್ಲೆಸೆದು ಕೊಲ್ಲಬೇಕು. ನೀವು ಆ ಪುರುಷನನ್ನು ಕೊಲ್ಲಬೇಕು. ಏಕೆಂದರೆ ಅವನು ಮತ್ತೊಬ್ಬನ ಹೆಂಡತಿಯನ್ನು ಲೈಂಗಿಕವಾಗಿ ಹಿಂಸಿಸಿದನು. ನೀವು ಆ ಸ್ತ್ರೀಯನ್ನು ಕೊಲ್ಲಬೇಕು; ಯಾಕೆಂದರೆ ಆಕೆಯು ನಗರದಲ್ಲಿದ್ದರೂ ಸಹಾಯಕ್ಕಾಗಿ ಕೂಗಿಕೊಳ್ಳಲಿಲ್ಲ. ಆ ಕೆಡುಕನ್ನು ನೀವು ನಿಮ್ಮ ಜನರಿಂದ ತೆಗೆದುಹಾಕಬೇಕು.
ನನ್ನ ಹೆಸರಿನಲ್ಲಿ ಬೋಧನೆ ಮಾಡುತ್ತಿರುವ ಈ ಪ್ರವಾದಿಗಳ ಬಗ್ಗೆ ನಾನು ಹೇಳುವದು ಇಷ್ಟೇ. ನಾನು ಆ ಪ್ರವಾದಿಗಳನ್ನು ಕಳುಹಿಸಿಲ್ಲ. ಆ ಪ್ರವಾದಿಗಳು ‘ಶತ್ರುಗಳು ಖಡ್ಗಧಾರಿಗಳಾಗಿ ಎಂದಿಗೂ ಈ ದೇಶದ ಮೇಲೆ ಧಾಳಿ ಮಾಡುವದಿಲ್ಲ. ಈ ದೇಶದಲ್ಲಿ ಎಂದೂ ಕ್ಷಾಮ ಕಾಣಿಸಿಕೊಳ್ಳುವದಿಲ್ಲ’ ಎಂದು ಹೇಳಿದ್ದಾರೆ. ಆದರೆ ಆ ಪ್ರವಾದಿಗಳು ಹಸಿವಿನ ತಾಪದಿಂದ ಸಾಯುತ್ತಾರೆ ಮತ್ತು ಶತ್ರುವಿನ ಖಡ್ಗ ಅವರನ್ನು ಕೊಲ್ಲುತ್ತದೆ.
“ನಿಮ್ಮ ಹತ್ತಿರದ ಸಂಬಂಧಿಕರಲ್ಲಿ ಯಾರಾದರೂ ಇತರ ದೇವರುಗಳನ್ನು ಅನುಸರಿಸಲು ನಿಮ್ಮನ್ನು ಗುಪ್ತವಾಗಿ ಒತ್ತಾಯ ಮಾಡಬಹುದು. ಅವರು ನಿಮ್ಮ ಸ್ವಂತ ಸಹೋದರನಾಗಿರಬಹುದು, ನಿಮ್ಮ ಮಕ್ಕಳಾಗಿರಬಹುದು, ನಿಮ್ಮ ಹೆಂಡತಿಯಾಗಿರಬಹುದು, ಅಥವಾ ಆಪ್ತಗೆಳೆಯನಾಗಿರಬಹುದು. ಅವರು ಬಂದು, ‘ಬಾ, ನಾವು ಬೇರೆ ದೇವರನ್ನು ಹಿಂಬಾಲಿಸೋಣ’ (ಈ ದೇವರನ್ನು ನೀವಾಗಲಿ ನಿಮ್ಮ ಪೂರ್ವಿಕರಾಗಲಿ ತಿಳಿದಿರಲಿಲ್ಲ.