Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 19:7 - ಪರಿಶುದ್ದ ಬೈಬಲ್‌

7 ಆದ್ದರಿಂದ ಆ ನಗರಗಳು ಎಲ್ಲರಿಗೂ ಸುಲಭವಾಗಿ ಸೇರುವಂಥವುಗಳಾಗಿರಬೇಕು; ಅಂಥವುಗಳನ್ನು ನೀವು ಆರಿಸಿಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಈ ಕಾರಣದಿಂದ ನೀವು ಮೂರು ಆಶ್ರಯ ನಗರಗಳನ್ನು ಗೊತ್ತುಮಾಡಬೇಕೆಂದು ಆಜ್ಞಾಪಿಸಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಈ ಕಾರಣದಿಂದಲೇ ನೀವು ಆ ಮೂರು ಆಶ್ರಯ ನಗರಗಳನ್ನು ಗೊತ್ತುಮಾಡಬೇಕೆಂದು ಆಜ್ಞಾಪಿಸಿ ಇದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಈ ಕಾರಣದಿಂದ ನೀವು ಮೂರು ಆಶ್ರಯ ನಗರಗಳನ್ನು ಗೊತ್ತುಮಾಡಬೇಕೆಂದು ಆಜ್ಞಾಪಿಸಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಈ ಕಾರಣದಿಂದಲೇ ನೀವು ಆ ಮೂರು ಆಶ್ರಯಪಟ್ಟಣಗಳನ್ನು ಗೊತ್ತು ಮಾಡಬೇಕೆಂದು ಆಜ್ಞಾಪಿಸಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 19:7
5 ತಿಳಿವುಗಳ ಹೋಲಿಕೆ  

ಆದರೆ ಆ ನಗರವು ತುಂಬಾ ದೂರವಿದ್ದಲ್ಲಿ ಅವನು ಅಲ್ಲಿಗೆ ಸೇರುವ ಮೊದಲೇ ಸತ್ತವನ ಹತ್ತಿರದ ಸಂಬಂಧಿ ಅವನನ್ನು ಹಿಂಬಾಲಿಸಿ ಅವನ ಮೇಲೆ ಮುಯ್ಯಿತೀರಿಸಿಕೊಳ್ಳುವನು. ಅವನ ಮೇಲೆ ಕೋಪಗೊಂಡು ಅವನನ್ನು ಕೊಂದರೆ ನಿಷ್ಕಾರಣವಾಗಿ ಅವನು ಕೊಲ್ಲಲ್ಪಟ್ಟಂತಾಯಿತು. ಯಾಕೆಂದರೆ ಸತ್ತವನನ್ನು ಅವನು ದ್ವೇಷಿಸುತ್ತಿರಲಿಲ್ಲ.


“ನಿಮ್ಮ ದೇವರಾದ ಯೆಹೋವನು ನಿಮ್ಮ ಪೂರ್ವಿಕರಿಗೆ ನಿಮ್ಮ ದೇಶವನ್ನು ವಿಸ್ತಾರ ಮಾಡುವುದಾಗಿ ವಾಗ್ದಾನ ಮಾಡಿದನು. ಅವರಿಗೆ ಕೊಡುವುದಾಗಿ ವಾಗ್ದಾನಮಾಡಿದ ದೇಶವನ್ನೆಲ್ಲಾ ನಿಮಗೆ ಕೊಡುವನು.


ಆದರೆ ಕೊಲ್ಲಬೇಕೆಂಬ ಉದ್ದೇಶವಿಲ್ಲದೆ ಹೊಡೆದಾಗ ಸತ್ತುಹೋದರೆ ಅದು ದೇವರ ಸಂಕಲ್ಪವೆಂದು ಪರಿಗಣಿಸಬೇಕು. ನಾನು ನೇಮಿಸಲಿರುವ ಆಶ್ರಯಸ್ಥಳಗಳಿಗೆ ಹೊಡೆದವನು ಓಡಿಹೋಗಿ ಸುರಕ್ಷಿತವಾಗಿ ಬದುಕಲಿ.


“ಆ ಕಾಲದಲ್ಲಿ ನಾನು ನಿಮಗೆ ಆಜ್ಞಾಪಿಸಿದ್ದೇನೆಂದರೆ: ‘ನಿಮ್ಮ ದೇವರಾದ ಯೆಹೋವನು ನಿಮಗೆ ಜೋರ್ಡನ್ ನದಿಯ ಪೂರ್ವದಿಕ್ಕಿನಲ್ಲಿ ಸ್ವಾಸ್ತ್ಯವನ್ನು ಕೊಟ್ಟಿದ್ದಾನೆ. ಆದರೆ ನಿಮ್ಮಲ್ಲಿರುವ ಸೈನಿಕರು ತಮ್ಮ ಆಯುಧಗಳನ್ನು ತೆಗೆದುಕೊಂಡು ಇತರ ಇಸ್ರೇಲರೊಂದಿಗೆ ನದಿಯಾಚೆಗೆ ಬರಬೇಕು. ಅಲ್ಲಿಯ ದೇಶಗಳನ್ನು ಸ್ವಾಧೀನಪಡಿಸಿಕೊಂಡು ಶಾಂತಿ ನೆಲೆಸುವ ತನಕ ಅವರೊಂದಿಗಿರಬೇಕು.


ಆಮೇಲೆ ಮೋಶೆಯು ಜೋರ್ಡನ್ ನದಿಯ ಪೂರ್ವ ಪ್ರಾಂತ್ಯದ ಮೂರು ಆಶ್ರಯನಗರಗಳನ್ನು ಆರಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು