ಧರ್ಮೋಪದೇಶಕಾಂಡ 19:8 - ಪರಿಶುದ್ದ ಬೈಬಲ್8 “ನಿಮ್ಮ ದೇವರಾದ ಯೆಹೋವನು ನಿಮ್ಮ ಪೂರ್ವಿಕರಿಗೆ ನಿಮ್ಮ ದೇಶವನ್ನು ವಿಸ್ತಾರ ಮಾಡುವುದಾಗಿ ವಾಗ್ದಾನ ಮಾಡಿದನು. ಅವರಿಗೆ ಕೊಡುವುದಾಗಿ ವಾಗ್ದಾನಮಾಡಿದ ದೇಶವನ್ನೆಲ್ಲಾ ನಿಮಗೆ ಕೊಡುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಯೆಹೋವನು ನಿಮ್ಮ ಪೂರ್ವಿಕರಿಗೆ ವಾಗ್ದಾನಮಾಡಿದಂತೆ ನಿಮ್ಮ ರಾಜ್ಯವನ್ನು ವಿಸ್ತರಿಸಿ, ತಾನು ನಿಮ್ಮ ಪೂರ್ವಿಕರಿಗೆ ಸೂಚಿಸಿದ ಪ್ರದೇಶವನ್ನೆಲ್ಲಾ ಕೊಡುವಾಗ, ಇನ್ನೂ ಮೂರು ನಗರಗಳನ್ನು ನಿಮಗಾಗಿ ಗೊತ್ತುಮಾಡಬೇಕು. ನಾನು ಈಗ ನಿಮಗೆ ಬೋಧಿಸುವ ಈ ಧರ್ಮೋಪದೇಶವನ್ನೆಲ್ಲಾ ನೀವು ಅನುಸರಿಸುವವರಾಗಿ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8-9 “ನಾನು ಈಗ ನಿಮಗೆ ಬೋಧಿಸುವ ಈ ಇಡೀ ಧರ್ಮೋಪದೇಶವನ್ನು ನೀವು ಅನುಸರಿಸಬೇಕು. ನಿಮ್ಮ ದೇವರಾದ ಸರ್ವೇಶ್ವರನನ್ನು ಪ್ರೀತಿಸಿ ಅವರು ಹೇಳುವ ಮಾರ್ಗದಲ್ಲೇ ಯಾವಾಗಲು ನಡೆಯಬೇಕು. ಆಗ ಅವರು ನಿಮ್ಮ ಪಿತೃಗಳಿಗೆ ವಾಗ್ದಾನಮಾಡಿದಂತೆ ನಿಮ್ಮ ರಾಜ್ಯವನ್ನು ವಿಸ್ತರಿಸಿ, ನಿಮ್ಮ ಪಿತೃಗಳಿಗೆ ಸೂಚಿಸಿದ ಪ್ರದೇಶವನ್ನೆಲ್ಲಾ ಕೊಡುವರು. ಆಗ ಈ ಮೂರು ನಗರಗಳಲ್ಲದೆ ಇನ್ನೂ ಮೂರು ನಗರಗಳನ್ನು ಗೊತ್ತುಮಾಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8-9 ನಾನು ಈಗ ನಿಮಗೆ ಬೋಧಿಸುವ ಈ ಧರ್ಮೋಪದೇಶವನ್ನೆಲ್ಲಾ ನೀವು ಅನುಸರಿಸುವವರಾಗಿ ನಿಮ್ಮ ದೇವರಾದ ಯೆಹೋವನನ್ನು ಪ್ರೀತಿಸಿ ಆತನು ಹೇಳುವ ಮಾರ್ಗದಲ್ಲೇ ಯಾವಾಗಲೂ ನಡೆದರೆ ಆತನು ನಿಮ್ಮ ಪಿತೃಗಳಿಗೆ ವಾಗ್ದಾನಮಾಡಿದಂತೆ ನಿಮ್ಮ ರಾಜ್ಯವನ್ನು ವಿಸ್ತರಿಸಿ ತಾನು ನಿಮ್ಮ ಪಿತೃಗಳಿಗೆ ಸೂಚಿಸಿದ ಪ್ರದೇಶವನ್ನೆಲ್ಲಾ ಕೊಡುವನು. ಆಗ ಈ ಮೂರು ಪಟ್ಟಣಗಳನ್ನಲ್ಲದೆ ಇನ್ನು ಮೂರು ಪಟ್ಟಣಗಳನ್ನು ಗೊತ್ತುಮಾಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಯೆಹೋವ ದೇವರು ನಿಮ್ಮ ಪಿತೃಗಳಿಗೆ ಪ್ರಮಾಣ ಮಾಡಿದಂತೆ ನಿಮ್ಮ ಮೇರೆಯನ್ನು ವಿಸ್ತಾರಮಾಡಿ, ನಿಮ್ಮ ಪಿತೃಗಳಿಗೆ ಕೊಡುವುದಾಗಿ ಹೇಳಿದ ದೇಶವನ್ನೆಲ್ಲಾ ನಿಮಗೆ ಕೊಡುವರು. ಅಧ್ಯಾಯವನ್ನು ನೋಡಿ |