ಧರ್ಮೋಪದೇಶಕಾಂಡ 2:14 - ಪರಿಶುದ್ದ ಬೈಬಲ್14 ಕಾದೇಶ್‌ಬರ್ನೇಯದಿಂದ ಜೆರೆದ್ ಕಣಿವೆಯನ್ನು ದಾಟಿ ಆಗಲೇ ಮೂವತ್ತೆಂಟು ವರ್ಷಗಳು ದಾಟಿದ್ದವು. ನಮ್ಮ ಸಮೂಹದಲ್ಲಿದ್ದ ಯುದ್ಧಭಟರೆಲ್ಲಾ ಸತ್ತುಹೋಗಿದ್ದರು. ಹೀಗೆ ಆಗುವುದೆಂದು ದೇವರು ಪ್ರಮಾಣ ಮಾಡಿದ್ದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ನಾವು ಕಾದೇಶ್‌ಬರ್ನೇಯದಿಂದ ಹೊರಟು ಜೆರೆದ್ ಹಳ್ಳವನ್ನು ದಾಟಲು ಮೂವತ್ತೆಂಟು ವರ್ಷವಾಯಿತು. ಯೆಹೋವನು ಪ್ರಮಾಣಪೂರ್ವಕವಾಗಿ ಹೇಳಿದ್ದಂತೆ ಅಷ್ಟರಲ್ಲಿ ಆ ತಲೆಮಾರಿನ ಸೈನಿಕರೆಲ್ಲರೂ ಸತ್ತುಹೋಗಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ನಾವು ಕಾದೇಶ್ ಬರ್ನೇಯವನ್ನು ಬಿಟ್ಟಂದಿನಿಂದ ಜೆರೆದ್ ಹಳ್ಳವನ್ನು ದಾಟಿದವರೆಗೆ ಗತಿಸಿದ ಕಾಲವು ಮೂವತ್ತೆಂಟು ವರ್ಷ. ಯೆಹೋವ ದೇವರು ಅವರಿಗೆ ಪ್ರಮಾಣ ಮಾಡಿದ ಪ್ರಕಾರ ಅಷ್ಟರಲ್ಲಿ ಆ ಸಂತತಿಯ ಸೈನಿಕರೆಲ್ಲರು ಸತ್ತುಹೋಗಿದ್ದರು. ಅಧ್ಯಾಯವನ್ನು ನೋಡಿ |
‘ಈಜಿಪ್ಟಿನಿಂದ ಬಂದ ಈ ಜನರಲ್ಲಿ ಮತ್ತು ಇಪ್ಪತ್ತು ವರ್ಷ ಮೊದಲುಗೊಂಡು ಅದಕ್ಕಿಂತ ಹೆಚ್ಚು ವಯಸ್ಸಾದ ನಿಮ್ಮವರೆಲ್ಲಾ ಕೆನಿಜ್ಜೀಯನಾದ ಯೆಫುನ್ನೆಯ ಮಗ ಕಾಲೇಬನ ಮತ್ತು ನೂನನ ಮಗನಾದ ಯೆಹೋಶುವನ ಹೊರತು ಯಾರೂ ನನ್ನನ್ನು ನಿಜವಾಗಿಯೂ ಅನುಸರಿಸದೆ ಹೋದದ್ದರಿಂದ, ನಾನು ಅಬ್ರಹಾಮ್, ಇಸಾಕ್, ಯಾಕೋಬರಿಗೆ ಪ್ರಮಾಣಪೂರ್ವಕವಾಗಿ ಕೊಟ್ಟ ದೇಶವನ್ನು ಅವರಿಬ್ಬರೇ ಹೊರತು ಬೇರೆ ಯಾರೂ ನೋಡುವುದೇ ಇಲ್ಲ’ ಎಂದು ಖಂಡಿತವಾಗಿ ಹೇಳಿದನು.
ಯೆಹೋಶುವನು ಸುನ್ನತಿ ಮಾಡಲು ಕಾರಣವೇನೆಂದರೆ: ಈಜಿಪ್ಟನ್ನು ಬಿಟ್ಟುಹೊರಟಾಗ ಸೈನ್ಯಸೇರಲು ಯೋಗ್ಯರಾದ ಇಸ್ರೇಲಿನ ಗಂಡಸರಿಗೆ ಸುನ್ನತಿಯಾಗಿತ್ತು. ಅವರು ಮರುಭೂಮಿಯಲ್ಲಿದ್ದಾಗ ಅನೇಕ ಯುದ್ಧವೀರರು ಯೆಹೋವನಿಗೆ ಕಿವಿಗೂಡಲಿಲ್ಲ. ಆದಕಾರಣ, “ಹಾಲೂ ಜೇನೂ ಹರಿಯುವ ವಾಗ್ದತ್ತ ನಾಡನ್ನು” ಆ ಜನರು ಕಾಣುವುದಿಲ್ಲ ಎಂದು ಯೆಹೋವನು ಪ್ರಮಾಣ ಮಾಡಿದನು. ನಮ್ಮ ಪೂರ್ವಿಕರಿಗೆ ಆ ಭೂಮಿಯನ್ನು ಕೊಡುವುದಾಗಿ ಯೆಹೋವನು ವಾಗ್ದಾನ ಮಾಡಿದ್ದನು. ಆದರೆ ಆ ಜನರು ಯೆಹೋವನ ಮಾತನ್ನು ಕೇಳದೆ ಅವಿಧೇಯರಾದ ಕಾರಣ ಆತನು ಅವರನ್ನು ನಲವತ್ತು ವರ್ಷಗಳ ಕಾಲ ಅಂದರೆ ಆ ಯೋಧರು ಸಾಯುವವರೆಗೆ ಮರುಭೂಮಿಯಲ್ಲಿ ಅಲೆದಾಡುವಂತೆ ಮಾಡಿದನು. ಆ ಎಲ್ಲ ಯುದ್ಧವೀರರು ಸತ್ತುಹೋದರು ಮತ್ತು ಅವರ ಸ್ಥಾನಕ್ಕೆ ಅವರ ಗಂಡುಮಕ್ಕಳು ಬಂದರು. ಆದರೆ ಈಜಿಪ್ಟಿನಿಂದ ಹೊರಟು ಮರುಭೂಮಿಯಲ್ಲಿ ಪ್ರಯಾಣ ಮಾಡುತ್ತಿದ್ದಾಗ ಹುಟ್ಟಿದ ಯಾವ ಗಂಡುಮಕ್ಕಳಿಗೂ ಸುನ್ನತಿ ಆಗಿರಲಿಲ್ಲ. ಅದಕ್ಕಾಗಿ ಯೆಹೋಶುವನು ಅವರಿಗೆ ಸುನ್ನತಿ ಮಾಡಿಸಿದನು.