Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 2:18 - ಪರಿಶುದ್ದ ಬೈಬಲ್‌

18 ‘ಈ ಹೊತ್ತು ಆರ್ ಎಂಬ ಪಟ್ಟಣದ ಗಡಿಯನ್ನು ದಾಟಿ ಮೋವಾಬ್ ದೇಶವನ್ನು ಪ್ರವೇಶಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 “ನೀವು ಈಗ ಮೋವಾಬ್ಯರ ಪ್ರಾಂತ್ಯವಾಗಿರುವ ಆರ್ ಎಂಬ ಪ್ರದೇಶವನ್ನು ದಾಟುವವರಾಗಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ‘ನೀವು ಈಗ ಮೋವಾಬ್ಯರ ಪ್ರಾಂತ್ಯವಾಗಿರುವ ಆರ್ ಎಂಬ ಪ್ರದೇಶವನ್ನು ದಾಟುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 “ಇಂದು ನೀನು ಮೋವಾಬಿನ ಮೇರೆಯಾದ ಆರ್ ಎಂಬ ಸ್ಥಳವನ್ನು ದಾಟಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 2:18
7 ತಿಳಿವುಗಳ ಹೋಲಿಕೆ  

ಆದರೆ ಅರಸನಾದ ಸೀಹೋನನು ಇಸ್ರೇಲರಿಗೆ ತನ್ನ ದೇಶದ ಮೂಲಕ ಹಾದುಹೋಗಲು ಬಿಡಲಿಲ್ಲ. ಅರಸನು ತನ್ನ ಇಡೀ ಸೈನ್ಯವನ್ನು ಕೂಡಿಸಿಕೊಂಡು ಇಸ್ರೇಲರ ವಿರುದ್ಧ ಯುದ್ಧಮಾಡಲು ಮರುಭೂಮಿಯ ಕಡೆಗೆ ಹೊರಟನು. ಅವನು ಯಹಜ್ ಎಂಬಲ್ಲಿಗೆ ಬಂದನು; ಅಲ್ಲಿ ರಾಜನ ಸೈನ್ಯವು ಇಸ್ರೇಲರಿಗೆ ವಿರೋಧವಾಗಿ ಯುದ್ಧಮಾಡಿತು.


ಇದು ಮೋವಾಬನ್ನು ಕುರಿತ ದುಃಖಕರವಾದ ಸಂದೇಶ: ಒಂದು ರಾತ್ರಿ ಮೋವಾಬಿನ ಆರ್ ಪಟ್ಟಣದಿಂದ ಸಂಪತ್ತನ್ನು ಸೈನ್ಯವು ಸೂರೆ ಮಾಡಿತು. ಆ ರಾತ್ರಿ ನಗರವು ನಾಶಮಾಡಲ್ಪಟ್ಟಿತು. ಒಂದು ರಾತ್ರಿ ಸೈನ್ಯವು ಮೋವಾಬಿನ ಕೀರ್ ಪಟ್ಟಣದಿಂದ ಸಂಪತ್ತನ್ನು ಸೂರೆ ಮಾಡಿತು. ಆ ರಾತ್ರಿ ಪಟ್ಟಣವು ಕೆಡವಲ್ಪಟ್ಟಿತು.


ಆರ್ ವಸತಿ ಪ್ರದೇಶಕ್ಕೆ ನಡೆಸುವ ಮೋವಾಬಿನ ಗಡಿಯ ಉದ್ದಕ್ಕೂ ಇರುವ ಕಣಿವೆಗಳನ್ನು ದಾಟಿದ್ದಾಯಿತು” ಎಂದು ಬರೆದಿದೆ.


“ಯೆಹೋವನು ನನಗೆ ಹೀಗೆ ಹೇಳಿದನು: ‘ಮೋವಾಬಿನ ಜನರಿಗೆ ತೊಂದರೆ ಕೊಡಬೇಡ. ಅವರ ವಿರುದ್ಧ ಯುದ್ಧಕ್ಕೆ ಹೋಗಬೇಡ; ಅವರ ದೇಶದಲ್ಲಿ ನಿಮಗೆ ಯಾವ ಪಾಲೂ ಸಿಗದು. ಅವರು ಲೋಟನ ಸಂತತಿಯವರು. ನಾನು ಅವರಿಗೆ ಆರ್ ಪಟ್ಟಣವನ್ನು ಕೊಟ್ಟಿರುತ್ತೇನೆ.’”


ಯೆಹೋವ ದೇವರು ನನಗೆ ಹೇಳಿದ್ದೇನೆಂದರೆ:


“ತರುವಾಯ ಇಸ್ರೇಲರು ಮರುಭೂಮಿಯಲ್ಲಿ ಪ್ರಯಾಣ ಮಾಡಿ ಎದೋಮ್ ಮತ್ತು ಮೋವಾಬ್ ದೇಶಗಳ ಮೇರೆಗಳನ್ನು ಸುತ್ತಿ ಬಂದರು. ಇಸ್ರೇಲರು ಮೋವಾಬ್ ದೇಶದ ಪೂರ್ವದಿಕ್ಕಿಗೆ ಪ್ರಯಾಣಮಾಡಿ ಅರ್ನೋನ್ ನದಿಯ ಆಚೆಯ ದಡದಲ್ಲಿ ಇಳಿದುಕೊಂಡರು. ಅವರು ಮೋವಾಬ್ ದೇಶದ ಮೇರೆಯನ್ನು ದಾಟಲಿಲ್ಲ. (ಅರ್ನೋನ್ ನದಿಯು ಮೋವಾಬ್ ದೇಶದ ಮೇರೆಯಾಗಿತ್ತು.)


ಅವರು ಅಲ್ಲಿಂದ ಹೊರಟು ಅರ್ನೋನ್ ಹೊಳೆಯ ಆಚೆ ಕಡೆಯಲ್ಲಿ ಅಂದರೆ ಅಮೋರಿಯರ ಪ್ರದೇಶದೊಳಗೆ ವಿಸ್ತರಿಸಿರುವ ಮರುಭೂಮಿಯಲ್ಲಿ ಪಾಳೆಯ ಮಾಡಿಕೊಂಡರು. ಅರ್ನೋನ್ ನದಿಯು ಮೋವಾಬ್ಯರಿಗೂ ಅಮೋರಿಯರಿಗೂ ಗಡಿಯಾಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು