ಧರ್ಮೋಪದೇಶಕಾಂಡ 2:19 - ಪರಿಶುದ್ದ ಬೈಬಲ್19 ನೀನು ಅಮ್ಮೋನಿಯರ ಬಳಿಗೆ ಹೋಗಬೇಕು. ಆದರೆ ಅವರಿಗೆ ತೊಂದರೆ ಕೊಡಬೇಡ. ಅವರೊಂದಿಗೆ ಯುದ್ಧಮಾಡಬೇಡ. ಯಾಕೆಂದರೆ ಅವರ ದೇಶದಲ್ಲಿ ನಿನಗೆ ಪಾಲಿಲ್ಲ. ಅವರು ಲೋಟನ ಸಂತತಿಯವರು, ಆ ದೇಶವನ್ನು ನಾನು ಅವರಿಗೆ ಕೊಟ್ಟಿರುತ್ತೇನೆ.’” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಮುಂದೆ ನೀವು ಅಮೋನಿಯರ ಹತ್ತಿರಕ್ಕೆ ಬರುವಾಗ ಅವರಿಗೆ ತೊಂದರೆಪಡಿಸಲೂ ಬೇಡಿರಿ, ಅವರಿಗೆ ವೈರಿಗಳಾಗಿ ನಡೆದು ಯುದ್ಧಮಾಡಲೂಬೇಡಿರಿ. ನಾನು ಆ ದೇಶವನ್ನು ಲೋಟನ ವಂಶದವರಾದ ಅಮ್ಮೋನಿಯರಿಗೆ ಸ್ವತ್ತಾಗಿ ಕೊಟ್ಟಿರುವುದರಿಂದ ನಿಮಗೆ ಅದರಲ್ಲಿ ಯಾವ ಭಾಗವನ್ನಾದರೂ ಕೊಡುವುದಿಲ್ಲ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಮುಂದೆ ನೀವು ಅಮ್ಮೋನಿಯರ ಹತ್ತಿರಕ್ಕೆ ಬರುವಾಗ ಅವರಿಗೆ ವೈರಿಗಳಾಗಿ ನಡೆದು ಯುದ್ಧಮಾಡಬೇಡಿ. ನಾನು ಆ ನಾಡನ್ನು ಲೋಟನ ವಂಶದವರಾದ ಅಮ್ಮೋನಿಯರಿಗೆ ಸೊತ್ತಾಗಿ ಕೊಟ್ಟಿದ್ದೇನೆ. ಆದುದರಿಂದ ನಿಮಗೆ ಅದರಲ್ಲಿ ಕಿಂಚಿತ್ತು ಭಾಗವನ್ನೂ ಕೊಡುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಮುಂದೆ ನೀವು ಅಮ್ಮೋನಿಯರ ಹತ್ತಿರಕ್ಕೆ ಬರುವಾಗ ಅವರಿಗೆ ವೈರಿಗಳಾಗಿ ನಡೆದು ಯುದ್ಧಮಾಡಬೇಡಿರಿ. ನಾನು ಆ ದೇಶವನ್ನು ಲೋಟನ ವಂಶದವರಾದ ಅಮ್ಮೋನಿಯರಿಗೆ ಸ್ವಾಸ್ತ್ಯವಾಗಿ ಕೊಟ್ಟಿರುವದರಿಂದ ನಿಮಗೆ ಅದರಲ್ಲಿ ಎಷ್ಟು ಭಾಗವನ್ನಾದರೂ ಕೊಡುವದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಅಮ್ಮೋನ್ಯರ ಹತ್ತಿರಕ್ಕೆ ನೀವು ಬಂದಾಗ, ಅವರಿಗೆ ಕಿರುಕುಳ ನೀಡಬೇಡಿರಿ ಅಥವಾ ಅವರನ್ನು ಯುದ್ಧಕ್ಕೆ ಪ್ರಚೋದಿಸಬೇಡಿರಿ. ನಾನು ಆ ದೇಶವನ್ನು ಲೋಟನ ವಂಶದವರಾದ ಅಮ್ಮೋನಿಯರಿಗೆ ಸೊತ್ತಾಗಿ ಕೊಟ್ಟಿರುವದರಿಂದ ನಿಮಗೆ ಅದರಲ್ಲಿ ಯಾವ ಭಾಗವನ್ನೂ ಕೊಡುವುದಿಲ್ಲ” ಎಂದರು. ಅಧ್ಯಾಯವನ್ನು ನೋಡಿ |