ಧರ್ಮೋಪದೇಶಕಾಂಡ 2:23 - ಪರಿಶುದ್ದ ಬೈಬಲ್23 ಕಫ್ತೋರ್ಯದವರಿಗೂ ದೇವರು ಅದೇ ರೀತಿ ಮಾಡಿದ್ದನು. ಗಾಜಾದ ಸುತ್ತಲಿನ ಪಟ್ಟಣಗಳಲ್ಲಿ ಅವ್ವಿಯ ಜನರು ವಾಸಿಸುತ್ತಿದ್ದರು. ಆದರೆ ಕಫ್ತೋರ್ಯದಿಂದ ಬಂದ ಜನರು ಅವ್ವಿಯರನ್ನು ನಾಶಮಾಡಿ ಅವರ ದೇಶದಲ್ಲಿ ಈಗಲೂ ಅವರು ವಾಸಿಸಿರುತ್ತಾರೆ.) ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಮತ್ತು ಹೇಗೆ ಕಫ್ತೋರಿಂದ ಬಂದ ಕಫ್ತೋರ್ಯರು ಗಾಜಾ ಪಟ್ಟಣದವರೆಗೂ ಹಳ್ಳಿಗಳಲ್ಲಿದ್ದ ಅವ್ವಿಯರನ್ನು ನಾಶಮಾಡಿ ಅವರ ಸ್ಥಳದಲ್ಲಿ ವಾಸಮಾಡಿದರೋ, ಹಾಗೆಯೇ ಯೆಹೋವನು ರೆಫಾಯರನ್ನು ಅಮ್ಮೋನಿಯರ ನಾಡಿನಿಂದ ಹೊರಗೆ ಹೋಗುವಂತೆ ಮಾಡಿದನು. ಅಮ್ಮೋನಿಯರು ಆ ದೇಶವನ್ನು ಸ್ವಾಧೀನಮಾಡಿಕೊಂಡು ಅವರಲ್ಲಿ ವಾಸಮಾಡ ತೊಡಗಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ಮತ್ತು ಹೇಗೆ ಕಫ್ತೋರಿಂದ ಬಂದ ಕಫ್ತೋರ್ಯರು ಗಾಜಾ ಪಟ್ಟಣದವರೆಗೂ ಹಳ್ಳಿಗಳಲ್ಲಿದ್ದ ಅವ್ವಿಯರನ್ನು ನಾಶಮಾಡಿ ಅವರ ಸ್ಥಳದಲ್ಲಿ ವಾಸಮಾಡಿದರೋ, ಹಾಗೆಯೇ ಸರ್ವೇಶ್ವರ ರೆಫಾಯರನ್ನು ಅಮ್ಮೋನಿಯರ ಬಳಿಯಿಂದ ಹೊರದೂಡಿದರು; ಅಮ್ಮೋನಿಯರು ಆ ನಾಡನ್ನು ಸ್ವಾಧೀನಮಾಡಿಕೊಂಡು ಅದರಲ್ಲಿ ವಾಸಿಸಿದರು.) ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ಮತ್ತು ಹೇಗೆ ಕಫ್ತೋರಿಂದ ಬಂದ ಕಫ್ತೋರ್ಯರು ಗಾಜಾ ಪಟ್ಟಣದವರೆಗೂ ಹಳ್ಳಿಗಳಲ್ಲಿದ್ದ ಅವ್ವಿಯರನ್ನು ನಾಶಮಾಡಿ ಅವರ ಸ್ಥಳದಲ್ಲಿ ವಾಸಮಾಡಿದರೋ ಹಾಗೆಯೇ ಯೆಹೋವನು ರೆಫಾಯರನ್ನು ಅಮ್ಮೋನಿಯರ ಎದುರಿನಿಂದ ಹೊರಡಿಸಿದನು; ಅಮ್ಮೋನಿಯರು ಆ ದೇಶವನ್ನು ಸ್ವಾಧೀನಮಾಡಿಕೊಂಡು ಅದರಲ್ಲಿ ವಾಸಿಸಿದರು.) ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ಹಾಗೆ ಗಾಜಾ ಪಟ್ಟಣದವರೆಗೂ ವಾಸವಾಗಿದ್ದ ಅವ್ವೀಯರನ್ನು ಕಫ್ತೋರಿಂದ ಬಂದ ಕಫ್ತೋರ್ಯರು ನಾಶಮಾಡಿ, ಅವರ ಬದಲಾಗಿ ವಾಸಿಸಿದರು. ಅಧ್ಯಾಯವನ್ನು ನೋಡಿ |